IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

ನಿಗಧಿತ 20 ಓವರ್ ನಲ್ಲಿ 8 ವಿಕೆಟ್ ನಷ್ಟಕ್ಕೆ 243 ರನ್ ಗಳಿಸಿತು. ಆ ಮೂಲಕ ಸನ್ ರೈಸರ್ಸ್ ಹೈದರಾಬಾದ್ ತಂಡಕ್ಕೆ ಗೆಲ್ಲಲು 244 ರನ್ ಗಳ ಬೃಹತ್ ಗುರಿ ನೀಡಿತು.
Rajasthan Royals
ರಾಜಸ್ಥಾನ್ ರಾಯಲ್ಸ್ online desk
Updated on

ಐಪಿಎಲ್ 2026ರ ಎಲಿಮಿನೇಟರ್ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡವನ್ನು 47 ರನ್ ಗಳಿಂದ ಮಣಿಸುವ ಮೂಲಕ ರಾಜಸ್ಥಾನ್ ರಾಯಲ್ಸ್ ಕ್ವಾಲಿಫೈಯರ್ ಗೆ ತಲುಪಿದೆ.

ನ್ಯೂ ಚಂಡೀಗಢದ ಮಹಾರಾಜ ಯಾದವೀಂದ್ರ ಸಿಂಗ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಸ್ಫೋಟಕ ಬ್ಯಾಟಿಂಗ್ ಮಾಡಿದ ರಾಜಸ್ತಾನ ರಾಯಲ್ಸ್ ತಂಡ ಸನ್ ರೈಸರ್ಸ್ ಹೈದರಾಬಾದ್ ಗೆ ಗೆಲ್ಲಲು 244 ರನ್ ಗಳ ಬೃಹತ್ ಗುರಿ ನೀಡಿತ್ತು.

ನಿಗಧಿತ 20 ಓವರ್ ನಲ್ಲಿ 8 ವಿಕೆಟ್ ನಷ್ಟಕ್ಕೆ 243 ರನ್ ಗಳಿಸಿತು. ಆ ಮೂಲಕ ಸನ್ ರೈಸರ್ಸ್ ಹೈದರಾಬಾದ್ ತಂಡಕ್ಕೆ ಗೆಲ್ಲಲು 244 ರನ್ ಗಳ ಬೃಹತ್ ಗುರಿ ನೀಡಿತು.

ಬೃಹತ್ ಗುರಿ ಬೆನ್ನಟ್ಟಿದ ಸನ್ ರೈಸರ್ಸ್ ತಂಡ ಅಭಿಷೇಕ್ ಶರ್ಮಾ ವಿಕೆಟ್ ಕಳೆದುಕೊಳ್ಳುವ ಮೂಲಕ ಆರಂಭಿಕ ಆಘಾತ ಎದುರಿಸಿತು. ಮತ್ತೋರ್ವ ಆರಂಭಿಕ ಆಟಗಾರ ಟ್ರಾವಿಸ್ ಹೆಡ್, ಇಶಾನ್ ಕಿಶನ್ ಚೇತರಿಕೆಯ ಜೊತೆಯಾಟ ಆಡಿದರಾದರೂ ಉತ್ತಮ ಇನ್ನಿಂಗ್ಸ್ ಕಟ್ಟುವಲ್ಲಿ ವಿಫಲವಾದರು. ಸ್ಮರಣ್ ರವಿಚಂದ್ರನ್ ಒಂದು ರನ್ ಗಳಿಸಿ ನಿರಾಶೆ ಮೂಡಿಸಿದರು. ಹೆನ್ರಿಕ್ ಕ್ಲಾಸೆನ್, ನಿತೀಶ್ ಕುಮಾರ್ ರೆಡ್ಡಿ, ಸಲೀಲ್ ಅರೋರಾ ಎದುರಾಳಿ ತಂಡದ ಬೌಲರ್ ಗಳನ್ನು ಸಮರ್ಥವಾಗಿ ಎದುರಿಸಲು ವಿಫಲರಾದರು. ಅಂತಿಮವಾಗಿ ಸನ್ ರೈಸರ್ಸ್ ತಂಡ 19.2 ಓವರ್ ಗಳಿಗೆ 196 ರನ್ ಗಳಿಗೆ ತನ್ನೆಲ್ಲಾ ವಿಕೆಟ್ ಕಳೆದುಕೊಂಡು ಸೋಲೊಪ್ಪಿಕೊಂಡಿತು. ಮುಂದಿನ ಪಂದ್ಯದಲ್ಲಿ ರಾಜಸ್ತಾನ ರಾಯಲ್ಸ್ ತಂಡ ಗುಜರಾತ್ ತಂಡವನ್ನು ಎದುರಿಸಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com