

ನವದೆಹಲಿ: ಭಾರತದ ಟಿ20 ನಾಯಕ ಸೂರ್ಯ ಕುಮಾರ್ ಯಾದವ್ (Suryakumar Yadav) ಅವರ ಪತ್ನಿ ದೇವಿಶಾ (Devisha Shetty) ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ ಎಂದು ತಿಳಿದುಬಂದಿದೆ.
ಕಾಲೇಜು ದಿನಗಳಲ್ಲಿ ಮೊದಲ ಬಾರಿ ಭೇಟಿಯಾಗಿದ್ದ ಈ ಜೋಡಿ 2016ರಲ್ಲಿ ವಿವಾಹವಾಗಿದ್ದರು. ವಿವಾಹವಾಗಿ 10 ವರ್ಷಗಳ ಬಳಿಕ ಈ ದಂಪತಿ ಗುರುವಾರ ತಮ್ಮ ಮೊದಲ ಮಗುವಿಗೆ ಸ್ವಾಗತ ಕೋರಿದ್ದಾರೆ.
ಅಭಿಮಾನಿಗಳು ಹಾಗೂ ಕ್ರಿಕೆಟ್ ವಲಯದ ಸದಸ್ಯರಿಂದ ಸಾಮಾಜಿಕ ಜಾಲತಾಣಗಳಲ್ಲಿ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ.
ದೀರ್ಘಕಾಲದ ಪ್ರೀತಿ
ಇವರಿಬ್ಬರು ಮುಂಬೈನ ಆರ್.ಎ. ಪೋಡರ್ ಕಾಲೇಜ್ ಆಫ್ ಕಾಮರ್ಸ್ ಅಂಡ್ ಎಕನಾಮಿಕ್ಸ್‌ನಲ್ಲಿ ಓದುತ್ತಿದ್ದಾಗ (ಸುಮಾರು 2010 ಅಥವಾ 2012 ರಲ್ಲಿ) ಭೇಟಿಯಾದವರು. ಅಂದಿನಿಂದ ಇವರ ಸ್ನೇಹ ಪ್ರೀತಿಗೆ ತಿರುಗಿತ್ತು.
ಅಂದಹಾಗೆ ದೇವೀಶಾ ಶೆಟ್ಟಿ ಅವರು ಪರಿಣಿತ ಭರತನಾಟ್ಯ ನೃತ್ಯಗಾರ್ತಿ ಮತ್ತು ನೃತ್ಯ ತರಬೇತುದಾರರಾಗಿದ್ದಾರೆ. ಇವರು ಸಮಾಜ ಸೇವೆಯಲ್ಲೂ ತೊಡಗಿಸಿಕೊಂಡಿದ್ದಾರೆ.
ಆರ್ ಸಿಬಿ ಪಂದ್ಯಕ್ಕೆ ಸೂರ್ಯ ಅಲಭ್ಯ?
ಮುಂಬೈ ಇಂಡಿಯನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಐಪಿಎಲ್ ಪಂದ್ಯಕ್ಕೂ ಮುನ್ನ ಹೆಣ್ಣು ಮಗು ಜನಿಸಿದೆ.
ವರದಿಗಳ ಪ್ರಕಾರ, ಸೂರ್ಯಕುಮಾರ್ ಕುಟುಂಬದೊಂದಿಗೆ ಉಳಿದಿದ್ದು, ರಾಯ್ಪುರದಲ್ಲಿ ನಡೆಯಲಿರುವ ಮುಂಬೈ ಇಂಡಿಯನ್ಸ್ ಮತ್ತು ಆರ್ಸಿಬಿ ನಡುವಿನ ಪಂದ್ಯವನ್ನು ತಪ್ಪಿಸಿಕೊಳ್ಳುವ ಸಾಧ್ಯತೆ ಇದೆ. ಆದರೆ, ಅವರ ಲಭ್ಯತೆ ಕುರಿತು ಇನ್ನೂ ಯಾವುದೇ ಅಧಿಕೃತ ಮಾಹಿತಿ ಹೊರಬಂದಿಲ್ಲ.
Advertisement