India vs New Zealand: ಕೊನೆಗೂ ಪ್ಲೇಯಿಂಗ್ ಇಲೆವೆನ್‌ನಲ್ಲಿ ವೈಭವ್ ಸೂರ್ಯವಂಶಿಗೆ ಸ್ಥಾನ; ಆದ್ರೆ 'ವಂಡರ್‌ ಕಿಡ್‌'ಗೆ ಹೊಸ ಬ್ಯಾಟಿಂಗ್ ಕ್ರಮಾಂಕ!

2026ರ ಏಷ್ಯನ್ ಗೇಮ್ಸ್‌ನ ಸೆಮಿಫೈನಲ್ ಮತ್ತು ಫೈನಲ್ ಪಂದ್ಯಗಳಲ್ಲಿ ಆಡಿದ್ದ ವೈಭವ್ ಸೂರ್ಯವಂಶಿ ನಂತರ, ವೆಸ್ಟ್ ಇಂಡೀಸ್ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಯಲ್ಲಿ ಕೇವಲ ಬೆಂಚ್‌ಗೆ ಸೀಮಿತವಾಗಿದ್ದರು.
Shreyas Iyer-Vaibhav Sooryavanshi
ಶ್ರೇಯಸ್ ಅಯ್ಯರ್ ಮತ್ತು ವೈಭವ್ ಸೂರ್ಯವಂಶಿ
Updated on: 

ಭಾರತ ತಂಡದಲ್ಲಿ ಸ್ಥಾನ ಪಡೆದಿದ್ದರೂ ಪ್ಲೇಯಿಂಗ್ ಇಲೆವೆನ್‌ಗೆ ಬರಲು ಸಾಧ್ಯವಾಗದೇ ಅವಕಾಶ ವಂಚಿತರಾಗಿದ್ದ ವಂಡರ್ ಕಿಡ್​ ವೈಭವ್ ಸೂರ್ಯವಂಶಿ ಕೊನೆಗೂ ಶನಿವಾರ ಆಡುವ ಹನ್ನೊಂದರ ಬಳಗಕ್ಕೆ (playing XI) ಮರಳಿದ್ದಾರೆ.

2026ರ ಏಷ್ಯನ್ ಗೇಮ್ಸ್‌ನ ಸೆಮಿಫೈನಲ್ ಮತ್ತು ಫೈನಲ್ ಪಂದ್ಯಗಳಲ್ಲಿ ಆಡಿದ್ದ ವೈಭವ್ ಸೂರ್ಯವಂಶಿ ನಂತರ, ವೆಸ್ಟ್ ಇಂಡೀಸ್ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಯಲ್ಲಿ ಕೇವಲ ಬೆಂಚ್‌ಗೆ ಸೀಮಿತವಾಗಿದ್ದರು.

ನ್ಯೂಜಿಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲೂ ಅವರು ಆಡಿರಲಿಲ್ಲ. ಗಾಯದ ಸಮಸ್ಯೆಯಿಂದಾಗಿ ಇಶಾನ್ ಕಿಶನ್ ನ್ಯೂಜಿಲೆಂಡ್ ವಿರುದ್ಧದ ಎರಡನೇ ಪಂದ್ಯದಿಂದ ಹೊರಗುಳಿದಿದ್ದು, ಭಾರತ ತಂಡದ ಆಡಳಿತ ಮಂಡಳಿಯು 15 ವರ್ಷದ ಈ ಆಟಗಾರನಿಗೆ ತಂಡದಲ್ಲಿ ಅವಕಾಶ ಕಲ್ಪಿಸಿಕೊಟ್ಟಿದೆ.

Shreyas Iyer-Vaibhav Sooryavanshi
ಬರೀ ವೈಭವ್​, ವೈಭವ್​ ಅಂದ್ರೆ ಹೇಗೆ? ನಿಮ್ಮಿಷ್ಟದಂತೆ ತಂಡ ಆಯ್ಕೆ ಮಾಡಲು ಸಾಧ್ಯವಿಲ್ಲ: ಟೀಂ​ ಇಂಡಿಯಾ ಬ್ಯಾಟಿಂಗ್​ ಕೋಚ್ ಶಾಕಿಂಗ್ ಹೇಳಿಕೆ!

ನ್ಯೂಜಿಲೆಂಡ್‌ನ ದಕ್ಷಿಣ ದ್ವೀಪದಲ್ಲಿರುವ ಕ್ರೈಸ್ಟ್‌ಚರ್ಚ್‌ನ ಹ್ಯಾಗ್ಲಿ ಓವಲ್‌ನಲ್ಲಿ ನಡೆಯುತ್ತಿರುವ ಎರಡನೇ ಟಿ20 ಪಂದ್ಯದಲ್ಲಿ, ಟಾಸ್ ಗೆದ್ದ ಭಾರತ ತಂಡದ ನಾಯಕ ಶ್ರೇಯಸ್ ಅಯ್ಯರ್ ಅವರು ಮೊದಲು ಬೌಲಿಂಗ್ ಆಯ್ಕೆ ಮಾಡಿದ್ದಾರೆ.

ಇನ್ನು ತಂಡದಲ್ಲಿ ಮಾಡಲಾದ ಬದಲಾವಣೆಗಳ ಕುರಿತು ಮಾತನಾಡಿದ ನಾಯಕ ಶ್ರೇಯಸ್ ಅಯ್ಯರ್, ಸೂರ್ಯವಂಶಿ ಅವರು ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲಿದ್ದಾರೆ ಎಂದು ತಿಳಿಸಿದ್ದಾರೆ.

"ಇಶಾನ್‌ಗೆ ಗಾಯವಾಗಿರುವುದರಿಂದ, ಅವರ ಬದಲಿಗೆ ವೈಭವ್ ತಂಡಕ್ಕೆ ಸೇರ್ಪಡೆಗೊಂಡಿದ್ದಾರೆ. ಅವರು ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲಿದ್ದಾರೆ" ಎಂದು ಅಯ್ಯರ್ ಹೇಳಿದ್ದಾರೆ.

ಅಲ್ಲದೆ, ಆಡುವ ಹನ್ನೊಂದರ ಬಳಗದಲ್ಲಿ (ಪ್ಲೇಯಿಂಗ್ ಇಲೆವೆನ್) ಮಯಾಂಕ್ ಯಾದವ್ ಅವರ ಬದಲಿಗೆ ಪ್ರಿನ್ಸ್ ಯಾದವ್ ಅವರನ್ನು ಸೇರಿಸಲಾಗಿದೆ ಎಂದು ಭಾರತ ತಂಡದ ನಾಯಕ ಬಹಿರಂಗಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com