IPL 2026: LSG ತಂಡದ ನಾಯಕನ ಸ್ಥಾನಕ್ಕೆ ರಿಷಭ್ ರಾಜೀನಾಮೆ; ಶಾಕಿಂಗ್ ನಿರ್ಧಾರ ಪ್ರಕಟಿಸಿದ ಪಂತ್!

ಪಂತ್ ಅವರ ರಾಜೀನಾಮೆಯನ್ನು ತಂಡದ ಆಡಳಿತ ಮಂಡಳಿ ಅಂಗೀಕರಿಸಿದೆ. ಈ ವಿಷಯವನ್ನು LSG ತಂಡ ಸಾಮಾಜಿಕ ಜಾಲತಾಣದ ಪ್ರಕಟಣೆಯ ಮೂಲಕ ದೃಢಪಡಿಸಿದೆ.
Photo | BCCI
ರಿಷಭ್ ಪಂತ್
Updated on: 

ಲಖನೌ: IPL 2026ರ ಆವೃತ್ತಿಯ ಫೈನಲ್ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿರುವ ಹೊತ್ತಿನಲ್ಲೇ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ ರಿಷಭ್ ಪಂತ್ ಅವರು ಶುಕ್ರವಾರ ಶಾಕಿಂಗ್ ನಿರ್ಧಾರ ಪ್ರಕಟಿಸಿದ್ದಾರೆ.

ನಿರಾಶಾದಾಯಕ ಪ್ರದರ್ಶನ ನೀಡಿದ ಲಕ್ನೊ ಸೂಪರ್ ಜೈಂಟ್ಸ್ ತಂಡದ ನಾಯಕ ರಿಷಭ್ ಪಂತ್ ಅವರು ತಮ್ಮ ನಾಯಕತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಪಂತ್ ಅವರ ರಾಜೀನಾಮೆಯನ್ನು ತಂಡದ ಆಡಳಿತ ಮಂಡಳಿ ಅಂಗೀಕರಿಸಿದೆ. ಈ ವಿಷಯವನ್ನು LSG ತಂಡ ಸಾಮಾಜಿಕ ಜಾಲತಾಣದ ಪ್ರಕಟಣೆಯ ಮೂಲಕ ದೃಢಪಡಿಸಿದೆ.

"ರಿಷಭ್ ಪಂತ್ ಅವರ ಈ ವಿನಂತಿಯೊಂದಿಗೆ ಫ್ರಾಂಚೈಸಿಯನ್ನು ಸಂಪರ್ಕಿಸಿದ್ದಾರೆ ಮತ್ತು ನಾವು ಅದನ್ನು ಗೌರವದಿಂದ ಸ್ವೀಕರಿಸಿದ್ದೇವೆ" ಎಂದು ಟಾಮ್ ಮೂಡಿ ಹೇಳಿದ್ದಾರೆ.

Photo | BCCI
IPL 2026: ನಾಯಕ ರುತುರಾಜ್ ಗಾಯಕ್ವಾಡ್ ವಿರುದ್ಧ ಮುಗಿಬಿದ್ದ CSK ಅಭಿಮಾನಿಗಳು; ಬೆಂಬಲಕ್ಕೆ ನಿಂತ ಆರ್ ಅಶ್ವಿನ್!

2026ರ ಐಪಿಎಲ್ ಆವೃತ್ತಿಯಲ್ಲಿ ತಂಡವು ಅತ್ಯಂತ ಕಳಪೆ ಪ್ರದರ್ಶನ ನೀಡಿ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನ ಪಡೆದ ಬೆನ್ನಲ್ಲೇ ಪಂತ್ ಈ ನಿರ್ಧಾರ ಕೈಗೊಂಡಿದ್ದಾರೆ.

ಪಂತ್ ನಾಯಕತ್ವದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಈ ಸೀಸನ್‌ನಲ್ಲಿ ಆಡಿದ 14 ಪಂದ್ಯಗಳಲ್ಲಿ ಕೇವಲ 4 ಪಂದ್ಯಗಳನ್ನು ಮಾತ್ರ ಗೆದ್ದು, ಅಂಕಪಟ್ಟಿಯಲ್ಲಿ 10ನೇ ಸ್ಥಾನ ಪಡೆದುಕೊಂಡಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com