IPL 2026 Qualifier 1: ಐಪಿಎಲ್ ಇತಿಹಾಸದ ಅತ್ಯಪರೂಪದ ದಾಖಲೆ ಬರೆದ Virat Kohli; ಡಬಲ್ ಆಘಾತ ಕೊಟ್ಟ Holder

ಕೇವಲ 25 ಎಸೆತಗಳನ್ನು ಎದುರಿಸಿದ ವಿರಾಟ್ ಕೊಹ್ಲಿ 1 ಸಿಕ್ಸರ್ ಮತ್ತು 5 ಬೌಂಡರಿಗಳ ನೆರವಿನಿಂದ 43 ರನ್ ಗಳಿಸಿದರು. ಆ ಮೂಲಕ ಕೇವಲ 7 ರನ್ ಗಳ ಅಂತರದಲ್ಲಿ ಅರ್ಧಶತಕ ಮಿಸ್ ಮಾಡಿಕೊಂಡರು.
Virat Kohli Becomes 1st Player In History To Achieve Ultimate Record
ವಿರಾಟ್ ಕೊಹ್ಲಿ ದಾಖಲೆ
Updated on

ಧರ್ಮಶಾಲಾ: ಐಪಿಎಲ್ ಟೂರ್ನಿಯ ಇಂದಿನ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ರನ್ ಮೆಷಿನ್ ವಿರಾಟ್ ಕೊಹ್ಲಿ ಅತ್ಯಪರೂಪದ ದಾಖಲೆ ನಿರ್ಮಿಸಿದ್ದಾರೆ.

ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದ ಗುಜರಾತ್ ತಂಡದ ನಾಯಕ ಶುಭ್ ಮನ್ ಗಿಲ್ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು. ಅದರಂತೆ ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡಿದ ಆರ್ ಸಿಬಿ ಪರ ವಿರಾಟ್ ಕೊಹ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿದರು.

ಕೇವಲ 25 ಎಸೆತಗಳನ್ನು ಎದುರಿಸಿದ ವಿರಾಟ್ ಕೊಹ್ಲಿ 1 ಸಿಕ್ಸರ್ ಮತ್ತು 5 ಬೌಂಡರಿಗಳ ನೆರವಿನಿಂದ 43 ರನ್ ಗಳಿಸಿದರು. ಆ ಮೂಲಕ ಕೇವಲ 7 ರನ್ ಗಳ ಅಂತರದಲ್ಲಿ ಅರ್ಧಶತಕ ಮಿಸ್ ಮಾಡಿಕೊಂಡರು.

Virat Kohli Becomes 1st Player In History To Achieve Ultimate Record
IPL 2026, qualifier 1: ಟಾಸ್ ಗೆದ್ದ GT ಬೌಲಿಂಗ್ ಆಯ್ಕೆ; ಕುತೂಹಲಕ್ಕೆ ಬ್ರೇಕ್, ವೆಂಕಟೇಶ್ ಅಯ್ಯರ್ ಗೆ ಸ್ಟಿಕ್ ಆದ RCB!

ಐಪಿಎಲ್ ಇತಿಹಾಸದ ಅತ್ಯಪರೂಪದ ದಾಖಲೆ

ವಿರಾಟ್ ಕೊಹ್ಲಿ 43 ರನ್ ಗಳಿಸಿ ಹಾಲಿ ಐಪಿಎಲ್ ಟೂರ್ನಿಯಲ್ಲಿ ತಮ್ಮ ರನ್ ಗಳಿಕೆಯನ್ನು 600ಕ್ಕೆ ಏರಿಕೆ ಮಾಡಿಕೊಂಡರು. ಆ ಮೂಲಕ ಐಪಿಎಲ್ ಇತಿಹಾಸದಲ್ಲಿ ಸತತ ನಾಲ್ಕು ಸೀಸನ್‌ಗಳಲ್ಲಿ 600+ ರನ್ ಗಳಿಸಿದ ಮೊದಲ ಆಟಗಾರ ಎಂಬ ಐತಿಹಾಸಿಕ ದಾಖಲೆ ನಿರ್ಮಿಸಿದರು.

ಇನ್ನು ಹಾಲಿ ಐಪಿಎಲ್ ಟೂರ್ನಿಯಲ್ಲಿ ಗರಿಷ್ಠ ರನ್ ಪೇರಿಸಿದ ಬ್ಯಾಟರ್ ಗಳ ಪಟ್ಟಿಯಲ್ಲಿ ಗುಜರಾತ್ ನ ಸಾಯಿ ಸುದರ್ಶನ್ (638) ಅಗ್ರಸ್ಥಾನದಲ್ಲಿದ್ದು, ಅದೇ ತಂಡದ ನಾಯಕ ಶುಭ್ ಮನ್ ಗಿಲ್ (616) 2ನೇ ಸ್ಥಾನದಲ್ಲಿದ್ದಾರೆ. 606 ರನ್ ಗಳಿಸಿರುವ ಹೆನ್ರಿಚ್ ಕ್ಲಾಸೆನ್ 3 ಮತ್ತು 600 ಅಂಕಗಳಿಸಿರುವ ಕೊಹ್ಲಿ 4ನೇ ಸ್ಥಾನದಲ್ಲಿದ್ದಾರೆ.

ಡಬಲ್ ಆಘಾತ

ಆದರೆ ಬಳಿಕ ಜೇಸನ್ ಹೋಲ್ಡರ್ (Jason Holder) ತಮ್ಮ ಮೊದಲ ಓವರ್ ನಲ್ಲೇ ಆರ್ ಸಿಬಿಗೆ ಡಬಲ್ ಆಘಾತ ನೀಡಿದರು. ಮೂರು ಚೆಂಡುಗಳಲ್ಲಿ ಎರಡು ವಿಕೆಟ್ ಪಡೆದು ಗುಜರಾತ್ ಗೆ ಮುನ್ನಡೆ ತಂದುಕೊಟ್ಟರು. 43 ರನ್ ಗಳಿಸಿದ್ದ ಕೊಹ್ಲಿ ಮತ್ತು 30 ರನ್ ಗಳಿಸಿ ಅಪಾಯಕಾರಿಯಾಗಿದ್ದ ದೇವದತ್ ಪಡಿಕ್ಕಲ್ ಅವರನ್ನು ಹೋಲ್ಡರ್ ಔಟ್ ಮಾಡುವ ಮೂಲಕ ಗುಜತರಾತ್ ಮೇಲುಗೈ ಸಾಧಿಸುವಂತೆ ಮಾಡಿದರು.

ಇಂದಿನ ಪಂದ್ಯದಲ್ಲಿ ಗೆಲ್ಲುವ ತಂಡ ಐಪಿಎಲ್ 2026ರ ಫೈನಲ್‌ಗೆ ಪ್ರವೇಶಿಸಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com