IPL 2026: SRH ವಿರುದ್ಧ RCB ಗೆ ಸೋಲು, ಸೋತರೂ ಅಗ್ರ ಸ್ಥಾನ ಅಬಾಧಿತ! ಕ್ವಾಲಿಫೈಯರ್ ಗೆ ಲಗ್ಗೆ

ಐಪಿಎಲ್ ಟೂರ್ನಿಯ ಇಂದಿನ ಮಹತ್ವದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಸನ್ ರೈಸರ್ಸ್ ಹೈದರಾಬಾದ್ ತಂಡ ಭರ್ಜರಿ ಜಯ ಸಾಧಿಸಿದೆ.
SRH beat RCB
ಆರ್ ಸಿಬಿ ವಿರುದ್ಧ ಗೆದ್ದ ಸನ್ ರೈಸರ್ಸ್ ಹೈದರಾಬಾದ್
Updated on

ಹೈದರಾಬಾದ್: ಐಪಿಎಲ್ ಟೂರ್ನಿಯ ಇಂದಿನ ಮಹತ್ವದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಸನ್ ರೈಸರ್ಸ್ ಹೈದರಾಬಾದ್ ತಂಡ ಭರ್ಜರಿ ಜಯ ಸಾಧಿಸಿದೆ.

ಹೈದರಾಬಾದ್ ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ನೀಡಿದ್ದ 256 ರನ್ ಗಳ ಬೃಹತ್ ಮೊತ್ತವನ್ನು ಬೆನ್ನು ಹತ್ತಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ನಿಗಧಿತ 20 ಓವರ್ ನಲ್ಲಿ 4 ವಿಕೆಟ್ ನಷ್ಟಕ್ಕೆ 200 ರನ್ ಗಳನ್ನು ಮಾತ್ರ ಕಲೆಹಾಕಿತು. ಆ ಮೂಲಕ 55 ರನ್ ಗಳ ಅಂತರದಲ್ಲಿ ಸೋಲು ಕಂಡಿತು.

ಆರ್ ಸಿಬಿ ಪರ ವೆಂಕಟೇಶ್ ಅಯ್ಯರ್ 44 ರನ್ ಗಳಿಸಿದರೆ, ವಿರಾಟ್ ಕೊಹ್ಲಿ 15, ದೇವದತ್ ಪಡಿಕ್ಕಲ್ 21, ನಾಯಕ್ ರಜತ್ ಪಾಟಿದಾರ್ 56, ಕೃನಾಲ್ ಪಾಂಡ್ಯಾ ಅಜೇಯ 41 ಮತ್ತು ಟಿಮ್ ಡೇವಿಡ್ ಅಜೇಯ 15 ರನ್ ಗಳಿಸಿದರು. ಹೈದರಾಬಾದ್ ಪರ ಇಶಾನ್ ಮಲಿಂಗಾ 2 ವಿಕೆಟ್ ಪಡೆದರೆ, ಸಕಿಬ್ ಅಲ್ ಹಸನ್ ಮತ್ತು ಟ್ರಾವಿಸ್ ಹೆಡ್ ತಲಾ 1 ವಿಕೆಟ್ ಪಡೆದರು.

SRH beat RCB
IPL 2026: Top 2 ಸ್ಥಾನಕ್ಕಾಗಿ ಮದಗಜಗಳ ಕಾದಾಟ, 256 ರನ್ ಗಳ ಬೃಹತ್ ಮೊತ್ತ ಪೇರಿಸಿದ SRH, RCBಗೆ ಬೇಕು ಕನಿಷ್ಟ 166 ರನ್!

ಸೋತರೂ ಅಗ್ರ ಸ್ಥಾನ ಅಬಾಧಿತ

ಇನ್ನು ಈ ಪಂದ್ಯದಲ್ಲಿ ಆರ್ ಸಿಬಿ 55 ರನ್ ಗಳ ಭಾರಿ ಅಂತರದಲ್ಲಿ ಸೋತರೂ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿ ಮುಂದುವರೆದಿದೆ. ಆರ್ ಸಿಬಿ 18 ಅಂಕಗಳೊಂದಿಗೆ +0.783 ನೆಟ್ ರನ್ ರೇಟ್ ನೊಂದಿಗೆ ಅಗ್ರಸ್ಥಾನದಲ್ಲಿದ್ದು, +0.695 ನೆಟ್ ರನ್ ರೇಟ್ ಹೊಂದಿರುವ ಗುಜರಾತ್ ಟೈಟನ್ 2ನೇ ಸ್ಥಾನದಲ್ಲಿದೆ. ಹೀಗಾಗಿ ಐಪಿಎಲ್ ನ ಕ್ವಾಲಿಫೈಯರ್ ಹಂತದಲ್ಲಿ ಈ ಎರಡೂ ತಂಡಗಳು ಸೆಣಸಲಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com