IPL 2026: RCB ವಿರುದ್ಧದ ಪಂದ್ಯದಿಂದ ಹೊರಗುಳಿದಿದ್ದ ಹಾರ್ದಿಕ್ ಪಾಂಡ್ಯ ಬಗ್ಗೆ ಮೌನ ಮುರಿದ MI; ಹೇಳಿದ್ದೇನು?

ನಾಯಕ ಹಾರ್ದಿಕ್ ಪಾಂಡ್ಯ ಅವರ ಮುಂದುವರಿದ ಗೈರುಹಾಜರಿಯ ಬಗ್ಗೆ ಮುಂಬೈ ಇಂಡಿಯನ್ಸ್ ತಂಡ ಸೋಮವಾರ ಕೊನೆಗೂ ಮೌನ ಮುರಿದಿದೆ.
Hardik Pandya
ಹಾರ್ದಿಕ್ ಪಾಂಡ್ಯ
Updated on

ಮುಂಬೈ: ಇಂಡಿಯನ್ ಪ್ರೀಮಿಯರ್ ಲೀಗ್‌(ಐಪಿಎಲ್‌)ನ 19ನೇ ಆವೃತ್ತಿಯಲ್ಲಿ ಸ್ಥಿರ ಪ್ರದರ್ಶನ ನೀಡುವಲ್ಲಿ ವಿಫಲವಾಗಿರುವ ಮುಂಬೈ ಇಂಡಿಯನ್ಸ್‌ ತಂಡ ಪ್ಲೇಆಫ್‌ನಿಂದ ಹೊರ ಬಿದ್ದಿದೆ.

ನಾಯಕ ಹಾರ್ದಿಕ್ ಪಾಂಡ್ಯ ಅವರ ಮುಂದುವರಿದ ಗೈರುಹಾಜರಿಯ ಬಗ್ಗೆ ಮುಂಬೈ ಇಂಡಿಯನ್ಸ್ ತಂಡ ಸೋಮವಾರ ಕೊನೆಗೂ ಮೌನ ಮುರಿದಿದೆ. ನಾಯಕ ಹಾರ್ದಿಕ್ ಪಾಂಡ್ಯ ಗಾಯದ ಸಮಯ್ಯೆಯಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು(RCB) ವಿರುದ್ಧದ ಪಂದ್ಯದಿಂದ ಹೊರಗುಳಿದಿದ್ದರು ಎಂದು ಮುಂಬೈ ಇಂಡಿಯನ್ಸ್ ಹೇಳಿದೆ.

ರಾಯ್‌ಪುರದಲ್ಲಿ ಭಾನುವಾರ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯದ ನಂತರ ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯಯ ಗಾಯದ ಬಗ್ಗೆ ಮುಖ್ಯ ಕೋಚ್ ಮಹೇಲ ಜಯವರ್ಧನೆ ಮಹತ್ವದ ಮಾಹಿತಿ ನೀಡಿದ್ದಾರೆ.

Hardik Pandya
MI ನಾಯಕನಾಗಿ ಮತ್ತೆ ರೋಹಿತ್ ಶರ್ಮಾ?; ಹಾರ್ದಿಕ್ ಪಾಂಡ್ಯ, ಸೂರ್ಯಕುಮಾರ್ ಯಾದವ್ ಅನುಪಸ್ಥಿತಿ ಕುರಿತು ಊಹಾಪೋಹ!

ಹಾರ್ದಿಕ್ ಅನುಪಸ್ಥಿತಿಯಲ್ಲಿ ಸೂರ್ಯಕುಮಾರ್ ಯಾದವ್ ತಂಡವನ್ನು ಮುನ್ನಡೆಸಿದ್ದರಿಂದ ಮುಂಬೈ ತಂಡವು ಸತತ ಎರಡನೇ ಪಂದ್ಯದಲ್ಲೂ ನಾಯಕನಿಲ್ಲದೆ ಆಡಿತ್ತು. ಮುಂಬೈ ತಂಡವು ಎರಡು ವಿಕೆಟ್‌ಗಳಿಂದ ಪಂದ್ಯವನ್ನು ಸೋತಿತು, ಈ ಸೋಲಿನಿಂದ ಪ್ಲೇಆಫ್ ರೇಸ್‌ನಿಂದ ಮುಂಬೈ ಹೊರಗುಳಿದಿದ್ದು, ಲಕ್ನೋ ಸೂಪರ್ ಜೈಂಟ್ಸ್ ನಂತರ ಟೂರ್ನಮೆಂಟ್‌ನಿಂದ ಹೊರಬಿದ್ದ ಎರಡನೇ ತಂಡವಾಗಿದೆ.

ಪಂದ್ಯದ ನಂತರ ಮಾತನಾಡಿದ ಜಯವರ್ಧನೆ, ಹಾರ್ದಿಕ್ ಬೆನ್ನು ನೋವಿನಿಂದ ಬಳಲುತ್ತಿದ್ದಾರೆ ಮತ್ತು ವೈದ್ಯಕೀಯ ತಂಡದ ಮೇಲ್ವಿಚಾರಣೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಬಹಿರಂಗಪಡಿಸಿದರು.

ಪರಿಣಾಮವಾಗಿ, ಅವರು ಅಭ್ಯಾಸ ಅವಧಿಗಳಲ್ಲಿ ಭಾಗವಹಿಸಲು ಸಾಧ್ಯವಾಗಲಿಲ್ಲ. ತಂಡದ ಆಡಳಿತ ಮಂಡಳಿಯು ಆಲ್‌ರೌಂಡರ್‌ನ ಫಿಟ್‌ನೆಸ್‌ನಲ್ಲಿ ಯಾವುದೇ ಅಪಾಯಗಳನ್ನು ತೆಗೆದುಕೊಳ್ಳಲು ಬಯಸಲಿಲ್ಲ. ಅದಕ್ಕಾಗಿಯೇ ಅವರಿಗೆ RCB ವಿರುದ್ಧದ ಪಂದ್ಯಕ್ಕೆ ವಿಶ್ರಾಂತಿ ನೀಡಲಾಯಿತು ಎಂದು ಮುಖ್ಯ ತರಬೇತುದಾರ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com