India vs Afghanistan: ಹೊಸ ಇತಿಹಾಸ ಸೃಷ್ಟಿಸಿದ ಜಸ್ಪ್ರೀತ್ ಬುಮ್ರಾ; ವಿಶ್ವದಲ್ಲೇ ಈ ಸಾಧನೆ ಮಾಡಿದ ಮೊದಲ ಆಟಗಾರ!

ಇಂದು ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಎರಡನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡ ಭಾರತ ತಂಡಕ್ಕೆ ಜಸ್ಪ್ರೀತ್ ಬುಮ್ರಾ ಅದ್ಭುತ ಆರಂಭ ನೀಡಿದರು.
Jasprit Bumrah
ಜಸ್ಪ್ರೀತ್ ಬುಮ್ರಾ
Updated on

ನವದೆಹಲಿ: ಭಾರತ ಮತ್ತು ಅಫ್ಘಾನಿಸ್ತಾನ ನಡುವೆ ಮಂಗಳವಾರ ನಡೆದ ಎರಡನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ವೇಗಿ ಜಸ್ಪ್ರೀತ್ ಬುಮ್ರಾ ಅವರು ಹೊಸ ಇತಿಹಾಸ ಸೃಷ್ಟಿಸಿದ್ದು, ಈ ಸಾಧನೆ ಮಾಡಿದ ವಿಶ್ವದ ಮೊದಲ ಆಟಗಾರ ಎಂಬ ಗೌರವಕ್ಕೆ ಪಾತ್ರರಾಗಿದ್ದಾರೆ.

ಇಂದು ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಎರಡನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡ ಭಾರತ ತಂಡಕ್ಕೆ ಜಸ್ಪ್ರೀತ್ ಬುಮ್ರಾ ಅದ್ಭುತ ಆರಂಭ ನೀಡಿದರು.

ಜಸ್ಪ್ರೀತ್ ಬುಮ್ರಾ ಅವರು ಪಂದ್ಯದ ಮೊದಲ ಓವರ್‌ನಲ್ಲೇ ಮೇಡನ್ ಓವರ್ ಎಸೆಯುವ ಮೂಲಕ ಅಂತರರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಮೇಡನ್ ಓವರ್‌ಗಳನ್ನು ಎಸೆದ ಬೌಲರ್ ಎಂಬ ದಾಖಲೆ ನಿರ್ಮಿಸಿದರು. ಅಲ್ಲದೆ ತಮ್ಮ ವೃತ್ತಿಜೀವನದಲ್ಲಿ ಮೊದಲ ಬಾರಿಗೆ ಮೊದಲ ಇನ್ನಿಂಗ್ಸ್‌ನಲ್ಲಿ ಮೇಡನ್ ಓವರ್ ಮಾಡಿದ ಸಾಧನೆಯನ್ನು ಬುಮ್ರಾ ತಮ್ಮದಾಗಿಸಿಕೊಂಡರು.

Jasprit Bumrah
India vs Afghanistan: ಅಭಿಷೇಕ್ ಅಬ್ಬರಕ್ಕೆ ಅಫ್ಘಾನ್ ಧೂಳೀಪಟ; ಮೊದಲ T20ಯಲ್ಲಿ ಭಾರತಕ್ಕೆ ಭರ್ಜರಿ ಗೆಲುವು

ಬುಮ್ರಾ ಅವರು ಅಂತರರಾಷ್ಟ್ರೀಯ ಟಿ20 ಪಂದ್ಯಗಳಲ್ಲಿ ಒಟ್ಟು 13 ಮೇಡನ್ ಓವರ್‌ಗಳನ್ನು ಎಸೆದಿದ್ದಾರೆ. ಇದು ಐಸಿಸಿ ಪೂರ್ಣ ಸದಸ್ಯ ರಾಷ್ಟ್ರಗಳಲ್ಲಿ ಹೊಸ ವಿಶ್ವ ದಾಖಲೆಯಾಗಿದೆ. ಈ ಹಿಂದೆ 12 ಮೇಡನ್ ಓವರ್‌ಗಳನ್ನು ಎಸೆದಿದ್ದ ಜಿಂಬಾಬ್ವೆಯ ರಿಚರ್ಡ್ ನ್ಗಾರವಾ ಅವರೊಂದಿಗೆ ಜಂಟಿಯಾಗಿ ಮೊದಲ ಸ್ಥಾನದಲ್ಲಿದ್ದ ಬುಮ್ರಾ ಇದೀಗ ಅವರನ್ನು ಹಿಂದಿಕ್ಕಿದ್ದಾರೆ.

ಇನ್ನು ಭಾರತದಲ್ಲಿ ಎಲ್ಲಾ ಮೂರೂ ಸ್ವರೂಪಗಳಲ್ಲಿ ತಲಾ ಕನಿಷ್ಠ 50 ವಿಕೆಟ್‌ಗಳನ್ನು ಪಡೆದ ವಿಶ್ವದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗುವ ಮೂಲಕ ಜಸ್ಪ್ರೀತ್ ಬುಮ್ರಾ ಹೊಸ ಇತಿಹಾಸ ನಿರ್ಮಿಸಿದರು.

ಅಹಮದಾಬಾದ್ ಮೂಲದ 32 ವರ್ಷದ ಈ ವೇಗದ ಬೌಲರ್, ಭಾರತದಲ್ಲಿ ಇಲ್ಲಿಯವರೆಗೆ ಆಡಿರುವ 45 ಟಿ20 ಅಂತಾರಾಷ್ಟ್ರೀಯ (T20I) ಪಂದ್ಯಗಳಲ್ಲಿ 50 ಬ್ಯಾಟರ್‌ಗಳನ್ನು ಔಟ್ ಮಾಡಿದ್ದಾರೆ. ಇದರ ಜೊತೆಗೆ, ಅವರು ಭಾರತದಲ್ಲಿ 16 ಟೆಸ್ಟ್ ಪಂದ್ಯಗಳಲ್ಲಿ 62 ವಿಕೆಟ್‌ಗಳನ್ನು ಮತ್ತು 41 ಏಕದಿನ ಪಂದ್ಯಗಳಲ್ಲಿ 64 ವಿಕೆಟ್‌ಗಳನ್ನು ಕಬಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com