Ranji Trophy: ಕರ್ನಾಟಕ ತಂಡ ಪ್ರಕಟ, ಸ್ಮರಣ್ ಗೆ ಸಾರಥ್ಯ, KL ರಾಹುಲ್, ಪ್ರಸಿದ್ಧ್ ಕೃಷ್ಣಗೆ ಸ್ಥಾನ!

15 ಸದಸ್ಯರ ತಂಡಕ್ಕೆ ಯುವ ಬ್ಯಾಟರ್ ರವಿಚಂದ್ರನ್ ಸ್ಮರಣ್ ನಾಯಕನಾಗಿ ಆಯ್ಕೆಯಾಗಿದ್ದಾರೆ. ಈ ಮೂಲಕ ದೇವದತ್ ಪಡಿಕ್ಕಲ್ ಅವರಿಂದ ನಾಯಕತ್ವದ ಜವಾಬ್ದಾರಿ ಸ್ಮರಣ್ ಹೆಗಲೇರಿದೆ.
KL Rahul-Prasidh named in Karnataka squad
ಕರ್ನಾಟಕ ರಣಜಿ ಆಟಗಾರ
Updated on: 

ಬೆಂಗಳೂರು: ಮುಂಬರುವ ರಣಜಿ ಟ್ರೋಫಿ ಟೂರ್ನಿಯ ಆರಂಭಿಕ ಪಂದ್ಯಕ್ಕೆ ಕರ್ನಾಟಕ ತಂಡ ಪ್ರಕಟವಾಗಿದ್ದು, ಯುವ ಬ್ಯಾಟರ್ ರವಿಚಂದ್ರನ್ ಸ್ಮರಣ್ ತಂಡದ ನಾಯಕತ್ವ ವಹಿಸಲಿದ್ದಾರೆ.

ಕರ್ನಾಟಕ ತಂಡ ಅಕ್ಟೋಬರ್ 11ರಿಂದ ವಿಜಯವಾಡದಲ್ಲಿ ಆಂಧ್ರ ಪ್ರದೇಶ ವಿರುದ್ಧ ತನ್ನ ರಣಜಿ ಅಭಿಯಾನ ಆರಂಭಿಸಲಿದೆ. ಕಳೆದ ಆವೃತ್ತಿಯಲ್ಲಿ ರನ್ನರ್‌ಅಪ್ ಆಗಿದ್ದ ಕರ್ನಾಟಕ ಈ ಬಾರಿ ಮಾಜಿ ವೇಗದ ಬೌಲರ್ ಆರ್. ವಿನಯ್ ಕುಮಾರ್ ನೇತೃತ್ವದ ಹೊಸ ಕೋಚಿಂಗ್ ತಂಡದೊಂದಿಗೆ ಕಣಕ್ಕಿಳಿಯಲಿದೆ.

15 ಸದಸ್ಯರ ತಂಡಕ್ಕೆ ಯುವ ಬ್ಯಾಟರ್ ರವಿಚಂದ್ರನ್ ಸ್ಮರಣ್ ನಾಯಕನಾಗಿ ಆಯ್ಕೆಯಾಗಿದ್ದಾರೆ. ಈ ಮೂಲಕ ದೇವದತ್ ಪಡಿಕ್ಕಲ್ ಅವರಿಂದ ನಾಯಕತ್ವದ ಜವಾಬ್ದಾರಿ ಸ್ಮರಣ್ ಹೆಗಲೇರಿದೆ. ಕರ್ನಾಟಕದ ಬೌಲಿಂಗ್ ವಿಭಾಗ ಈ ಬಾರಿ ಯುವ ಆಟಗಾರರನ್ನು ಹೆಚ್ಚಾಗಿ ಒಳಗೊಂಡಿದೆ.

ಅನುಭವಿ ವೈಶಾಖ್ ವಿಜಯಕುಮಾರ್ ಹಾಗೂ ವಿದ್ವತ್ ಕಾವೇರಪ್ಪ ಗಾಯದ ಸಮಸ್ಯೆಯಿಂದ ಇನ್ನೂ ಚೇತರಿಸಿಕೊಳ್ಳುತ್ತಿರುವುದರಿಂದ ತಂಡದಲ್ಲಿ ಅವರ ಅನುಪಸ್ಥಿತಿ ಕಂಡುಬಂದಿದೆ.

ಇದೇ ವೇಳೆ, ದಿಗ್ಗಜ ಕ್ರಿಕೆಟಿಗ ರಾಹುಲ್ ದ್ರಾವಿಡ್ ಅವರ ಪುತ್ರ ಸಮಿತ್ ದ್ರಾವಿಡ್ ಅವರಿಗೆ ಆಲೂರಿನಲ್ಲಿ ನಡೆಯಲಿರುವ ವಿದರ್ಭ ವಿರುದ್ಧದ ಕೊಲೊನೆಲ್ ಸಿಕೆ ನಾಯ್ಡು ಟ್ರೋಫಿ ಪಂದ್ಯಕ್ಕಾಗಿ ರಾಜ್ಯ ತಂಡದಲ್ಲಿ ಸ್ಥಾನ ನೀಡಲಾಗಿದೆ.

KL Rahul-Prasidh named in Karnataka squad
ವಿನೂ ಮಂಕಡ್ ಟ್ರೋಫಿ: ಕರ್ನಾಟಕ ತಂಡದ ನಾಯಕನಾಗಿ ರಾಹುಲ್ ದ್ರಾವಿಡ್ ಪುತ್ರ ಅನ್ವಯ್ ಆಯ್ಕೆ!

KL ರಾಹುಲ್, ಪ್ರಸಿದ್ಧ್ ಕೃಷ್ಣಗೆ ಸ್ಥಾನ!

ಭಾರತ ತಂಡದ ಪ್ರಮುಖ ಆಟಗಾರರಾದ ಕೆಎಲ್ ರಾಹುಲ್ ಹಾಗೂ ವೇಗದ ಬೌಲರ್ ಪ್ರಸಿದ್ಧ್ ಕೃಷ್ಣ ಕರ್ನಾಟಕದಲ್ಲಿ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಮುಂಬರುವ ನ್ಯೂಜಿಲೆಂಡ್ ಟೆಸ್ಟ್ ಪ್ರವಾಸವನ್ನು ಗಮನದಲ್ಲಿಟ್ಟುಕೊಂಡು ಕೆಎಲ್ ರಾಹುಲ್ ಈ ಪಂದ್ಯದಲ್ಲಿ ಆಡುವ ಸಾಧ್ಯತೆ ಹೆಚ್ಚಿದೆ.

ಇದೇ ರೀತಿಯಲ್ಲಿ ಭಾರತ ತಂಡದ ಆಲ್‌ರೌಂಡರ್ ವಾಷಿಂಗ್ಟನ್ ಸುಂದರ್ ಅವರಿಗೂ ರಣಜಿ ಪಂದ್ಯಗಳಲ್ಲಿ ಆಡುವ ಅವಕಾಶ ಕಲ್ಪಿಸಲು ಬಿಸಿಸಿಐ ಕ್ರಮ ಕೈಗೊಂಡಿದೆ.

ವೆಸ್ಟ್ ಇಂಡೀಸ್ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಗೆ ಆಯ್ಕೆಯಾಗಿದ್ದ ವಾಷಿಂಗ್ಟನ್ ಸುಂದರ್ ಅವರನ್ನು ಗುರುವಾರ ಬಿಸಿಸಿಐ ವಾಪಸ್ ಕರೆಸಿಕೊಂಡಿದೆ. ನ್ಯೂಜಿಲೆಂಡ್ ಪ್ರವಾಸಕ್ಕೂ ಮುನ್ನ ತಮಿಳುನಾಡು ಪರ ಕೆಲವು ರಣಜಿ ಪಂದ್ಯಗಳಲ್ಲಿ ಅವರು ಆಡಲಿದ್ದಾರೆ.

ಇತ್ತ ಪ್ರಸಿದ್ಧ್ ಕೃಷ್ಣ ಕೂಡ ಕರ್ನಾಟಕ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಆದರೆ ಹ್ಯಾಮ್‌ಸ್ಟ್ರಿಂಗ್ ಗಾಯದಿಂದಾಗಿ ವೆಸ್ಟ್ ಇಂಡೀಸ್ ವಿರುದ್ಧದ ನಡೆಯುತ್ತಿರುವ ಏಕದಿನ ಸರಣಿಯಿಂದ ಹೊರಗುಳಿದಿರುವ ಹಿನ್ನೆಲೆಯಲ್ಲಿ ಅವರು ಆಂಧ್ರ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿಯುತ್ತಾರೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

ಕರ್ನಾಟಕ ತಂಡಕ್ಕೆ ಹೊಸ ಪ್ರಾಯೋಜಕರು

ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್‌ಸಿಎ) ರಾಜ್ಯ ಕ್ರಿಕೆಟ್ ತಂಡಗಳಿಗೆ ಹೊಸ ಪಾಲುದಾರಿಕೆಯನ್ನು ಗುರುವಾರ ಘೋಷಿಸಿದೆ. ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ (ಕೆಎಸ್‌ಟಿಡಿಸಿ) ಹಾಗೂ ಕರ್ನಾಟಕ ಪವರ್ ಟ್ರಾನ್ಸ್‌ಮಿಷನ್ ಕಾರ್ಪೊರೇಷನ್ ಲಿಮಿಟೆಡ್ (ಕೆಪಿಟಿಸಿಎಲ್) ಜತೆ ಕೆಎಸ್‌ಸಿಎ ಹೊಸ ಸಹಭಾಗಿತ್ವ ಮಾಡಿಕೊಂಡಿದೆ.

ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ವಿಶೇಷ ಸಮಾರಂಭದಲ್ಲಿ ಈ ಪಾಲುದಾರಿಕೆಯನ್ನು ಅಧಿಕೃತವಾಗಿ ಘೋಷಿಸಲಾಯಿತು. ಇದೇ ವೇಳೆ 2026-27ರ ಕ್ರಿಕೆಟ್ ಋತುವಿನ ಕರ್ನಾಟಕ ತಂಡದ ಹೊಸ ಜೆರ್ಸಿಯನ್ನೂ ಅನಾವರಣಗೊಳಿಸಲಾಯಿತು.

ಕರ್ನಾಟಕ ರಣಜಿ ತಂಡ:

ಆರ್. ಸ್ಮರಣ್ (ನಾಯಕ), ಕೆಎಲ್ ರಾಹುಲ್, ಕರುಣ್ ನಾಯರ್, ಮಯಾಂಕ್ ಅಗರ್ವಾಲ್, ಎ. ಗೌತಮ್, ಕೆವಿ ಅನೀಶ್, ಶ್ರೇಯಸ್ ಗೋಪಾಲ್, ಕ್ರುತಿಕ್ ಕೃಷ್ಣ, ಶಿಖರ್ ಶೆಟ್ಟಿ, ಪ್ರಸಿದ್ಧ್ ಕೃಷ್ಣ, ಅಭಿಲಾಷ್ ಶೆಟ್ಟಿ, ಮಾನವಂತ್ ಕುಮಾರ್, ಎಲ್.ಆರ್. ಕುಮಾರ್, ರಿತೇಶ್ ಭಟ್ಕಳ್, ಕೆಎಲ್ ಶ್ರೀಜಿತ್.

X
Kannada Prabha
www.kannadaprabha.com