

ಕೋಲ್ಕತ್ತಾ: ಕೋಲ್ಕತ್ತಾದ ಈಡನ್ ಗಾರ್ಡನ್ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಐಸಿಸಿ ಟಿ-20 ವಿಶ್ವಕಪ್ ಸೂಪರ್-8 ಪಂದ್ಯದಲ್ಲಿ ಅತ್ಯುತ್ತಮ ಬ್ಯಾಟಿಂಗ್ ಮೂಲಕ ಭಾರತವನ್ನು ಸೆಮಿಫೈನಲ್ ಗೆ ತಲುಪಿಸಿದ ಸಂಜು ಸ್ಯಾಮ್ಸನ್‌ಗೆ ಟೀಂ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಮತ್ತು ಮುಖ್ಯ ಕೋಚ್ ಗೌತಮ್ ಗಂಭೀರ್ ನೀಡಿದ ಗೌರವ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ. ಈ ಇಬ್ಬರ ನಡೆಯನ್ನು ನೆಟ್ಟಿಗರು ಪ್ರಶಂಸಿಸುತ್ತಿದ್ದಾರೆ.
ಹೌದು. 50 ಎಸೆತಗಳಲ್ಲಿ 97 ರನ್ ಗಳಿಸಿದ ಸ್ಯಾಮ್ಸನ್, ಟೀಂ ಇಂಡಿಯಾ ಟಿ-20 ವಿಶ್ವಕಪ್ ಸೆಮಿಫೈನಲ್ ಪ್ರವೇಶಿಸುವಲ್ಲಿ ಮಹತ್ತರ ಕೊಡುಗೆ ನೀಡಿದರು. ಮಾರ್ಚ್ 5 ರಂದು ಮುಂಬೈನಲ್ಲಿ ಇಂಗ್ಲೆಂಡ್ ವಿರುದ್ಧ ಸೆಮಿಫೈನಲ್ ಹಣಾಹಣಿಯಲ್ಲಿ ಹೋರಾಡಲು 12 ಬೌಂಡರಿಗಳು ಮತ್ತು ನಾಲ್ಕು ಸಿಕ್ಸರ್ ಮೂಲಕ ಭಾರತ ಗೆಲ್ಲುವಂತೆ ಮಾಡಿದರು.
ಪಂದ್ಯ ಗೆಲ್ಲುತ್ತಿದ್ದಂತೆಯೇ ಸಂಜು ಸ್ಯಾಮ್ಸನ್ ಡಗೌಟ್ ಕಡೆಗೆ ಹೋಗುತ್ತಿರುವಾಗ ಭಾರತ ತಂಡದ ನಾಯಕ ಸೂರ್ಯಕುಮಾರ್ ಯಾದವ್ ತಮ್ಮ ಹ್ಯಾಟ್ ತೆಗೆದು ತಲೆಬಾಗಿಸುವ ಮೂಲಕ ಸಂಜು ಸ್ಯಾಮ್ಸನ್ ಅವರನ್ನು ಅಪ್ಪಿಕೊಂಡರು. ತದನಂತರ ಮುಖ್ಯ ತರಬೇತುದಾರ ಗೌತಮ್ ಗಂಭೀರ್ ಕೂಡಾ ಇದೇ ರೀತಿಯ ಅಪ್ಪುಗೆ ನೀಡಿದರು.
ಈ ಇಬ್ಬರ ಆಟಗಾರರು ನಡೆ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ. ಪಂದ್ಯದ ನಂತರ ಮಾತನಾಡಿದ ಗಂಭೀರ್, ಸ್ಯಾಮ್ಸನ್ ಅವರನ್ನು ಹೊಗಳಿದರು, ತಂಡಕ್ಕೆ ಹೆಚ್ಚು ಅಗತ್ಯವಿರುವಾಗ ವಿಕೆಟ್ ಕೀಪರ್-ಬ್ಯಾಟರ್ ಅತ್ಯುತ್ತಮ ಬ್ಯಾಟಿಂಗ್ ಮಾಡಿದರು. ಸಂಜು ಸ್ಯಾಮ್ಸನ್ ವಿಶ್ವ ದರ್ಜೆಯ ಆಟಗಾರ ಎಂದು ಬಣ್ಣಿಸಿದರು.
ಸ್ಯಾಮ್ಸನ್ ಅಂತಿಮವಾಗಿ 97 ರನ್ ಗಳಿಸಿ ಶತಕದಿಂದ ವಂಚಿತರಾದರು. ಈ ಮೂಲಕ 2016 ರಲ್ಲಿ ಆಸ್ಟ್ರೇಲಿಯಾ ವಿರುದ್ಧ ಮೊಹಾಲಿಯಲ್ಲಿ ಮತ್ತು 2022 ರಲ್ಲಿ ಮೆಲ್ಬೋರ್ನ್‌ನಲ್ಲಿ ಪಾಕಿಸ್ತಾನದ ವಿರುದ್ಧ ವಿರಾಟ್ ಕೊಹ್ಲಿ ಗಳಿಸಿದ ಅಜೇಯ 82 ರನ್ ಗಳ ದಾಖಲೆಯನ್ನು ಮುರಿದ ಸಂಜು ಸ್ಯಾಮ್ಸನ್, T20 ವಿಶ್ವಕಪ್‌ನಲ್ಲಿ ರನ್ ಚೇಸ್‌ನಲ್ಲಿ ಭಾರತದ ಪರ ಅತ್ಯಧಿಕ ರನ್ ಗಳಿಸಿದ ಆಟಗಾರ ಎನಿಸಿಕೊಂಡರು.
Advertisement