India A vs UAE: 28 ಎಸೆತಗಳಲ್ಲಿ ಶತಕ; 40 ಎಸೆತಗಳಲ್ಲಿ 150 ರನ್: ಹಲವು ವಿಶ್ವ ದಾಖಲೆ ಬರೆದ ವೈಭವ್ ಸೂರ್ಯವಂಶಿ!
'ಏಷ್ಯಾ ಕಪ್ ರೈಸಿಂಗ್ ಸ್ಟಾರ್ಸ್ 2026' ಟೂರ್ನಿಯ ಗ್ರೂಪ್ ಹಂತದ ಪಂದ್ಯದಲ್ಲಿ ಯುಎಇ (UAE) ವಿರುದ್ಧ ಭಾರತ 'ಎ' ತಂಡದ ವೈಭವ್ ಸೂರ್ಯವಂಶಿ ಕೇವಲ 28 ಎಸೆತಗಳಲ್ಲಿ ಭರ್ಜರಿ ಶತಕ ಸಿಡಿಸಿದ್ದಾರೆ.

ಉದಯೋನ್ಮುಖ ಪ್ರತಿಭೆ, ಬ್ಯಾಟಿಂಗ್ ಸೆನ್ಸೇಷನ್ ವೈಭವ್ ಸೂರ್ಯವಂಶಿ ಯುಎಇ (UAE) ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸುವ ಮೂಲಕ ಹಲವು ವಿಶ್ವ ದಾಖಲೆಗಳನ್ನು ಬರೆದಿದ್ದಾರೆ.
'ಏಷ್ಯಾ ಕಪ್ ರೈಸಿಂಗ್ ಸ್ಟಾರ್ಸ್ 2026' ಟೂರ್ನಿಯ ಗ್ರೂಪ್ ಹಂತದ ಪಂದ್ಯದಲ್ಲಿ ಯುಎಇ (UAE) ವಿರುದ್ಧ ಭಾರತ 'ಎ' ತಂಡದ ವೈಭವ್ ಸೂರ್ಯವಂಶಿ ಕೇವಲ 28 ಎಸೆತಗಳಲ್ಲಿ ಭರ್ಜರಿ ಶತಕ ಸಿಡಿಸಿದ್ದಾರೆ.
15 ವರ್ಷದ ವೈಭವ್, ಏಳು ಓವರ್‌ಗಳಿಗಿಂತ ಕಡಿಮೆ ಅವಧಿಯಲ್ಲಿ ಶತಕ ಪೂರೈಸುವ ಮೂಲಕ 'ಲಿಸ್ಟ್ ಎ' (List A) ಕ್ರಿಕೆಟ್ ಇತಿಹಾಸದಲ್ಲೇ ಅತಿ ವೇಗದ ಶತಕ ದಾಖಲಿಸಿದ್ದಾರೆ. ಅಲ್ಲದೆ 40 ಎಸೆತಗಳಲ್ಲಿ 150 ರನ್ ಗಳಿಸುವ ಮೂಲಕ ಹಲವು ದಾಖಲೆಗಳನ್ನು ಬರೆದಿದ್ದಾರೆ.
ಯುಎಇ ವಿರುದ್ಧ ಗೆಲುವಿಗೆ 250 ರನ್‌ಗಳ ಗುರಿ ಬೆನ್ನಟ್ಟದಿ ಭಾರತ ತಂಡವು, 9 ಓವರ್‌ಗಳ ಅಂತ್ಯಕ್ಕೆ 2 ವಿಕೆಟ್ ನಷ್ಟಕ್ಕೆ 162 ರನ್ ಗಳಿಸಿದೆ.
ಸದ್ಯ ವೈಭವ್ ಸೂರ್ಯವಂಶಿ ಮತ್ತು ರಿಂಕು ಸಿಂಗ್ ಕ್ರೀಸ್‌ನಲ್ಲಿದ್ದಾರೆ. ಸೂರ್ಯವಂಶಿ ಕೇವಲ 16 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



