IPL 2026: ಈ ಸಲನೂ ಕಪ್ ನಮ್ದೇ... ಸತತ 2ನೇ ಬಾರಿ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡ RCB; GT ಧೂಳಿಪಟ

ಇಂದು ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಅಂತಿಮ ಪಂದ್ಯದಲ್ಲಿ, ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ಟೈಟಾನ್ಸ್, ನಿಗದಿತ 20 ಓವರ್‌ಗಳಲ್ಲಿ ಎಂಟು ವಿಕೆಟ್‌ಗಳ ನಷ್ಟಕ್ಕೆ 155 ರನ್ ಗಳಿಸಿತು.
Rcb won 2nd ipl trophy
2ನೇ ಬಾರಿ ಐಪಿಎಲ್ ಕಪ್ ಗೆದ್ದ RCB
Updated on

ಅಹಮದಾಬಾದ್‌: ಅಹಮದಾಬಾದ್‌ನಲ್ಲಿ ಭಾನುವಾರ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್)ನ 19ನೇ ಸೀಸನ್​ನ ಫೈನಲ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್(GT) ತಂಡದ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು(RCB) ಭರ್ಜರಿ ಗೆಲುವು ಸಾಧಿಸುವ ಮೂಲಕ ಸತತ ಎರಡನೇ ಬಾರಿ ಟ್ರೋಫಿ ಮುಡಿಗೇರಿಸಿಕೊಂಡಿದೆ.

ಇಂದು ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಅಂತಿಮ ಪಂದ್ಯದಲ್ಲಿ, ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ಟೈಟಾನ್ಸ್, ನಿಗದಿತ 20 ಓವರ್‌ಗಳಲ್ಲಿ ಎಂಟು ವಿಕೆಟ್‌ಗಳ ನಷ್ಟಕ್ಕೆ 155 ರನ್ ಗಳಿಸಿತು.

ಗುಜರಾತ್ ತಂಡದ ಪರವಾಗಿ, ವಾಷಿಂಗ್ಟನ್ ಸುಂದರ್ 37 ಎಸೆತಗಳಲ್ಲಿ ಅಜೇಯ 50 ರನ್ ಗಳಿಸಿದರು.

Rcb won 2nd ipl trophy
IPL 2026 Final: RCB ತಂಡಕ್ಕೆ 156 ರನ್ ಗುರಿ ನೀಡಿದ Gujarat Titans

ಆರ್‌ಸಿಬಿ ಪರ ಭುವನೇಶ್ವರ್ ಕುಮಾರ್ ಮತ್ತು ಹ್ಯಾಜಲ್‌ವುಡ್ ತಲಾ ಎರಡು ವಿಕೆಟ್ ಪಡೆದರೆ, ರಸಿಕ್ ಸಲಾಂ ದಾರ್ ಮೂರು ವಿಕೆಟ್ ಪಡೆದರು. ಕೃನಾಲ್ ಪಾಂಡ್ಯ ಒಂದು ವಿಕೆಟ್ ಪಡೆದರು. ಎರಡು ವಿಕೆಟ್ ಗಳಿಸುವ ಮೂಲಕ, ಭುವನೇಶ್ವರ್ ಕುಮಾರ್ ಈಗಾಗಲೇ ಪರ್ಪಲ್ ಕ್ಯಾಪ್ ರೇಸ್‌ನಲ್ಲಿ ಕಗಿಸೊ ರಬಾಡ ಅವರ ದಾಖಲೆಯನ್ನು ಸರಿಗಟ್ಟಿದ್ದಾರೆ.

ಗೆಲುವಿಗೆ 156 ರನ್ ಗಳ ಗುರಿ ಬೆನ್ನತ್ತಿದ ಆರ್ ಸಿಬಿ, ವಿರಾಟ್ ಕೊಹ್ಲಿ(75) ಅಜೇಯ ಭರ್ಜರಿ ಅರ್ಧ ಶತಕ ಹಾಗೂ ವೆಂಕಟೇಶ್ ಅಯ್ಯರ್(32) ಅವರ ಅದ್ಭುತ ಬ್ಯಾಟಿಂಗ್ ನೆರವಿನಿಂದ 18 ಓವರ್ ಗಳಲ್ಲಿ ಐದು ವಿಕೆಟ್ ಕಳೆದುಕೊಂಡು 161 ರನ್ ಗಳಿಸುವ ಮೂಲಕ ಐದು ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X
Kannada Prabha
www.kannadaprabha.com