

ಬೆಂಗಳೂರು: ಭಾರತದ ಎರಡನೇ ಅತಿದೊಡ್ಡ ಹಾಗೂ ಕರ್ನಾಟಕದ ಹೆಮ್ಮೆಯ ಕೆಎಂಎಫ್ ನಂದಿನಿ ಮಾರ್ಚ್ 28ರಿಂದ ಪ್ರಾರಂಭವಾಗುವ ಇಂಡಿಯನ್ ಪ್ರೀಮಿಯರ್ ಲೀಗ್ (IPL)ನ 2026 ಆವೃತ್ತಿಗಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಅಧಿಕೃತ ಡೈರಿ ಪಾರ್ಟ್ನರ್ ಆಗಿದೆ. ಐಪಿಎಲ್ 2026 ಗಾಗಿ ನಂದಿನಿ ಬ್ರ್ಯಾಂಡ್ ಮತ್ತು ಆರ್‌ಸಿಬಿ ನಡುವೆ ಪ್ರಾಯೋಜಕತ್ವದ ಒಪ್ಪಂದ ಮಾಡಿಕೊಂಡಿದೆ. ಕರ್ನಾಟಕದ ಹೆಮ್ಮೆಯ ನಂದಿನಿ ಬ್ರ್ಯಾಂಡ್ ಕಳೆದ ಐಪಿಎಲ್ ಸೀಸನ್‌ನ ಚಾಂಪಿಯನ್ ತಂಡ ಆರ್‌ಸಿಬಿಯ ಅಧಿಕೃತ ಡೈರಿ ಪಾಲುದಾರನಾಗಿದೆ. ನಂದಿನಿಯ ವಿಶ್ವಾಸಾರ್ಹತೆ ಮತ್ತು ಆರ್‌ಸಿಬಿಯ ಕ್ರೀಡಾ ಬದ್ಧತೆ ಈ ಬಾರಿಯ ಐಪಿಎಲ್‌ನ ಆಕರ್ಷಣೆಯ ಕೇಂದ್ರಬಿಂದುವಾಗಲಿದೆ ಎಂದು ಸಿಎಂ ಸಿದ್ಧರಾಮಯ್ಯ ಟ್ವೀಟ್ ಮಾಡಿದ್ದಾರೆ.
Advertisement