

ಅಹ್ಮದಾಬಾದ್: ಐಸಿಸಿ ಟ20 ವಿಶ್ವಕಪ್ ಫೈನಲ್ ನಲ್ಲಿ ನ್ಯೂಜಿಲೆಂಡ್ ತಂಡವನ್ನು ಮಣಿಸಿ ಮೂರನೇ ಬಾರಿಗೆ ಟಿ20 ವಿಶ್ವಕಪ್ ಗೆದ್ದ ಭಾರತ ತಂಡಕ್ಕೆ ಕೊನೆಗೂ ದೊಡ್ಡ ಮೊತ್ತದ ಕ್ಯಾಶ್ ರಿವಾರ್ಡ್ ದೊರೆತಿದೆ.
ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಟಿ20 ವಿಶ್ವಕಪ್ನ ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡು 255 ರನ್ ಕಲೆಹಾಕಿತು.
ಈ ಗುರಿಯನ್ನು ಬೆನ್ನತ್ತಿದ ನ್ಯೂಝಿಲೆಂಡ್ ತಂಡವು 19 ಓವರ್ಗಳಲ್ಲಿ 159 ರನ್ ಬಾರಿಸಿ ಆಲೌಟ್ ಆಯಿತು. ಆ ಮೂಲಕ ಭಾರತ 96 ರನ್ ಗಳ ಅಂತರದಲ್ಲಿ ಭರ್ಜರಿ ಜಯ ದಾಖಲಿಸಿ ಸತತ 2ನೇ ಟಿ20 ವಿಶ್ವಕಪ್ ಮತ್ತು ಒಟ್ಟಾರೆ 3ನೇ ವಿಶ್ವಕಪ್ ಗೆ ಮುತ್ತಿಟ್ಟಿದೆ.
ಬಿಸಿಸಿಐ ಕ್ಯಾಶ್ ರಿವಾರ್ಡ್
ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಫೈನಲ್‌ನಲ್ಲಿ ನ್ಯೂಝಿಲೆಂಡ್ ತಂಡವನ್ನು ಸೋಲಿಸುವ ಮೂಲಕ ಭಾರತ ಪ್ರತಿಷ್ಠಿತ ಟ್ರೋಫಿಯನ್ನು ಎತ್ತಿಹಿಡಿದಿದೆ. ಈ ಮೂಲಕ ಟಿ20 ವಿಶ್ವಕಪ್ ಇತಿಹಾಸದಲ್ಲೇ ಪ್ರಶಸ್ತಿ ಉಳಿಸಿಕೊಂಡ ಮೊದಲ ತಂಡವಾಗಿ ಟೀಮ್ ಇಂಡಿಯಾ ಐತಿಹಾಸಿಕ ಸಾಧನೆ ಮಾಡಿದೆ.
ಈ ಮೂಲಕ ಮೂರನೇ ಬಾರಿ ಟಿ20 ವಿಶ್ವಕಪ್ ಮುಡಿಗೇರಿಸಿಕೊಂಡಿದೆ. ಈ ಐತಿಹಾಸಿಕ ಸಾಧನೆಗಾಗಿ ಮಂಡಳಿಯು ಆಟಗಾರರು, ಸಹಾಯಕ ಸಿಬ್ಬಂದಿ ಮತ್ತು ಆಯ್ಕೆದಾರರನ್ನು ಮತ್ತೊಮ್ಮೆ ಅಭಿನಂದಿಸುತ್ತದೆ ಮತ್ತು ಭವಿಷ್ಯದಲ್ಲಿ ಅವರಿಗೆ ಯಶಸ್ಸು ಮುಂದುವರಿಯಲಿ ಎಂದು ಹಾರೈಸುತ್ತದೆ ಎಂದು ಬಿಸಿಸಿಐ ಪ್ರಕಟಣೆಯಲ್ಲಿ ತಿಳಿಸಿದೆ.
131 ಕೋಟಿ ರೂ ಬಹುಮಾನ ಘೋಷಣೆ
ಇದೇ ವೇಳೆ ಟಿ20 ವಿಶ್ವಕಪ್‌ನಲ್ಲಿ ಜಯಗಳಿಸಿದ ಟೀಮ್ ಇಂಡಿಯಾಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) 131 ಕೋಟಿ ರೂಪಾಯಿ ನಗದು ಬಹುಮಾನವನ್ನು ನೀಡಲಿದೆ ಎಂದು ಘೋಷಿಸಿದೆ.
ಟಿ20 ವಿಶ್ವಕಪ್ ಗೆದ್ದ ಟೀಮ್ ಇಂಡಿಯಾಗೆ ಬಿಸಿಸಿಐ ಬರೋಬ್ಬರಿ 131 ಕೋಟಿ ರೂ. ನಗದು ಬಹುಮಾನ ಘೋಷಿಸಿದೆ. ಈ ಬಹುಮಾನ ಮೊತ್ತವನ್ನು ಭಾರತ ತಂಡದ ಆಟಗಾರರಿಗೆ ಮತ್ತು ಸಿಬ್ಬಂದಿ ವರ್ಗಗಳಿಗೆ ಹಂಚಲಾಗುವುದು ಎಂದು ಬಿಸಿಸಿಐ ತನ್ನ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.
2024ರ ಟಿ20 ವಿಶ್ವಕಪ್ ಗೆದ್ದ ಭಾರತ ತಂಡಕ್ಕೆ 125 ಕೋಟಿ ರೂ. ಬಹುಮಾನ ಮೊತ್ತ ನೀಡಲಾಗಿತ್ತು. ಈ ಬಾರಿ 6 ಕೋಟಿ ರೂ. ಹೆಚ್ಚಿಸಲಾಗಿದೆ. ಅದರಂತೆ ಟೀಮ್ ಇಂಡಿಯಾ ಬರೋಬ್ಬರಿ 131 ಕೋಟಿ ರೂ.ಗಳ ನಗದು ಬಹುಮಾನ ಪಡೆಯಲಿದ್ದಾರೆ.
ಇತ್ತ ಟಿ20 ವಿಶ್ವಕಪ್ ಗೆದ್ದ ಭಾರತ ತಂಡಕ್ಕೆ ಐಸಿಸಿ ಕಡೆಯಿಂದ ಸಿಕ್ಕಿರುವುದು 27.60 ಕೋಟಿ ರೂ. ಮಾತ್ರ. ಇದೀಗ ಚಾಂಪಿಯನ್ ಪಟ್ಟ ಅಲಂಕರಿಸಿದ ಟೀಮ್ ಇಂಡಿಯಾಗೆ ಭಾರತೀಯ ಕ್ರಿಕೆಟ್ ಬೋರ್ಡ್ ದುಪ್ಪಟ್ಟು ಮೊತ್ತದ ಬಹುಮಾನ ಘೋಷಿಸಿ ಗಮನ ಸೆಳೆದಿದ್ದಾರೆ.
Advertisement