

ಎಂಟು ವರ್ಷಗಳ ವೃತ್ತಿಜೀವನದ ನಂತರ ಪಾಕಿಸ್ತಾನದ ಇಮ್ರಾನ್ ತಾಹಿರ್ ಅವರು ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತರಾಗಿರಬಹುದು, ಆದರೆ ಅನುಭವಿ ಸ್ಪಿನ್ನರ್ ವಿಶ್ವದಾದ್ಯಂತ ಟಿ20 ಕ್ರಿಕೆಟ್‌ನಲ್ಲಿ ತಮ್ಮ ಕೌಶಲ್ಯವನ್ನು ಪ್ರದರ್ಶಿಸುತ್ತಲೇ ಇದ್ದಾರೆ.
ಇಮ್ರಾನ್ ತಾಹಿರ್ ಅವರು ತಮ್ಮ 47ನೇ ವಯಸ್ಸಿನಲ್ಲಿ, ಟಿ20 ಕ್ರಿಕೆಟ್‌ನಲ್ಲಿ ಐದು ವಿಕೆಟ್ ಪಡೆದ ಅತ್ಯಂತ ಹಿರಿಯ ಬೌಲರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗುವ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ.
ಕೆರಿಬಿಯನ್ ಪ್ರೀಮಿಯರ್ ಲೀಗ್(ಸಿಪಿಎಲ್) ನಲ್ಲಿ ಗಯಾನಾ ಅಮೆಜಾನ್ ವಾರಿಯರ್ಸ್ ಪರ ಆಡುತ್ತಿರುವ ಇಮ್ರಾನ್ ತಾಹಿರ್ ಈ ಗಮನಾರ್ಹ ಸಾಧನೆ ಮಾಡಿದ್ದಾರೆ.
ಸೆಂಟ್ ಲೂಸಿಯಾ ಕಿಂಗ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಇಮ್ರಾನ್ ತಾಹಿರ್ ತಮ್ಮ ಸ್ಪಿನ್ ಮೂಲಕ ಎದುರಾಳಿ ಬ್ಯಾಟರ್‌ಗಳನ್ನು ಅಕ್ಷರಶಃ ನಡುಗಿಸಿದರು. ಕೇವಲ 4 ಓವರ್‌ಗಳಲ್ಲಿ 17 ರನ್ ನೀಡಿ 5 ವಿಕೆಟ್ ಕಬಳಿಸುವ ಮೂಲಕ ಟಿ20 ಕ್ರಿಕೆಟ್‌ನಲ್ಲಿ ಹೊಸ ವಿಶ್ವ ದಾಖಲೆ ಬರೆದರು.
ಇದಕ್ಕೂ ಮುನ್ನ ಈ ವಿಶ್ವ ದಾಖಲೆ ಕುಕ್ ಐಲ್ಯಾಂಡ್ಸ್‌ನ ತೋಮಕನುತೆ ರಿತಾವಾ ಹೆಸರಿನಲ್ಲಿತ್ತು. ಅವರು 2022ರಲ್ಲಿ ತಮ್ಮ 46 ವರ್ಷ 299 ದಿನಗಳ ಪ್ರಾಯದಲ್ಲಿ 5 ವಿಕೆಟ್ ಪಡೆದಿದ್ದರು. ಇದೀಗ 47 ವರ್ಷದ ಇಮ್ರಾನ್ ತಾಹಿರ್ ಆ ದಾಖಲೆಯನ್ನು ಅಳಿಸಿ ಹಾಕಿ ಹೊಸ ವರ್ಲ್ಡ್ ರೆಕಾರ್ಡ್ ಬರೆದಿದ್ದಾರೆ.
ಕೇವಲ ಬೌಲಿಂಗ್ ಮಾತ್ರವಲ್ಲದೆ, ಇತ್ತೀಚೆಗಷ್ಟೇ ಗಯಾನಾ ಅಮೆಝಾನ್ ವಾರಿಯರ್ಸ್ ತಂಡವನ್ನು ಮುನ್ನಡೆಸಿ ಸತತ ಗ್ಲೋಬಲ್ ಸೂಪರ್ ಲೀಗ್ (GSL) ಟಿ20 ಟ್ರೋಫಿ ಗೆದ್ದುಕೊಡುವ ಮೂಲಕ ಟಿ20 ಟ್ರೋಫಿ ಗೆದ್ದ ಅತ್ಯಂತ ಹಿರಿಯ ನಾಯಕ ಎಂಬ ದಾಖಲೆಯನ್ನೂ ತಾಹಿರ್ ತಮ್ಮದಾಗಿಸಿಕೊಂಡಿದ್ದಾರೆ.