ಲಂಕಾ ವಿರುದ್ಧ ಏಕದಿನ, ಟೆಸ್ಟ್​ ತಂಡ ಪ್ರಕಟ: ರಿಷಭ್ ಪಂತ್‌ಗೆ ಕೊಕ್; ಕನ್ನಡಿಗ ಕೆಎಲ್ ರಾಹುಲ್ ಉಪನಾಯಕ

ಟೆಸ್ಟ್ ತಂಡದ ಉಪನಾಯಕ ಸ್ಥಾನದಿಂದ ವಿಕೆಟ್ ಕೀಪರ್-ಬ್ಯಾಟರ್ ರಿಷಭ್ ಪಂತ್ ಅವರನ್ನು ಕೈಬಿಡಲಾಗಿದೆ.
Rishabh Pant dropped for Afghanistan ODIs, Prince Yadav gets call up
ಕನ್ನಡಿಗ ಕೆ ಎಲ್ ರಾಹುಲ್
Updated on

ಮುಂಬೈ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಅಫ್ಘಾನಿಸ್ತಾನ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿ ಹಾಗೂ ಒಂದು ಟೆಸ್ಟ್ ಪಂದ್ಯಕ್ಕೆ ಭಾರತ ತಂಡವನ್ನು ಪ್ರಕಟಿಸಿದೆ.

ಏಕದಿನ ಹಾಗೂ ಟೆಸ್ಟ್ ಎರಡೂ ತಂಡಗಳ ನಾಯಕನಾಗಿ ಶುಭ್​ಮನ್ ಗಿಲ್ ಮುಂದುವರೆದರೆ, ಟೆಸ್ಟ್ ತಂಡದ ಉಪನಾಯಕನಾಗಿ ಕನ್ನಡಿಗ ಕೆಎಲ್ ರಾಹುಲ್ ಅವರನ್ನು ಆಯ್ಕೆ ಮಾಡಲಾಗಿದೆ. ಇನ್ನು ಏಕದಿನ ತಂಡದ ವೈಸ್ ಕ್ಯಾಪ್ಟನ್ ಆಗಿ ಶ್ರೇಯಸ್ ಅಯ್ಯರ್ ಆಯ್ಕೆಯಾಗಿದ್ದಾರೆ.

ಟೆಸ್ಟ್ ತಂಡದ ಉಪನಾಯಕ ಸ್ಥಾನದಿಂದ ವಿಕೆಟ್ ಕೀಪರ್-ಬ್ಯಾಟರ್ ರಿಷಭ್ ಪಂತ್ ಅವರನ್ನು ಕೈಬಿಡಲಾಗಿದೆ.

Rishabh Pant dropped for Afghanistan ODIs, Prince Yadav gets call up
India vs New Zealand 4th T20: ಭಾರತದ ಸಂಭಾವ್ಯ ಪ್ಲೇಯಿಂಗ್ XI; ಶ್ರೇಯಸ್ ಅಯ್ಯರ್ ಇನ್, ಹಾರ್ದಿಕ್ ಪಾಂಡ್ಯಗೆ ವಿಶ್ರಾಂತಿ?

ಏಕದಿನ ತಂಡದಲ್ಲಿ ಹೊಸಮುಖವಾಗಿ ಮೂವರು ಆಟಗಾರರು ಕಾಣಿಸಿಕೊಂಡಿದ್ದು, ಟೆಸ್ಟ್ ತಂಡದಲ್ಲಿ ಇಬ್ಬರು ಆಟಗಾರರು ಇದೇ ಮೊದಲ ಬಾರಿಗೆ ಆಯ್ಕೆಯಾಗಿದ್ದಾರೆ.

ಟೆಸ್ಟ್ ತಂಡದಲ್ಲಿ ಹೊಸ ಮುಖಗಳು

ಮಾನವ್ ಸುತಾರ್ (ಸ್ಪಿನ್ನರ್)

ಗುರ್ನೂರ್ ಬ್ರಾರ್ (ವೇಗದ ಬೌಲರ್).

ಏಕದಿನ ತಂಡದಲ್ಲಿ ಹೊಸ ಮುಖಗಳು

ಗುರ್ನೂರ್ ಬ್ರಾರ್ (ವೇಗದ ಬೌಲರ್)

ಪ್ರಿನ್ಸ್ ಯಾದವ್ (ವೇಗದ ಬೌಲರ್)

ಹರ್ಷ್ ದುಬೆ (ಸ್ಪಿನ್ನರ್)

ಟೆಸ್ಟ್ ತಂಡ

ಶುಭ್​ಮನ್ ಗಿಲ್ (ನಾಯಕ), ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್ (ಉಪ ನಾಯಕ), ಬಿ. ಸಾಯಿ ಸುದರ್ಶನ್, ರಿಷಭ್ ಪಂತ್, ದೇವದತ್ ಪಡ್ಡಿಕಲ್, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ಮಾನವ್ ಸುತಾರ್, ಗುರ್ನೂರ್ ಬ್ರಾರ್, ಧ್ರುವ್ ಜುರೆಲ್.

ಏಕದಿನ ತಂಡ

ಶುಭ್​ಮನ್ ಗಿಲ್, ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್ (ಉಪ ನಾಯಕ), ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಅರ್ಷದೀಪ್ ಸಿಂಗ್, ಪ್ರಸಿದ್ಧ್ ಕೃಷ್ಣ, ಪ್ರಿನ್ಸ್ ಯಾದವ್, ಗುರ್ನೂರ್ ಬ್ರಾರ್, ಹರ್ಷ್ ದುಬೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com