IPL 2026: ಪಂಜಾಬ್ ಕಿಂಗ್ಸ್ ತಂಡವನ್ನು ಮಣಿಸಿದ ಡೆಲ್ಲಿ ಕ್ಯಾಪಿಟಲ್ಸ್; RCB ಅಗ್ರಸ್ಥಾನ ಭದ್ರ!

ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2026ರ 55ನೇ ಪಂದ್ಯ ಪಂಜಾಬ್ ಕಿಂಗ್ಸ್ (ಪಿಬಿಕೆಎಸ್) ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವೆ ನಡೆದಿದ್ದು 3 ವಿಕೆಟ್ ಗಳಿಂದ ಡೆಲ್ಲಿ ಕ್ಯಾಪಿಟಲ್ಸ್ ಗೆಲುವು ಸಾಧಿಸದ್ದು RCB ಅಗ್ರಸ್ಥಾನದಲ್ಲಿ ಉಳಿಯುವಂತೆ ಮಾಡಿದೆ.
Delhi Capitals
ಡೆಲ್ಲಿ ಕ್ಯಾಪಿಟಲ್ಸ್
Updated on

ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2026ರ 55ನೇ ಪಂದ್ಯ ಪಂಜಾಬ್ ಕಿಂಗ್ಸ್ (ಪಿಬಿಕೆಎಸ್) ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವೆ ನಡೆದಿದ್ದು 3 ವಿಕೆಟ್ ಗಳಿಂದ ಡೆಲ್ಲಿ ಕ್ಯಾಪಿಟಲ್ಸ್ ಗೆಲುವು ಸಾಧಿಸಿದ್ದು RCB ಅಗ್ರಸ್ಥಾನದಲ್ಲಿ ಉಳಿಯುವಂತೆ ಮಾಡಿದೆ.

ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ​​ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ, ನಾಯಕ ಶ್ರೇಯಸ್ ಅಯ್ಯರ್ ಮತ್ತು ಪ್ರಿಯಾಂಶ್ ಆರ್ಯ ಅವರ ಅರ್ಧಶತಕಗಳು ಮತ್ತು ಸೂರ್ಯಾಂಶ್ ಶೆಡ್ಜ್ ಅವರ ಬಿರುಸಿನ ಬ್ಯಾಟಿಂಗ್ ಪ್ರದರ್ಶನದಿಂದಾಗಿ ಪಂಜಾಬ್ ಕಿಂಗ್ಸ್ ತಂಡವು ಡೆಲ್ಲಿ ಕ್ಯಾಪಿಟಲ್ಸ್‌ಗೆ 211 ರನ್‌ಗಳ ಗುರಿಯನ್ನು ನೀಡಿತು. ಈ ಗುರಿ ಬೆನ್ನಟ್ಟಿದ ದೆಹಲಿ ತಂಡ 216 ರನ್ ಬಾರಿಸಿ ಗೆಲುವಿನ ನಗೆ ಬೀರಿದೆ.

ಪ್ರಿಯಾಂಶ್ ಆರ್ಯ, ಪ್ರಭ್ಸಿಮ್ರಾನ್ ಸಿಂಗ್ ಅವರೊಂದಿಗೆ ತಂಡಕ್ಕೆ ಬಲವಾದ ಆರಂಭವನ್ನು ನೀಡಿದರು. ಈ ಆರಂಭಿಕ ಬ್ಯಾಟ್ಸ್‌ಮನ್‌ಗಳು 41 ಎಸೆತಗಳಲ್ಲಿ 78 ರನ್‌ಗಳ ಪಾಲುದಾರಿಕೆಯನ್ನು ಹಂಚಿಕೊಂಡರು. ಪ್ರಭಾಂಶ್ ಸಿಂಗ್ 15 ಎಸೆತಗಳಲ್ಲಿ 18 ರನ್ ಗಳಿಸಿದ ನಂತರ ಪೆವಿಲಿಯನ್‌ಗೆ ಮರಳಿದರು. ಅವರ ಇನ್ನಿಂಗ್ಸ್‌ನಲ್ಲಿ 3 ಬೌಂಡರಿಗಳು ಸೇರಿದ್ದವು. ನಂತರ ತಂಡಕ್ಕೆ ಪ್ರಿಯಾಂಶ್ ಆರ್ಯ ರೂಪದಲ್ಲಿ ಎರಡನೇ ಹೊಡೆತ ಬಿತ್ತು, ಅವರು 33 ಎಸೆತಗಳಲ್ಲಿ 6 ಸಿಕ್ಸರ್ ಮತ್ತು 2 ಬೌಂಡರಿಗಳೊಂದಿಗೆ 56 ರನ್ ಗಳಿಸಿದರು.

Delhi Capitals
ದಶಕದ ಬಳಿಕ ಭುವನೇಶ್ವರ್ ಸಿಡಿಸಿದ ಸಿಕ್ಸ್​ ಮೌಲ್ಯ '99 ಲಕ್ಷ ರೂ'; MI ಪಂದ್ಯ RCB ಗೆಲ್ಲೋದಿಲ್ಲ ಎಂಬ ಭವಿಷ್ಯ ಸುಳ್ಳಾಗಿಸಿದ ಭುವಿ; Video

ಪಂಜಾಬ್ ಕಿಂಗ್ಸ್ 97 ರನ್‌ಗಳಿಗೆ ತಮ್ಮ ಎರಡೂ ಆರಂಭಿಕ ಆಟಗಾರರನ್ನು ಕಳೆದುಕೊಂಡಿತು. ಅಲ್ಲಿಂದ, ಕೂಪರ್ ಕೊನೊಲಿ, ಶ್ರೇಯಸ್ ಅಯ್ಯರ್ ಅವರೊಂದಿಗೆ ಮೂರನೇ ವಿಕೆಟ್‌ಗೆ 52 ಎಸೆತಗಳಲ್ಲಿ 83 ರನ್ ಸೇರಿಸಿ ತಂಡವನ್ನು ಬೃಹತ್ ಸ್ಕೋರ್‌ಗೆ ಕೊಂಡೊಯ್ದರು. ಕೂಪರ್ ಕೊನೊಲಿ 27 ಎಸೆತಗಳಲ್ಲಿ 2 ಸಿಕ್ಸರ್ ಮತ್ತು 3 ಬೌಂಡರಿಗಳೊಂದಿಗೆ 38 ರನ್ ಗಳಿಸಿದ ನಂತರ ಪೆವಿಲಿಯನ್‌ಗೆ ಮರಳಿದರು. ದೆಹಲಿ ಪರ ಮೈಕಲ್ ಸ್ಟಾರ್ಕ್ ಮತ್ತು ಮಾಧವ್ ತಿವಾರಿ ತಲಾ 2 ವಿಕೆಟ್ ಪಡೆದರೇ ಮುಕೇಶ್ ಕುಮಾರ್ 1 ವಿಕೆಟ್ ಪಡೆದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com