IPL 2026: ಪ್ರಶಸ್ತಿ ಉಳಿಸಿಕೊಳ್ಳಲು RCB ಸೆಣಸಾಟ; ಬೆಂಗಳೂರಿಗೆ ಬಂದಿಳಿದ ವಿರಾಟ್ ಕೊಹ್ಲಿ- Video viral

ಐಪಿಎಲ್‌ನ ಬಹುನಿರೀಕ್ಷಿತ ಪುನರಾಗಮನಕ್ಕಾಗಿ ಅಭಿಮಾನಿಗಳು ಕಾಯುತ್ತಿರುವ ಈ ಸಮಯದಲ್ಲಿ, 2026ರ ಐಪಿಎಲ್‌ನಲ್ಲಿ ಆರ್‌ಸಿಬಿ ಪ್ರಶಸ್ತಿಯನ್ನು ಉಳಿಸಿಕೊಳ್ಳುವಲ್ಲಿ ಕೊಹ್ಲಿ ಪ್ರಮುಖ ಪಾತ್ರ ವಹಿಸಲಿದ್ದಾರೆ.
Virat Kohli
ವಿರಾಟ್ ಕೊಹ್ಲಿ
Updated on

ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2026ರ ಆರಂಭಕ್ಕೆ ಇನ್ನೇನು 10 ದಿನಗಳು ಬಾಕಿ ಉಳಿದಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡಕ್ಕೆ ಭಾರತದ ಶ್ರೇಷ್ಠ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಸೇರಿದ್ದಾರೆ. ವಿರಾಟ್ ಕೊಹ್ಲಿ ಮಾರ್ಚ್ 18 ರಂದು ಬುಧವಾರ ಬೆಂಗಳೂರಿಗೆ ಬಂದಿಳಿದಿದ್ದಾರೆ. ವಿರಾಟ್ ಕೊಹ್ಲಿ 2026ರ ಜನವರಿಯಲ್ಲಿ ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಪಾಲ್ಗೊಂಡಿದ್ದರು.

ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿರುವ ವಿಡಿಯೋಗಳಲ್ಲಿ, ಕೊಹ್ಲಿ ವಿಮಾನ ನಿಲ್ದಾಣದ ಅಧಿಕಾರಿಗಳು ಮತ್ತು ಭದ್ರತಾ ಸಿಬ್ಬಂದಿಯೊಂದಿಗೆ ಬಿಗಿ ಭದ್ರತೆಯಲ್ಲಿ ಆಗಮಿಸುತ್ತಿರುವುದನ್ನು ಕಾಣಬಹುದು. 37 ವರ್ಷದ ಕೊಹ್ಲಿ, ಕಪ್ಪು ಟ್ರ್ಯಾಕ್‌ಪ್ಯಾಂಟ್‌ನೊಂದಿಗೆ ನೀಲಿ ಸ್ವೆಟ್‌ಶರ್ಟ್ ಮತ್ತು ಕ್ಯಾಪ್ ಧರಿಸಿದ್ದರು. ವಿರಾಟ್ ಕೊಹ್ಲಿ ಬೆಂಗಳೂರಿಗೆ ಬಂದಿರುವುದನ್ನು, ಫ್ರಾಂಚೈಸಿ ಕೂಡ ದೃಢಪಡಿಸಿದ್ದು, 'ಅವರು ಬರುತ್ತಿದ್ದಾರೆಂದು ತಿಳಿಯಲು, ನೀವು ಅವರನ್ನು ನೋಡಬೇಕಾಗಿಲ್ಲ... ಕ್ಯಾಲೆಂಡರ್ ಪರಿಶೀಲಿಸಿ, ಅಲ್ಲಿ ಸನ್ನೆಯಿದೆ...' ಎಂದು ವಿಡಿಯೋ ಪೋಸ್ಟ್ ಮಾಡಿದೆ. ಆದರೆ, ಆ ವಿಡಿಯೋದಲ್ಲಿ ವಿರಾಟ್ ಕೊಹ್ಲಿ ಮುಖ ಕಾಣಿಸುವುದಿಲ್ಲ.

ಐಪಿಎಲ್‌ನ ಬಹುನಿರೀಕ್ಷಿತ ಪುನರಾಗಮನಕ್ಕಾಗಿ ಅಭಿಮಾನಿಗಳು ಕಾಯುತ್ತಿರುವ ಈ ಸಮಯದಲ್ಲಿ, 2026ರ ಐಪಿಎಲ್‌ನಲ್ಲಿ ಆರ್‌ಸಿಬಿ ಪ್ರಶಸ್ತಿಯನ್ನು ಉಳಿಸಿಕೊಳ್ಳುವಲ್ಲಿ ಕೊಹ್ಲಿ ಪ್ರಮುಖ ಪಾತ್ರ ವಹಿಸಲಿದ್ದಾರೆ. 2025ರಲ್ಲಿ ಫ್ರಾಂಚೈಸಿ ಚೊಚ್ಚಲ ಪ್ರಶಸ್ತಿಯನ್ನು ಎತ್ತಿಹಿಡಿದಾಗ ವಿರಾಟ್ ಕೊಹ್ಲಿ ಪ್ರಮುಖ ಪಾತ್ರ ವಹಿಸಿದರು. 144.71ರ ಸ್ಟ್ರೈಕ್ ರೇಟ್ ಮತ್ತು 54.75ರ ಸರಾಸರಿಯಲ್ಲಿ 657 ರನ್‌ಗಳನ್ನು ಗಳಿಸಿದರು. 17 ವರ್ಷಗಳ ಬಳಿಕ 18ನೇ ಆವೃತ್ತಿಯಲ್ಲಿ ಆರ್‌ಸಿಬಿ ಚೊಚ್ಚಲ ಟ್ರೋಫಿಯನ್ನು ತನ್ನದಾಗಿಸಿಕೊಂಡಿತು. ಇದೀಗ ಕೊಹ್ಲಿ, ಟಿ20ಐ ಮತ್ತು ಟೆಸ್ಟ್ ಕ್ರಿಕೆಟ್ ವೃತ್ತಿಜೀವನಕ್ಕೆ ತೆರೆ ಎಳೆದಿದ್ದು, ಏಕದಿನ ಪಂದ್ಯಗಳಲ್ಲಿ ಮಾತ್ರ ಸಕ್ರಿಯರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಐಪಿಎಲ್‌ನಲ್ಲಿ ಕೊಹ್ಲಿಯನ್ನು ಕಣ್ತುಂಬಿಕೊಳ್ಳಲು ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.

Virat Kohli
IPL 2026: ವಿರಾಟ್ ಕೊಹ್ಲಿ ನೆಟ್​​ನಲ್ಲಿ ಕಠಿಣ ಅಭ್ಯಾಸ! Video ವೈರಲ್

ಬಿಸಿಸಿಐ ಟೂರ್ನಮೆಂಟ್‌ನ ಮೊದಲ ಹಂತದ ವೇಳಾಪಟ್ಟಿ ಬಿಡುಗಡೆ ಮಾಡಿದ್ದು, ಆರ್‌ಸಿಬಿ ಮಾರ್ಚ್ 28 ರಂದು ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಉದ್ಘಾಟನಾ ಪಂದ್ಯ ಆಡಲಿದೆ. ನಂತರ ಏಪ್ರಿಲ್ 5 ರಂದು ಐದು ಬಾರಿಯ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ (CSK) ಗೆ ಆತಿಥ್ಯ ವಹಿಸಲಿದೆ. ನಂತರ ಏಪ್ರಿಲ್ 10 ರಂದು ರಾಜಸ್ಥಾನ ರಾಯಲ್ಸ್ (RR) ವಿರುದ್ಧ ಮತ್ತು ಏಪ್ರಿಲ್ 12 ರಂದು ಮುಂಬೈ ಇಂಡಿಯನ್ಸ್ ವಿರುದ್ಧ ತವರಿನಿಂದ ಹೊರಗೆ ಎರಡು ಪಂದ್ಯಗಳನ್ನು ಆಡಲಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು IPL 2026 ತಂಡ

ಬ್ಯಾಟರ್‌ಗಳು: ರಜತ್ ಪಾಟೀದಾರ್ (ನಾಯಕ), ದೇವದತ್ ಪಡಿಕ್ಕಲ್, ವಿರಾಟ್ ಕೊಹ್ಲಿ, ಪಿಲ್ ಸಾಲ್ಟ್, ಜಿತೇಶ್ ಶರ್ಮಾ, ಜೋರ್ಡಾನ್ ಕಾಕ್ಸ್

ಆಲ್‌ರೌಂಡರ್‌ಗಳು: ಕೃನಾಲ್ ಪಾಂಡ್ಯ, ಸ್ವಪ್ನಿಲ್ ಸಿಂಗ್, ಟಿಮ್ ಡೇವಿಡ್, ರೊಮಾರಿಯೋ ಶೆಫರ್ಡ್, ಜೇಕಬ್ ಬೆಥೆಲ್, ವೆಂಕಟೇಶ್ ಅಯ್ಯರ್, ಸಾತ್ವಿಕ್ ದೇಸ್ವಾಲ್, ಮಂಗೇಶ್ ಯಾದವ್, ವಿಕ್ಕಿ ಓಸ್ತ್ವಾಲ್, ವಿಹಾನ್ ಮಲ್ಹೋತ್ರಾ, ಕನಿಷ್ ಚೌಹಾಣ್

ಬೌಲರ್‌ಗಳು: ಜಾಶ್ ಹೇಜಲ್‌ವುಡ್, ರಸಿಖ್ ದಾರ್, ಸುಯಾಶ್ ಶರ್ಮಾ, ಭುವನೇಶ್ವರ್ ಕುಮಾರ್, ನುವಾನ್ ತುಷಾರ, ಅಭಿನಂದನ್ ಸಿಂಗ್, ಜೇಕಬ್ ಡಫಿ, ಯಶ್ ದಯಾಳ್.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com