

ಭಾರತ ಕ್ರಿಕೆಟ್ ತಂಡವು ಇತ್ತೀಚೆಗೆ ಭಾರತ ಟಿ-20 ವಿಶ್ವಕಪ್ ಗೆದ್ದ ನಂತರ ದೇಶಾದ್ಯಂತ ಸಂಭ್ರಮದ ವಾತಾವರಣ ನಿರ್ಮಾಣವಾಗಿದೆ. ಅಭಿಮಾನಿಗಳು ರಸ್ತೆಗೆ ಇಳಿದು ಸಂಭ್ರಮಾಚರಣೆ ನಡೆಸುತ್ತಿರುವಾಗ, ತಂಡದ ಪ್ರಮುಖ ಆಲ್‌ರೌಂಡರ್ ಆಟಗಾರರೊಬ್ಬರು ಹೊಸ ವಿವಾದಕ್ಕೆ ಸಿಲುಕಿರುವುದು ಗಮನ ಸೆಳೆಯುತ್ತಿದೆ.
ಫೈನಲ್ ಪಂದ್ಯದಲ್ಲಿ ಬೌಂಡರಿ ಲೈನ್ ಬಳಿ ತಿಲಕ್ ವರ್ಮಾ ಅಮೋಘವಾಗಿ ಕ್ಯಾಚ್ ಹಿಡಿಯುವ ಮೂಲಕ ಮೈದಾನದಲ್ಲಿ ಗೆಲುವಿನ ಸಂಭ್ರಮ ಮುಗಿಲು ಮುಟ್ಟಿತ್ತು. ನಾಯಕ ಸೂರ್ಯಕುಮಾರ್, ಹಾರ್ದಿಕ್ ಪಾಂಡ್ಯ ಸೇರಿದಂತೆ ಟೀಮ್ ಇಂಡಿಯಾ ಆಟಗಾರರು ಸೆಲೆಬ್ರೇಷನ್‌ನಲ್ಲಿಮುಳುಗಿದರು. ಆದ್ರೆ ಇದೇ ಸಂಭ್ರಮದಲ್ಲಿ ಹಾರ್ದಿಕ್ ಪಾಂಡ್ಯ ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ್ರಾ ಎನ್ನುವ ಪ್ರಶ್ನೆ ಮೂಡಿದೆ.
ಈ ಸಂಬಂಧ ಶಿವಾಜಿನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ ಎನ್ನುವುದು ಮೂಲಗಳಿಂದ ತಿಳಿದು ಬಂದಿದೆ. ಒಂದು ವೈರಲ್ ವಿಡಿಯೋ ಹಿನ್ನೆಲೆಯಲ್ಲಿ ಈ ದೂರು ಸಲ್ಲಿಸಲಾಗಿದ್ದು, ಅದರಲ್ಲಿ ಪಾಂಡ್ಯ ಅವರು ಭಾರತದ ರಾಷ್ಟ್ರಧ್ವಜವನ್ನು ಹಿಡಿದಾಗ ಅನುಚಿತವಾಗಿ ವರ್ತಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಡಿದ್ದು, ನೆಟಿಜನ್‌ಗಳ ನಡುವೆ ಚರ್ಚೆ ಮತ್ತು ಟೀಕೆಗಳಿಗೆ ಕಾರಣವಾಗಿದೆ.
ಈ ವಿಷಯದಲ್ಲಿ ವಕೀಲ ವಜೀದ್ ಖಾನ್ ಪ್ರಮುಖವಾಗಿ ಮುಂದಾಗಿದ್ದು, ಅವರು ಪಾಂಡ್ಯ ವಿರುದ್ಧ ಅಧಿಕೃತವಾಗಿ ಲಿಖಿತ ದೂರು ಸಲ್ಲಿಸಿದ್ದಾರೆ. ತಮ್ಮ ದೂರಿನಲ್ಲಿ ಅವರು ರಾಷ್ಟ್ರಧ್ವಜದ ಗೌರವವನ್ನು ಕಾಪಾಡಿಕೊಳ್ಳುವುದು ಪ್ರತಿಯೊಬ್ಬ ಭಾರತೀಯನ ಮೂಲಭೂತ ಕರ್ತವ್ಯ ಎಂದು ತಿಳಿಸಿದ್ದಾರೆ.
ಭಾರತದ ರಾಷ್ಟ್ರ ಧ್ವಜಕ್ಕೆ ಅದರದ್ದೇ ಆದ ಕೆಲವು ನಿಯಮಗಳು ಇವೆ. ಆದ್ರೆ ಪಂದ್ಯದ ವೇಳೆ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ತನ್ನ ಭುಜದ ಮೇಲೆ ಹಾಕಿಕೊಂಡಿದ್ದರು. ಗೆಲುವಿನ ಖುಷಿಯಲಿದ್ದ ಹಾರ್ದಿಕ್ ಪಾಂಡ್ಯರನ್ನು ತಬ್ಬಿಕೊಂಡು ಪ್ರಿಯತಮೆ ಮಹಿಕಾ ಶರ್ಮಾ ಕಿಸ್ ಮಾಡಿದ್ದಾರೆ. ಮೈದಾನದಲ್ಲಿ ಇದೇ ರೀತಿ ಎರಡ್ಮೂರು ಬಾತಿ ಮುತ್ತು ಕೊಟ್ಟಿದ್ದಾರೆ. ಅಲ್ಲದೇ ಇಬ್ಬರು ಒಬ್ಬರ ಭುಜದ ಮೇಲೆ ಒಬ್ಬರು ಕೈಕೈ ಹಾಕಿಕೊಂಡು ಡ್ಯಾನ್ಸ್ ಮಾಡಿರುವುದು ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಇಷ್ಟೇ ಅಲ್ಲ, T20 ವಿಶ್ವಕಪ್‌ನ ಪ್ರಶಸ್ತಿ ಕೊಡಲು ಮೈದಾನದ ಮಧ್ಯೆ ಹಾಕಿದ್ದ ಸ್ಟೇಜ್ ಮೇಲೆಯೇ ಹಾರ್ದಿಕ್ ಪಾಂಡ್ಯ ಹಾಗೂ ಮಹಿಕಾ ಶರ್ಮಾ ಇಬ್ಬರು ಜೊತೆಯಲ್ಲಿಯೇ ಮಲಗಿ ರಿಲ್ಯಾಕ್ಸ್ ಆದರು. ಈ ವೇಳೆಯೂ ಹಾರ್ದಿಕ್ ಪಾಂಡ್ಯ ಮೈ ಮೇಲೆ ರಾಷ್ಟ್ರಧ್ವಜ ಇತ್ತು. ಹೀಗಾಗಿ ಜನರ ಮುಂದೆಯೇ ರಾಷ್ಟ್ರಧ್ವಜ ಹಾಕಿಕೊಂಡಿದ್ದ ಹಾರ್ದಿಕ್ ಪಾಂಡ್ಯ ಇಷ್ಟೆಲ್ಲಾ ಮಾಡಿದ್ದಾರೆ. ಈ ಬಗ್ಗೆ ಚರ್ಚೆಯೂ ನಡೆಯುತ್ತಿದೆ.
ವಿಡಿಯೋ ವೈರಲ್ ಆದ ನಂತರ ಕೆಲವರು ಪಾಂಡ್ಯ ಅವರ ವರ್ತನೆಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಭಾರತೀಯ ರಾಷ್ಟ್ರಧ್ವಜವಾದ ತ್ರಿವರ್ಣ ಧ್ವಜದ ಗೌರವವನ್ನು ಕಾಪಾಡುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ ಎಂಬ ಅಭಿಪ್ರಾಯವನ್ನು ಅನೇಕರು ವ್ಯಕ್ತಪಡಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಗಳು ಕೇಳಿಬರುತ್ತಿವೆ.
Advertisement