India vs New Zealand, 1st ODI: ಮತ್ತೊಂದು ವಿಶ್ವ ದಾಖಲೆ ಬರೆದ ವಿರಾಟ್ ಕೊಹ್ಲಿ!

ಆಕ್ಲೆಂಡ್‌ನಲ್ಲಿ ನಡೆಯುತ್ತಿರುವ ಮೊದಲ ಏಕದಿನ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ 40.2 ಓವರ್‌ಗಳಲ್ಲಿ 185 ರನ್‌ಗಳಿಗೆ ಆಲೌಟ್ ಆಯಿತು.
India vs New Zealand,1st ODI: Virat Kohli Breaks Another World Record
ವಿರಾಟ್ ಕೊಹ್ಲಿ
Updated on: 

ಆಕ್ಲೆಂಡ್‌: ಟಿ20 ಸರಣಿಯ ಬಳಿಕ ಇದೀಗ ಟೀಮ್ ಇಂಡಿಯಾ ಐದು ಪಂದ್ಯಗಳ ಏಕದಿನ ಸರಣಿಯಲ್ಲಿ ನ್ಯೂಜಿಲೆಂಡ್ ವಿರುದ್ಧ ಸೆಣಸುತ್ತಿದ್ದು, ಮೊದಲ ಏಕದಿನ ಪಂದ್ಯದಲ್ಲಿಯೇ ವಿರಾಟ್ ಕೊಹ್ಲಿ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

ಆಕ್ಲೆಂಡ್‌ನಲ್ಲಿ ನಡೆಯುತ್ತಿರುವ ಮೊದಲ ಏಕದಿನ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ 40.2 ಓವರ್‌ಗಳಲ್ಲಿ 185 ರನ್‌ಗಳಿಗೆ ಆಲೌಟ್ ಆಯಿತು. ಗೆಲುವಿಗೆ 186 ರನ್‌ಗಳ ಗುರಿ ಬೆನ್ನಟ್ಟಿದ ಭಾರತ ತಂಡಕ್ಕೆ ವಿರಾಟ್ ಕೊಹ್ಲಿ ಮತ್ತು ಶುಭಮನ್ ಗಿಲ್ ಇನ್ನಿಂಗ್ಸ್‌ಗೆ ಸ್ಥಿರತೆ ಒದಗಿಸಿದ್ದಾರೆ.

ರೋಹಿತ್ ಶರ್ಮಾ ಔಟಾದ ನಂತರ ಉಂಟಾದ ಒತ್ತಡವನ್ನು ಕಡಿಮೆ ಮಾಡಲು ವಿರಾಟ್ ಕೊಹ್ಲಿ ಕೆಲವು ಬೌಂಡರಿಗಳನ್ನು ಬಾರಿಸಿದರು. ರೋಹಿತ್ ಶರ್ಮಾ ಅವರು ಕೈಲ್ ಜೇಮಿಸನ್ ಅವರ ಬೌಲಿಂಗ್‌ನಲ್ಲಿ ಎದುರಿಸಿದ ಮೊದಲ ಆರು ಎಸೆತಗಳಲ್ಲಿ ಯಾವುದೇ ರನ್ ಗಳಿಸದೆ (ಡಕ್) ಔಟಾದರು.

India vs New Zealand,1st ODI: Virat Kohli Breaks Another World Record
ಕೇವಲ 14 ಎಸೆತಗಳಲ್ಲೇ ಅರ್ಧ ಶತಕ; ಮಹಿಳಾ T20ಯಲ್ಲಿ ವಿಶ್ವ ದಾಖಲೆ ಬರೆದ RCB ಆಟಗಾರ್ತಿ!

ಮತ್ತೊಂದು ವಿಶ್ವ ದಾಖಲೆ ಬರೆದ ವಿರಾಟ್ ಕೊಹ್ಲಿ

ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ವಿರಾಟ್ ಕೊಹ್ಲಿ ಅವರು ಏಕದಿನ ಕ್ರಿಕೆಟ್​ನಲ್ಲಿ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

ವಿರಾಟ್ ಕೊಹ್ಲಿ ಇಂದು ಮೂರನೇ ಎಸೆತದಲ್ಲೇ ಫೋರ್ ಬಾರಿಸುವ ಮೂಲಕ ಏಕದಿನ ಕ್ರಿಕೆಟ್​ನಲ್ಲಿ 3ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿ 13 ಸಾವಿರ ರನ್ ಪೂರೈಸಿದರು. ಈ ಮೂಲಕ ಏಕದಿನ ಕ್ರಿಕೆಟ್ ಇತಿಹಾಸದಲ್ಲೇ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದು 13 ಸಾವಿರ ರನ್ ಕಲೆಹಾಕಿದ ವಿಶ್ವದ ಏಕೈಕ ಬ್ಯಾಟರ್ ಎಂಬ ಹೆಗ್ಗಳಿಕೆಯನ್ನು ವಿರಾಟ್ ಕೊಹ್ಲಿ ತಮ್ಮದಾಗಿಸಿಕೊಂಡಿದ್ದಾರೆ. ಅಂದರೆ ಕೊಹ್ಲಿಯನ್ನು ಹೊರತುಪಡಿಸಿ ಒಡಿಐ ಕ್ರಿಕೆಟ್​ನಲ್ಲಿ ಯಾವುದೇ ಬ್ಯಾಟರ್ ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿ 13 ಸಾವಿರ ರನ್ ಗಳಿಸಿಲ್ಲ.

ಈ ಹಿಂದೆ ಏಕದಿನ ಕ್ರಿಕೆಟ್​ನಲ್ಲಿ ಆಸ್ಟ್ರೇಲಿಯಾದ ಮಾಜಿ ನಾಯಕ ರಿಕಿ ಪಾಂಟಿಂಗ್ ಅವರು 330 ಇನಿಂಗ್ಸ್​ಗಳ ಮೂಲಕ 12,662 ರನ್ ಗಳಿಸಿದ್ದೇ ಸರ್ವಶ್ರೇಷ್ಠ ದಾಖಲೆಯಾಗಿತ್ತು. ಈ ದಾಖಲೆಯನ್ನು ಈ ವರ್ಷದ ಆರಂಭದಲ್ಲೇ ಅಳಿಸಿ ಹಾಕಿದ್ದ ವಿರಾಟ್ ಕೊಹ್ಲಿ ಇದೀಗ ಹೊಸ ಇತಿಹಾಸ ನಿರ್ಮಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X