2nd Test: ನ್ಯೂಜಿಲೆಂಡ್ ಬೌಲರ್`ಗಳ ಅಬ್ಬರಕ್ಕೆ ಬ್ರೇಕ್ ಹಾಕಿದ ಭಾರತದ ವಿಕೆಟ್ ಕೀಪರ್ ಬ್ಯಾಟರ್, ಆಪತ್ಭಾಂದವ ದ್ರುವ್ ಜುರೆಲ್!

ಕ್ರೈಸ್ಟ್ ಚರ್ಚ್: 2ನೇ ಟೆಸ್ಟ್ ಪಂದ್ಯದ 3ನೇ ದಿನದಾಟದಲ್ಲಿ ಕಿವೀಸ್ ಬೌಲರ್ ಗಳ ಆರ್ಭಟಕ್ಕೆ ಭಾರತದ ವಿಕೆಟ್ ಕೀಪರ್ ಬ್ಯಾಟರ್ ದ್ರುವ್ ಜುರೆಲ್ ಬ್ರೇಕ್ ಹಾಕಿದ್ದು ಫಾಲೋ ಆನ್ ಭೀತಿಯಿಂದ ಭಾರತವನ್ನು ಪಾರು ಮಾಡಿದರು.
ಕ್ರೈಸ್ಟ್ ಚರ್ಚ್ ನ ಹ್ಯಾಗ್ಲೆ ಓವಲ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ 2ನೇ ಟೆಸ್ಟ್ ಪಂದ್ಯದಲ್ಲಿ ನ್ಯೂಜಿಲೆಂಡ್ ನೀಡಿದ 356 ರನ್ ಗಳಿಗೆ ಉತ್ತರವಾಗಿ ತನ್ನ ಮೊದಲ ಇನ್ನಿಂಗ್ಸ್ ನಲ್ಲಿ ಭಾರತ 246 ರನ್ ಗಳಿಗೆ ಆಲೌಟ್ ಆಯಿತು.
ಇನ್ನಿಂಗ್ಸ್ ಆರಂಭಿಸಿದ್ದ ಭಾರತ ತಂಡ ಕಿವೀಸ್ ವೇಗಿಗಳ ಪ್ರಾಬಲ್ಯದ ಎದುರು ಮಂಕಾಯಿತು. ಭಾರತ ತಂಡದ ಅಗ್ರ ಕ್ರಮಾಂಕದ ಬ್ಯಾಟರ್ ಗಳು ಸಂಪೂರ್ಣ ವಿಫಲವಾಗಿದ್ದು, ಭಾರತ ಮರ್ಮಾಘಾತ ಎದುರಿಸಿತು.
ತಂಡದ ಎಲ್ಲ ಬ್ಯಾಟರ್ ಗಳೂ ರನ್ ಗಳಿಸುವಲ್ಲಿ ವಿಫಲವಾದಾಗ ಮಧ್ಯಮ ಕ್ರಮಾಂಕದಲ್ಲಿ ಧ್ರುವ್ ಜುರೆಲ್ 88 ರನ್ ಗಳಿಸಿ ಭಾರತಕ್ಕೆ ಆಪತ್ಭಾಂದವರಾದರು. ಜುರೆಲ್ ಅವರ ಅಮೋಘ ಬ್ಯಾಟಿಂಗ್ ನಿಂದ ಭಾರತ ಫಾಲೋ ಆನ್ ಭೀತಿಯಿಂದ ಪಾರಾಯಿತು.
ಆದರೂ ಜುರೆಲ್ ಕೇವಲ 12 ರನ್ ಗಳ ಅಂತರದಲ್ಲಿ ಶತಕ ವಂಚಿತರಾರು. ಅಂತಿಮವಾಗಿ ಭಾರತ 246 ರನ್ ಗಳಿಗೆ ಆಲೌಟ್ ಆಯಿತು. ಅಂತೆಯೇ 110 ರನ್ ಗಳ ಮುನ್ನಡೆ ಸಾಧಿಸಿದೆ.
ಕಿವೀಸ್ ಪರ ಕೈಲ್ ಜೇಮಿಸನ್ 4, ಮ್ಯಾಟ್ ಹೆನ್ರಿ, ನಥನ್ ಸ್ಮಿತ್ ಮತ್ತು ಜೇಕಬ್ ಡಫಿ ತಲಾ 2 ವಿಕೆಟ್ ಪಡೆದರು.
ಕಿವೀಸ್ ಗೆ ಆರಂಭಿಕ ಆಘಾತ
ಇತ್ತ ಮೊದಲ ಇನ್ನಿಂಗ್ಸ್ ಮುನ್ನಡೆಯೊಂದಿಗೆ 2ನೇ ಇನ್ನಿಂಗ್ಸ್ ಆರಂಭಿಸಿರುವ ನ್ಯೂಜಿಲೆಂಡ್ ತಂಡಕ್ಕೆ ಜಸ್ ಪ್ರೀತ್ ಬುಮ್ರಾ ಆರಂಭಿಕ ಆಘಾತ ನೀಡಿದ್ದಾರೆ. 8 ರನ್ ಗಳಿಸಿದ್ದ ಟಾಮ್ ಲಾಥಮ್ ಕ್ಲೀನ್ ಬೌಲ್ಡ್ ಮಾಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



