'ದೆಹಲಿ ಪೊಲೀಸರು ಟಾಸ್ ಗೆದ್ದು, ಮೊದಲು ಬ್ಯಾಟಿಂಗ್ ಮಾಡಲಿ': ಪಾಕಿಸ್ತಾನ ಮಾಜಿ ಕ್ರಿಕೆಟಿಗನ ಪೋಸ್ಟ್ ವೈರಲ್​!

ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಯ ಬಗ್ಗೆ ಪಾಕಿಸ್ತಾನದ ಮಾಜಿ ಕ್ರಿಕೆಟಿಗರೊಬ್ಬರು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು, ಅವರ ಪೋಸ್ಟ್ ಭಾರೀ ವೈರಲ್ ಆಗುತ್ತಿದೆ.
Hope Delhi Police Wins The Toss: Former Pakistan Cricketer Sends Satirical Post Amid CJP Protests
ಡ್ಯಾನಿಶ್ ಕನೇರಿಯಾ
Updated on: 

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಕಾಕ್ರೋಚ್ ಜನತಾ ಪಾರ್ಟಿ(ಸಿಜೆಪಿ) ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬೃಹತ್ ಪ್ರತಿಭಟನೆ ನಡೆಸುತ್ತಿದ್ದು, ಈ ಪ್ರತಿಭಟನೆಯನ್ನು ತಡೆಯಲು ದೆಹಲಿ ಪೊಲೀಸರು ರಾಷ್ಟ್ರ ರಾಜಧಾನಿಯಲ್ಲಿ ಹಲವು ಕಠಿಣ ಕ್ರಮಗಳನ್ನು ತೆಗೆದುಕೊಂಡಿದ್ದಾರೆ.

ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಯ ಬಗ್ಗೆ ಪಾಕಿಸ್ತಾನದ ಮಾಜಿ ಕ್ರಿಕೆಟಿಗರೊಬ್ಬರು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು, ಅವರ ಪೋಸ್ಟ್ ಭಾರೀ ವೈರಲ್ ಆಗುತ್ತಿದೆ.

"ದೆಹಲಿ ಪೊಲೀಸರು ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸುತ್ತಾರೆ ಎಂದು ನಾನು ಭಾವಿಸುತ್ತೇನೆ! " ಎಂದು ಭಾರತೀಯ ಮೂಲದ ಪಾಕ್ ಮಾಜಿ ಕ್ರಿಕೆಟಿಗ ಡ್ಯಾನಿಶ್ ಕನೇರಿಯಾ ಅವರು X ನಲ್ಲಿ ಪೋಸ್ಟ್ ಮಾಡಿದ್ದಾರೆ.

Hope Delhi Police Wins The Toss: Former Pakistan Cricketer Sends Satirical Post Amid CJP Protests
CJP ಪ್ರತಿಭಟನೆ: ದೆಹಲಿ ಪೊಲೀಸರ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆ!

ಸಿಜೆಪಿ ಪ್ರತಿಭಟನೆ ಹಾಗೂ ದೆಹಲಿ ಪೊಲೀಸರ ಕ್ರಮವನ್ನು ಕ್ರಿಕೆಟ್​ಗೆ ಹೋಲಿಸಿ ಕನೇರಿಯಾ ಮಾಡಿರುವ ಈ ಪೋಸ್ಟ್​ ಎಲ್ಲರ ಗಮನವನ್ನು ಸೆಳೆದಿದೆ.

ದೆಹಲಿ ಪೊಲೀಸರು ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸುತ್ತಾರೆಂದು ನಾನು ನಂಬುತ್ತೇನೆ ಎಂದು ಹೇಳುವ ಮೂಲಕ ಕನೇರಿಯಾ ಅವರು ಪ್ರತಿಭಟನಕಾರರ ವಿರುದ್ಧ ಪೊಲೀಸರೇ ಮೊದಲು ಆ್ಯಕ್ಷನ್​ಗೆ ಇಳಿಯಲಿ ಎಂದು ಹೇಳಿದ್ದಾರೆ. ಈ ಮೂಲಕ ದೆಹಲಿ ಪೊಲೀಸರು ತಮ್ಮ ಕೋಲುಗಳನ್ನು ಬ್ಯಾಟ್‌ಗಳಾಗಿ ಬಳಸುವುದನ್ನು ಬೆಂಬಲಿಸುವುದಾಗಿ ತಿಳಿಸಿದ್ದಾರೆ.

X
Kannada Prabha
www.kannadaprabha.com