

ಬೆಂಗಳೂರು: ನಿರಂತರ ಮಳೆಯಿಂದಾಗಿ ಬೆಂಗಳೂರಿನಲ್ಲಿ ಶನಿವಾರ ನಡೆಯುತ್ತಿದ್ದ ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ 5 ಪಂದ್ಯಗಳ ಟಿ20 ಸರಣಿಯ ಅಂತಿಮ ಪಂದ್ಯ ರದ್ದಾಗಿದ್ದು, ಟ್ರೋಫಿಯನ್ನು ಎರಡೂ ತಂಡಗಳಿಗೆ ಹಂಚಿಕೆ ಮಾಡಲಾಗಿದೆ.
ಇಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ಪಂದ್ಯವನ್ನು ಮಳೆಯಿಂದಾಗಿ ತಲಾ 9 ಓವರ್ಗಳಿಗೆ ಸೀಮಿತಗೊಳಿಸಲಾಗಿತ್ತು.
ನಿರ್ಣಾಯಕ ಪಂದ್ಯದಲ್ಲಿ ಟಾಸ್ ಗೆದ್ದ ವೆಸ್ಟ್ ಇಂಡೀಸ್ ನಾಯಕ ಶಾಯ್ ಹೋಪ್ ಅವರು ಬೌಲಿಂಗ್ ಆಯ್ಕೆ ಮಾಡಿಕೊಂಡರು. ಹೀಗಾಗಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ 7.4 ಓವರ್ ಗಳಲ್ಲಿ ಐದು ವಿಕೆಟ್ ಕಳೆದುಕೊಂಡು 118 ರನ್ ಗಳಿಸಿತ್ತು.
8ನೇ ಓವರ್ನಲ್ಲಿ ಮತ್ತೆ ಮಳೆ ಸುರಿಯಲಾರಂಭಿಸಿತು. ಹೀಗಾಗಿ ಪಂದ್ಯವನ್ನು ಅರ್ಧಕ್ಕೆ ಸ್ಥಗಿತಗೊಳಿಸಲಾಗಿತ್ತು. ಆದರೆ ಕ್ರಮೇಣ ಮಳೆ ಜೋರಾದ ಕಾರಣ ಪಂದ್ಯವನ್ನುರದ್ದುಗೊಳಿಸಲು ತೀರ್ಮಾನಿಸಲಾಗಿದೆ. ಹೀಗಾಗಿ ಸರಣಿ 2-2 ರ ಸಮಬಲದೊಂದಿಗೆ ಅಂತ್ಯಗೊಂಡಿದ್ದು, ಉಭಯ ತಂಡಗಳು ಟ್ರೋಫಿಯನ್ನು ಹಂಚಿಕೊಂಡಿವೆ. ಏಕೆಂದರೆ ಸರಣಿಯಲ್ಲಿ ಉಭಯ ತಂಡಗಳು ತಲಾ 2 ಪಂದ್ಯಗಳನ್ನು ಗೆದ್ದು ಸಮಬಲ ಸಾಧಿಸಿವೆ.