ಮತ್ತೆ ತಾಯಿಯಾಗ್ತಿದ್ದಾರಾ ಅನುಷ್ಕಾ ಶರ್ಮಾ? ಕೊಹ್ಲಿ ಜೊತೆ ಕಾಣಿಸಿಕೊಂಡ ಬಳಿಕ, ಪ್ರೆಗ್ನೆನ್ಸಿ ಬಗ್ಗೆ ಅಭಿಮಾನಿಗಳ ಊಹಾಪೋಹ! video

ಕ್ರಿಕೆಟಿಗ ವಿರಾಟ್ ಕೊಹ್ಲಿ ಜೊತೆ ಮುಂಬೈನಲ್ಲಿ ಕಾಣಿಸಿಕೊಂಡ ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ಇಂತಹದ್ದೊಂದು ಚರ್ಚೆ ಶುರುವಾಗಿದೆ. ದಂಪತಿ ಮೂರನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆಯೇ? ಎಂದು ಅಭಿಮಾನಿಗಳು ಪ್ರಶ್ನಿಸುತ್ತಿದ್ದಾರೆ.
Anushka Sharma pregnant
ಅನುಷ್ಕಾ ಶರ್ಮಾ ಮತ್ತು ವಿರಾಟ್ ಕೊಹ್ಲಿ
Updated on: 

ಮುಂಬೈ: ಬಾಲಿವುಡ್ ನಟಿ ಹಾಗೂ ಭಾರತ ಕ್ರಿಕೆಟ್ ತಂಡದ ರನ್ ಮೆಷಿನ್ ವಿರಾಟ್ ಕೊಹ್ಲಿ ಪತ್ನಿ ಅನುಷ್ಕಾ ಶರ್ಮಾ ಮತ್ತೆ ಗರ್ಭಿಣಿಯಾಗಿದ್ದಾರೆಯೇ? ಇಂತಹುದೊಂದು ಪ್ರಶ್ನೆ ಇದೀಗ ಅಭಿಮಾನಿಗಳ ವಲಯದಲ್ಲಿ ವ್ಯಾಪಕ ಚರ್ಚೆಯಾಗುತ್ತಿದೆ.

ಕ್ರಿಕೆಟಿಗ ವಿರಾಟ್ ಕೊಹ್ಲಿ ಜೊತೆ ಮುಂಬೈನಲ್ಲಿ ಕಾಣಿಸಿಕೊಂಡ ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ಇಂತಹದ್ದೊಂದು ಚರ್ಚೆ ಶುರುವಾಗಿದೆ. ದಂಪತಿ ಮೂರನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆಯೇ? ಎಂದು ಅಭಿಮಾನಿಗಳು ಪ್ರಶ್ನಿಸುತ್ತಿದ್ದಾರೆ.

ಆದರೆ, ಈ ಬಗ್ಗೆ ವಿರಾಟ್ ಕೊಹ್ಲಿ ಅಥವಾ ಅನುಷ್ಕಾ ಶರ್ಮಾ ದಂಪತಿ ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ.

Anushka Sharma pregnant
INDvsNZ: 'ಇವರ ತಡೆಯಲು ಹೊಸ ತಂತ್ರವೇ ಬೇಕು': ಅಸಹಾಯಕತೆ ತೋಡಿಕೊಂಡ ಕಿವೀಸ್ ನಾಯಕ! ಹೇಳಿದ್ದೇನು?

ಕೀರ್ತನೆ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡ ದಂಪತಿ

ಅಕ್ಟೋಬರ್‌ 25ರ ಭಾನುವಾರ ಮುಂಬೈನ ವರ್ಲಿಯ ಎಸ್‌ವಿಪಿ ಸ್ಟೇಡಿಯಂನ ಡೋಮ್‌ನಲ್ಲಿ ನಡೆದ ಅಮೆರಿಕದ ಭಕ್ತಿಗೀತೆ ಗಾಯಕ ಕೃಷ್ಣ ದಾಸ್ ಅವರ ನೇರ ಕೀರ್ತನೆ ಕಾರ್ಯಕ್ರಮದಲ್ಲಿ ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ಭಾಗವಹಿಸಿದ್ದರು. ಇದಕ್ಕೂ ಮುನ್ನ ದಂಪತಿ ಗೇಟ್‌ವೇ ಆಫ್ ಇಂಡಿಯಾ ಬಳಿಯೂ ಕಾಣಿಸಿಕೊಂಡಿದ್ದರು.

ಕಾರ್ಯಕ್ರಮದ ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಅನುಷ್ಕಾ ಭಕ್ತಿಗೀತೆಗಳಿಗೆ ಚಪ್ಪಾಳೆ ತಟ್ಟುತ್ತಾ ಹಾಡುತ್ತಿರುವುದು ಕಂಡುಬಂದಿದೆ. ಅವರ ಪಕ್ಕದಲ್ಲೇ ವಿರಾಟ್ ಕುಳಿತಿದ್ದರು. ಈ ವಿಡಿಯೊಗಳು ವೈರಲ್ ಆಗುತ್ತಿದ್ದಂತೆ ಅನುಷ್ಕಾ ಅವರ ಗರ್ಭಧಾರಣೆ ಕುರಿತ ಊಹಾಪೋಹಗಳೂ ಶುರುವಾಗಿವೆ.

ನೆಟ್ಟಿಗರು ಕೇಳಿದ್ದೇನು?

ವಿಡಿಯೊಗೆ ಪ್ರತಿಕ್ರಿಯಿಸಿದ ಕೆಲವರು ಅನುಷ್ಕಾ ಮತ್ತೆ ಗರ್ಭಿಣಿಯಾಗಿದ್ದಾರೆಯೇ ಎಂದು ಪ್ರಶ್ನಿಸಿದ್ದಾರೆ. ಮತ್ತೊಬ್ಬರು, 'ಅನುಷ್ಕಾ ಶರ್ಮಾ ಗರ್ಭಿಣಿಯಾಗಿದ್ದಾರೆ ಎಂದು ನನಗೆ ಮಾತ್ರ ಅನಿಸುತ್ತಿದೆಯೇ?' ಎಂದು ಬರೆದಿದ್ದಾರೆ.

ಇನ್ನೊಬ್ಬ ನೆಟ್ಟಿಗರು ತಮಾಷೆಯಾಗಿ, 'ತಾವು ಗರ್ಭಿಣಿ ಎಂಬ ವಿಷಯ ಅನುಷ್ಕಾಗೂ ಟ್ವಿಟರ್‌ನಿಂದಲೇ ಗೊತ್ತಾಗಿರಬಹುದು' ಎಂದು ಕಾಮೆಂಟ್ ಮಾಡಿದ್ದಾರೆ.

ಆದರೆ, ಸಾಮಾಜಿಕ ಜಾಲತಾಣಗಳಲ್ಲಿ ಇಂತಹ ಚರ್ಚೆಗಳು ನಡೆಯುತ್ತಿದ್ದರೂ ಅನುಷ್ಕಾ ಗರ್ಭಿಣಿಯಾಗಿದ್ದಾರೆ ಎಂಬುದಕ್ಕೆ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಹೀಗಾಗಿ ಸದ್ಯಕ್ಕೆ ಇದು ಅಭಿಮಾನಿಗಳ ಊಹಾಪೋಹಕ್ಕೆ ಮಾತ್ರ ಸೀಮಿತವಾಗಿದೆ.

Anushka Sharma pregnant
'ಸೆಂಚುರಿ ಹೊಡೆದ್ರೇನು.. 12 ಬಾಲ್`ನಲ್ಲಿ 50 ರನ್ ಮಾಡಲಾಗಲಿಲ್ಲ': ಶಿಷ್ಯನ ಕಾಲೆಳೆದ Yuvraj Singh

ವಿರಾಟ್-ಅನುಷ್ಕಾ ದಂಪತಿಗೆ ಇಬ್ಬರು ಮಕ್ಕಳು

ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ 2017ರ ಡಿಸೆಂಬರ್‌ನಲ್ಲಿ ವಿವಾಹವಾಗಿದ್ದರು. ಈ ದಂಪತಿಗೆ 2021ರ ಜನವರಿಯಲ್ಲಿ ವಾಮಿಕಾ ಎಂಬ ಹೆಣ್ಣು ಮಗು ಜನಿಸಿತ್ತು.

ಬಳಿಕ 2024ರ ಫೆಬ್ರವರಿಯಲ್ಲಿ ಅಕಾಯ್ ಎಂಬ ಗಂಡು ಮಗುವಿಗೆ ಪೋಷಕರಾಗಿದ್ದರು. ಇದೀಗ ದಂಪತಿಗೆ ಮೂರನೇ ಮಗು ಜನಿಸಲಿದೆ ಎಂಬ ವದಂತಿ ಹರಡಿದ್ದರೂ, ಈ ಕುರಿತು ಅವರಿಂದ ಯಾವುದೇ ಅಧಿಕೃತ ಘೋಷಣೆ ಹೊರಬಿದ್ದಿಲ್ಲ.

'ಝೀರೋ' ಬಳಿಕ ಚಿತ್ರರಂಗದಿಂದ ದೂರ ಉಳಿದ ಅನುಷ್ಕಾ

2018ರಲ್ಲಿ ಬಿಡುಗಡೆಯಾದ 'ಝೀರೋ' ಚಿತ್ರದ ಬಳಿಕ ಅನುಷ್ಕಾ ಶರ್ಮಾ ದೊಡ್ಡ ಪರದೆಯಲ್ಲಿ ಹೆಚ್ಚಾಗಿ ಕಾಣಿಸಿಕೊಂಡಿಲ್ಲ. ಆದರೆ, ಭಾರತದ ಮಾಜಿ ಮಹಿಳಾ ಕ್ರಿಕೆಟಿಗ ಝೂಲನ್ ಗೋಸ್ವಾಮಿ ಅವರ ಜೀವನಾಧಾರಿತ 'ಚಕ್ಡಾ ಎಕ್ಸ್‌ಪ್ರೆಸ್' ಚಿತ್ರದಲ್ಲಿ ಅವರು ನಟಿಸಿದ್ದಾರೆ.

2022ರಲ್ಲೇ ಈ ಚಿತ್ರದ ಚಿತ್ರೀಕರಣ ಪೂರ್ಣಗೊಂಡಿದ್ದರೂ, ಇದುವರೆಗೆ ಬಿಡುಗಡೆ ದಿನಾಂಕ ಘೋಷಣೆಯಾಗಿಲ್ಲ. ಈ ವರ್ಷದ ಫೆಬ್ರವರಿಯಲ್ಲಿ ಚಿತ್ರದ ನಿರ್ದೇಶಕ ಪ್ರೊಸಿತ್ ರಾಯ್, 'ಚಕ್ಡಾ ಎಕ್ಸ್‌ಪ್ರೆಸ್' ಚಿತ್ರಕ್ಕೆ ಸಿಗಬೇಕಾದ ಅವಕಾಶ ಸಿಗಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದರು.

ಚಿತ್ರದ ಪೋಸ್ಟ್‌ ಪ್ರೊಡಕ್ಷನ್ ಹಂತದಲ್ಲಿ ಅದನ್ನು ವೀಕ್ಷಿಸಿದ ಕೆಲವರು ಇಂದಿಗೂ ಚಿತ್ರದ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡುತ್ತಿದ್ದಾರೆ. ಆದರೆ, ಚಿತ್ರವು ತಲುಪಬೇಕಿದ್ದ ಎಲ್ಲ ಪ್ರೇಕ್ಷಕರನ್ನು ತಲುಪಲು ಸಾಧ್ಯವಾಗಲಿಲ್ಲ ಎಂದು ಅವರು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com