IPL 2026: ಬೆಂಗಳೂರಿನ ಚಿನ್ನಸ್ವಾಮಿಯಲ್ಲಿ ಉದ್ಘಾಟನಾ ಪಂದ್ಯ; ಮಾರ್ಚ್ 28 ರಂದು RCB vs SRH

ಮರುದಿನ ಮುಂಬೈನಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾಗಲಿವೆ.
IPL 2026 First Match: RCB vs SRH to kick off season in Bengaluru on March 28
ಆರ್ ಸಿಬಿ(ಸಂಗ್ರಹ ಚಿತ್ರ)
Updated on

ಬೆಂಗಳೂರು: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಬುಧವಾರ ಇಂಡಿಯನ್ ಪ್ರೀಮಿಯರ್ ಲೀಗ್ 2026ರ 19 ಆವೃತ್ತಿಯ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಉದ್ಘಾಟನಾ ಪಂದ್ಯ ನಡೆಯಲಿದೆ.

ಬಿಸಿಸಿಐ, ಐಪಿಎಲ್‌ನ 19ನೇ ಆವೃತ್ತಿಯ ಮೊದಲ ಹಂತದ 20 ಪಂದ್ಯಗಳ ವೇಳಾಪಟ್ಟಿಯನ್ನು ಇಂದು ಬಿಡುಗಡೆ ಮಾಡಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು(RCB), ಸನ್‌ರೈಸರ್ಸ್ ಹೈದರಾಬಾದ್(SRH) ವಿರುದ್ಧ ಮೊದಲ ಪಂದ್ಯ ಆಡಲಿದೆ.

ಮರುದಿನ ಮುಂಬೈನಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾಗಲಿವೆ.

ಮೊದಲ ಹಂತದ ಪಂದ್ಯಗಳು ಮಾರ್ಚ್ 28ರಿಂದ ಏಪ್ರಿಲ್ 12ರವರೆಗೆ ನಡೆಯಲಿವೆ.

ಕೇಂದ್ರ ಚುನಾವಣಾ ಆಯೋಗವು ಐದು ರಾಜ್ಯಗಳ ವಿಧಾನಸಭೆ ಚುನಾವಣೆಯ ದಿನಾಂಕವನ್ನು ಪ್ರಕಟಿಸಿದ ನಂತರ ಪೂರ್ಣ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗುತ್ತದೆ.

IPL 2026 First Match: RCB vs SRH to kick off season in Bengaluru on March 28
IPL 2026: ಮಾರ್ಚ್ 28ಕ್ಕೆ ಉದ್ಘಾಟನಾ ಪಂದ್ಯ, ಮೇ 31ಕ್ಕೆ ಫೈನಲ್ ಪಂದ್ಯ!

ಮುಂದಿನ ಕೆಲವು ತಿಂಗಳುಗಳಲ್ಲಿ ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು ಮತ್ತು ಕೇರಳ ರಾಜ್ಯಗಳ ವಿಧಾನಸಭಾ ಚುನಾವಣೆ ನಡೆಯಲಿರುವ ಕಾರಣ, ಐಪಿಎಲ್ ಪಂದ್ಯಾವಳಿಯ ವೇಳಾಪಟ್ಟಿಯನ್ನು ಎರಡು ಹಂತಗಳಲ್ಲಿ ಪ್ರಕಟಿಸಲಾಗುವುದು ಎಂದು ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ಅವರು ಇತ್ತೀಚಿಗೆ ಮಾಹಿತಿ ನೀಡಿದ್ದರು.

ಬೆಂಗಳೂರಿನಲ್ಲಿ ಉದ್ಘಾಟನಾ ಪಂದ್ಯ

2025 ರ ಐಪಿಎಲ್ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಐಪಿಎಲ್ 2026 ರ ಉದ್ಘಾಟನಾ ಪಂದ್ಯ ಸೇರಿದಂತೆ ಐದು ಪಂದ್ಯಗಳನ್ನು ಬೆಂಗಳೂರಿನ ಐಕಾನಿಕ್ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಡಲಿದ್ದು, ಎರಡು ಪಂದ್ಯಗಳನ್ನು ರಾಯ್‌ಪುರದ ಶಹೀದ್ ವೀರ್ ನಾರಾಯಣ್ ಸಿಂಗ್ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಆಡಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com