IPL 2026: RCB ಅಭಿಮಾನಿಗಳಿಗೆ ಗುಡ್ ನ್ಯೂಸ್! ಅನುಮಾನಕ್ಕೆ ತೆರೆ

ಬೆಂಗಳೂರಿನ ಹೆಮ್ಮೆಯ ‘ಚಿನ್ನಸ್ವಾಮಿ ಕ್ರೀಡಾಂಗಣ’ ಆರ್‌ಸಿಬಿ ಪಂದ್ಯಗಳಿಗೆ ಆತಿಥ್ಯ ವಹಿಸುವುದು ಖಚಿತವಾಗಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐದು ಲೀಗ್ ಪಂದ್ಯಗಳು ನಡೆಯಲಿವೆ
 M. Chinnaswamy Stadium
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣ
Updated on

ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB)ಅಭಿಮಾನಿಗಳಿಗೆ ಗುಡ್ ನ್ಯೂಸ್ ಸಿಕ್ಕಿದೆ. ಈ ಬಾರಿ ಬೆಂಗಳೂರಿನಲ್ಲಿ IPL ಪಂದ್ಯ ನಡೆಯಲಿದೆಯೋ ಅಥವಾ ಇಲ್ಲವೋ ಎಂಬ ಅನುಮಾನಕ್ಕೆ ತೆರೆ ಬಿದ್ದಿದೆ.

ಬೆಂಗಳೂರಿನ ಹೆಮ್ಮೆಯ ‘ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿಯೇ ಉದ್ಘಾಟನಾ ಪಂದ್ಯ ನಡೆಯಲಿದ್ದು, ಆರ್‌ಸಿಬಿ ಪಂದ್ಯಗಳಿಗೆ ಆತಿಥ್ಯ ವಹಿಸುವುದು ಖಚಿತವಾಗಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐದು ಲೀಗ್ ಪಂದ್ಯಗಳು ನಡೆಯಲಿವೆ

ಆರ್‌ಸಿಬಿ ಮ್ಯಾನೇಜ್‌ಮೆಂಟ್ ಕೈಗೊಂಡ ನಿರ್ಧಾರದಂತೆ ಈ ಸೀಸನ್‌ನ ಒಟ್ಟು 7 ತವರು ಪಂದ್ಯಗಳಲ್ಲಿ (Home Matches) 5 ಪಂದ್ಯಗಳು ಬೆಂಗಳೂರಿನಲ್ಲಿ ನಡೆಯಲಿವೆ. ಉಳಿದ 2 ಪಂದ್ಯಗಳನ್ನು ಛತ್ತೀಸ್‌ಗಢದ ರಾಯ್‌ಪುರದಲ್ಲಿರುವ ಶಹೀದ್ ವೀರ್ ನಾರಾಯಣ್ ಸಿಂಗ್ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಆಯೋಜಿಸಲು ತೀರ್ಮಾನಿಸಲಾಗಿದೆ.

ಭದ್ರತೆ ಮತ್ತು ತಾಂತ್ರಿಕ ಸವಾಲುಗಳನ್ನು ಸರಿದೂಗಿಸಲು ಈ ಹಂಚಿಕೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

KSCA ಅಧ್ಯಕ್ಷ ವೆಂಕಟೇಶ್ ಪ್ರಸಾದ್ ಹಾಗೂ ಆರ್‌ಸಿಬಿಯ ರಾಜೇಶ್ ಮೆನನ್ ನೇತೃತ್ವದ ನಿಯೋಗವು ರಾಜ್ಯದ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರನ್ನು ಭೇಟಿ ಮಾಡಿ ಸುದೀರ್ಘ ಚರ್ಚೆ ನಡೆಸಿತು. ಕ್ರೀಡಾಂಗಣದ ಸುರಕ್ಷತೆ ಮತ್ತು ನ್ಯಾ. ಕುನ್ಹಾ ಸಮಿತಿಯ ಶಿಫಾರಸುಗಳನ್ನು ಅಳವಡಿಸಿಕೊಳ್ಳುವ ಬಗ್ಗೆ ನಿಯೋಗವು ಸರ್ಕಾರಕ್ಕೆ ಭರವಸೆ ನೀಡಿತ್ತು.

 M. Chinnaswamy Stadium
IPL 2026: ಮಾರ್ಚ್ 28ಕ್ಕೆ ಉದ್ಘಾಟನಾ ಪಂದ್ಯ, ಮೇ 31ಕ್ಕೆ ಫೈನಲ್ ಪಂದ್ಯ!

ಅದರಂತೆ ಪಂದ್ಯಗಳನ್ನು ಇದೀಗ KSCA ಮತ್ತು RCB ಮ್ಯಾನೇಜ್‌ಮೆಂಟ್ ಕಸರತ್ತು ನಡೆಸಿ, ಪಂದ್ಯಗಳನ್ನು ಬೆಂಗಳೂರಿನಲ್ಲೇ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿವೆ.

ಕಳೆದ ಬಾರಿಯ ಚಾಂಪಿಯನ್ನರG ತವರು ನೆಲದಲ್ಲಿ ಉದ್ಘಾಟನಾ ಪಂದ್ಯ ನಡೆಯುವುದು ವಾಡಿಕೆ. ಅದರಂತೆ ಈ ಬಾರಿಯೂ ಅದ್ಧೂರಿ ಆರಂಭಕ್ಕೆ ಸಿದ್ಧತೆಗಳು ಆರಂಭವಾಗಿವೆ. ಮಾರ್ಚ್ 17ರಿಂದ ಅಧಿಕೃತವಾಗಿ ಐಪಿಎಲ್ ಪಂದ್ಯಗಳು ಆರಂಭವಾಗುವ ಸಾಧ್ಯತೆಯಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com