Asian Games Women's Final: ಮಹಿಳಾ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಭಾರತಕ್ಕೆ ಅತೀ ದೊಡ್ಡ ಜಯ!

ನಾಯಕಿ ಹರ್ಮನ್‌ಪ್ರೀತ್ ಕೌರ್ ನೇತೃತ್ವದ ಭಾರತ ಮಹಿಳಾ ಕ್ರಿಕೆಟ್‌ ತಂಡ ಏಷ್ಯನ್ ಗೇಮ್ಸ್‌ನಲ್ಲಿ ಮತ್ತೊಮ್ಮೆ ಚಿನ್ನದ ಪದಕ ಗೆದ್ದು, ತನ್ನ ಪ್ರಶಸ್ತಿಯನ್ನು ಯಶಸ್ವಿಯಾಗಿ ಉಳಿಸಿಕೊಂಡಿದೆ.
India beat SriLanka, Clinches there 2nd Gold and Defend Title
ಇತಿಹಾಸ ಬರೆದ ಭಾರತ ಮಹಿಳಾ ಕ್ರಿಕೆಟ್ ತಂಡ
Updated on

ನಿಸ್ಸಿನ್‌: ಜಪಾನ್ ನಲ್ಲಿ ಇಂದು ನಡೆದ ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಶ್ರೀಲಂಕಾ ತಂಡವನ್ನು ಬರೊಬ್ಬರಿ 147 ರನ್ ಗಳ ಅಂತರದಲ್ಲಿ ಮಣಿಸಿದ ಭಾರತ ಐತಿಹಾಸಿಕ ದಾಖಲೆಗೆ ಪಾತ್ರವಾಗಿದೆ.

ಹೌದು.. ನಾಯಕಿ ಹರ್ಮನ್‌ಪ್ರೀತ್ ಕೌರ್ ನೇತೃತ್ವದ ಭಾರತ ಮಹಿಳಾ ಕ್ರಿಕೆಟ್‌ ತಂಡ ಏಷ್ಯನ್ ಗೇಮ್ಸ್‌ನಲ್ಲಿ ಮತ್ತೊಮ್ಮೆ ಚಿನ್ನದ ಪದಕ ಗೆದ್ದು, ತನ್ನ ಪ್ರಶಸ್ತಿಯನ್ನು ಯಶಸ್ವಿಯಾಗಿ ಉಳಿಸಿಕೊಂಡಿದೆ.

ಮಂಗಳವಾರ ನಡೆದ ಫೈನಲ್‌ನಲ್ಲಿ ಶ್ರೀಲಂಕಾವನ್ನು 147 ರನ್‌ಗಳಿಂದ ಮಣಿಸಿದ ಭಾರತ, ಫೈನಲ್ ಗೆದ್ದು ಚಿನ್ನದ ಪದಕಕ್ಕೆ ಭಾಜನವಾಯಿತು. ಈ ಮೂಲಕ ಹ್ಯಾಂಗ್‌ಝೌ 2022ರಲ್ಲಿ ಗೆದ್ದಿದ್ದ ಚಿನ್ನದ ಪದಕವನ್ನು ಮತ್ತೊಮ್ಮೆ ತನ್ನದಾಗಿಸಿಕೊಂಡಿತು.

ಕೊರೋಗಿ ಸ್ಪೋರ್ಟ್ಸ್ ಪಾರ್ಕ್‌ನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ 216 ರನ್‌ಗಳ ಬೃಹತ್ ಮೊತ್ತ ದಾಖಲಿಸಿತು. ಆರಂಭಿಕರಾದ ಸ್ಮೃತಿ ಮಂಧಾನ (79) ಮತ್ತು ಶಫಾಲಿ ವರ್ಮಾ (48) ತಂಡಕ್ಕೆ ಉತ್ತಮ ಆರಂಭ ಒದಗಿಸಿದರು.

ಬಳಿಕ ಮಧ್ಯಮ ಕ್ರಮಾಂಕದ ಬ್ಯಾಟರ್‌ಗಳೂ ರನ್‌ ಗಳಿಸುವ ಮೂಲಕ ಭಾರತದ ಮೊತ್ತವನ್ನು 200ರ ಗಡಿ ದಾಟಿಸಿದರು. ರಿಚಾ ಘೋಷ್ ಕೇವಲ 22 ಎಸೆತಗಳಲ್ಲಿ ಅಜೇಯ 49 ರನ್‌ ಗಳಿಸಿ ಭಾರತದ ಇನ್ನಿಂಗ್ಸ್‌ಗೆ ಸ್ಫೋಟಕ ಅಂತ್ಯ ನೀಡಿದರು.

216 ರನ್‌ಗಳ ಕಠಿಣ ಗುರಿ ಬೆನ್ನಟ್ಟಿದ ಶ್ರೀಲಂಕಾ, ಭಾರತದ ಬೌಲರ್‌ಗಳ ಶಿಸ್ತುಬದ್ಧ ದಾಳಿಗೆ ತತ್ತರಿಸಿತು. ವಿಕೆಟ್‌ಗಳು ನಿರಂತರವಾಗಿ ಉರುಳಿದ ಪರಿಣಾಮ ಲಂಕಾ ತಂಡ ದೊಡ್ಡ ಮೊತ್ತ ತಲುಪಲು ಸಾಧ್ಯವಾಗಲಿಲ್ಲ. ಅಂತಿಮವಾಗಿ ಶ್ರೀಲಂಕಾ 15.4 ಓವರ್ ನಲ್ಲಿ ಕೇವಲ 69 ರನ್ ಗಳಿಗೇ ಆಲೌಟ್ ಆಗುವುದರೊಂದಿಗೆ ಭಾರತ 147 ರನ್‌ಗಳ ಭರ್ಜರಿ ಜಯ ದಾಖಲಿಸಿ ಚಿನ್ನದ ಪದಕಕ್ಕೆ ಮುತ್ತಿಕ್ಕಿತು.

India beat SriLanka, Clinches there 2nd Gold and Defend Title
Asian Games 2026: Cricket Finalನಲ್ಲಿ ಶ್ರೀಲಂಕಾ ಮಣಿಸಿ ಇತಿಹಾಸ ಬರೆದ ಭಾರತ ಮಹಿಳಾ ತಂಡ, ಚಿನ್ನದ ಬೇಟೆ!

ಮಹಿಳಾ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಭಾರತಕ್ಕೆ ಅತೀ ದೊಡ್ಡ ಜಯ!

ಇನ್ನು ಇಂದು ಭಾರತಕ್ಕೆ ಲಭಿಸಿದ 147 ರನ್ ಗಳ ಜಯ ಮಹಿಳಾ ಟಿ20 ಕ್ರಿಕೆಟ್ ಇತಿಹಾಸದಲ್ಲಿ ಭಾರತ ತಂಡಕ್ಕೆ (ರನ್ ಗಳ ಲೆಕ್ಕಾಚಾರ) ಸಿಕ್ಕ ಅತೀ ದೊಡ್ಡ ಗೆಲುವಾಗಿದೆ.

ಇದಕ್ಕೂ ಮೊದಲು 2018ರಲ್ಲಿ ಏಷ್ಯಾಕಪ್ ಟೂರ್ನಿಯಲ್ಲಿ ಮಲೇಷ್ಯಾ ವಿರುದ್ಧ ಭಾರತ 142 ರನ್ ಗಳ ಅಂತರದ ಜಯ ಸಾಧಿಸಿತ್ತು. ಇದು ಈವರೆಗಿನ ಭಾರತದ ಅತೀ ದೊಡ್ಡ ಗೆಲುವಾಗಿತ್ತು. ಇಂದು ಈ ದಾಖಲೆಯನ್ನು ಭಾರತ ಮುರಿದಿದೆ.

Biggest victory margins for IND-W in T20Is (by runs)

  • 147 vs SL-W, Nisshin, Asian Games 2026*

  • 142 vs MAS-W, Kuala Lumpur, Asia Cup 2018

  • 137 vs HKG-W, Dubai, Asia Cup 2026

  • 114 vs BAN-W, Nisshin, Asian Games 2026

  • 104 vs UAE-W, Sylhet, Asia Cup 2022

  • 100 vs Barbados Women, Commonwealth Games 2022

ಸತತ 2ನೇ ಚಿನ್ನದ ಪದಕ

ಇನ್ನು ಈ ಗೆಲುವಿನೊಂದಿಗೆ ಏಷ್ಯನ್ ಗೇಮ್ಸ್ ಮಹಿಳಾ ಕ್ರಿಕೆಟ್‌ನಲ್ಲಿ ಭಾರತ ತನ್ನ ಸತತ ಎರಡನೇ ಚಿನ್ನದ ಪದಕವನ್ನು ಗೆದ್ದಿದೆ. 2022ರ ಹ್ಯಾಂಗ್‌ಝೌ ಏಷ್ಯನ್ ಗೇಮ್ಸ್‌ನಲ್ಲೂ ಭಾರತವೇ ಚಾಂಪಿಯನ್ ಆಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com