ಏಷ್ಯನ್ ಗೇಮ್ಸ್‌ನಲ್ಲಿ ಇತಿಹಾಸ ಸೃಷ್ಟಿಸಿದ ಸ್ಮೃತಿ ಮಂಧಾನಾ; ಮಹಿಳಾ ಕ್ರಿಕೆಟ್‌ನಲ್ಲಿ ಈ ಸಾಧನೆ ಮಾಡಿದ ಮೊದಲ ಆಟಗಾರ್ತಿ!

ಇತ್ತೀಚೆಗಷ್ಟೇ ಬಾಂಗ್ಲಾದೇಶ ವಿರುದ್ಧದ ಏಷ್ಯನ್ ಗೇಮ್ಸ್‌ನ ಸೆಮಿಫೈನಲ್ ಪಂದ್ಯದಲ್ಲಿ ಭಾರತದ ಆರಂಭಿಕ ಆಟಗಾರ್ತಿ ಸ್ಮೃತಿ ಮಂಧಾನಾ ಮಹಿಳಾ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ್ತಿಯಾಗಿ ಹೊರಹೊಮ್ಮಿದರು.
Smriti Mandhana
ಸ್ಮೃತಿ ಮಂಧಾನಾPhoto | BCCI
Updated on

ಮಂಗಳವಾರ ಕೊರೋಗಿ ಸ್ಪೋರ್ಟ್ಸ್ ಪಾರ್ಕ್‌ನಲ್ಲಿ ಶ್ರೀಲಂಕಾ ವಿರುದ್ಧ ನಡೆದ ಏಷ್ಯನ್ ಗೇಮ್ಸ್ ಫೈನಲ್ ಪಂದ್ಯದಲ್ಲಿ, ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ 11,000 ರನ್‌ಗಳನ್ನು ಪೂರೈಸಿದ ಮೊದಲ ಮಹಿಳಾ ಕ್ರಿಕೆಟ್ ಆಟಗಾರ್ತಿಯಾಗುವ ಮೂಲಕ ಭಾರತದ ಉಪನಾಯಕಿ ಸ್ಮೃತಿ ಮಂಧಾನಾ ತಮ್ಮ ಸಾಧನೆಗಳ ಪಟ್ಟಿಗೆ ಮತ್ತೊಂದು ಗರಿ ಸೇರಿಸಿಕೊಂಡರು. ಇತ್ತೀಚೆಗೆ ಮುಕ್ತಾಯಗೊಂಡ ಏಷ್ಯಾ ಕಪ್‌ನಲ್ಲಿ, ದಂತಕಥೆ ಮತ್ತು ಭಾರತದ ಮಾಜಿ ನಾಯಕಿ ಮಿಥಾಲಿ ರಾಜ್ ಅವರ 10,868 ರನ್‌ಗಳ ದಾಖಲೆಯನ್ನು ಮುರಿಯುವ ಮೂಲಕ ಮಂಧಾನಾ ಮಹಿಳಾ ಕ್ರಿಕೆಟ್‌ನ ಮೂರೂ ಸ್ವರೂಪಗಳಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ್ತಿಯಾಗಿದ್ದರು. ಇದೀಗ ಏಷ್ಯನ್ ಗೇಮ್ಸ್ ಫೈನಲ್ ಪಂದ್ಯದಲ್ಲಿ ಮಂಧಾನಾ ಮತ್ತೊಂದು ಐತಿಹಾಸಿಕ ದಾಖಲೆ ಬರೆದಿದ್ದಾರೆ. ಫೈನಲ್ ಪಂದ್ಯಕ್ಕೆ ಮುನ್ನ ಮಂಧಾನಾ ಅವರ ಖಾತೆಯಲ್ಲಿ 10,987 ರನ್‌ಗಳಿದ್ದವು (ಟೆಸ್ಟ್‌ನಲ್ಲಿ 788, ಏಕದಿನದಲ್ಲಿ 5,411 ಮತ್ತು ಟಿ20ಯಲ್ಲಿ 4,788 ರನ್‌ಗಳು); ಈ ಮಹತ್ವದ ಮೈಲಿಗಲ್ಲನ್ನು ತಲುಪಲು ಅವರಿಗೆ ಕೇವಲ 13 ರನ್‌ಗಳ ಅಗತ್ಯವಿತ್ತು.

ಟಾಸ್ ಗೆದ್ದ ಭಾರತ ಶ್ರೀಲಂಕಾ ವಿರುದ್ಧ ಬ್ಯಾಟಿಂಗ್ ಮಾಡಲು ನಿರ್ಧರಿಸಿತು. ಶೆಫಾಲಿ ವರ್ಮಾ ಜೊತೆ ಆರಂಭಿಕರಾಗಿ ಕಣಕ್ಕಿಳಿದ ಮಂಧಾನಾ ಮೊದಲ ಓವರ್‌ನಲ್ಲಿಯೇ ಎರಡು ಬೌಂಡರಿಗಳೊಂದಿಗೆ ಖಾತೆ ತೆರೆದರು. ಮೂರನೇ ಓವರ್‌ನಲ್ಲಿ ಸಿಡಿಸಿದ ಸಿಕ್ಸರ್‌ನೊಂದಿಗೆ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 11,000 ರನ್‌ಗಳ ಮೈಲಿಗಲ್ಲನ್ನು ತಲುಪಿದರು.

ಇತ್ತೀಚೆಗಷ್ಟೇ ಬಾಂಗ್ಲಾದೇಶ ವಿರುದ್ಧದ ಏಷ್ಯನ್ ಗೇಮ್ಸ್‌ನ ಸೆಮಿಫೈನಲ್ ಪಂದ್ಯದಲ್ಲಿ ಭಾರತದ ಆರಂಭಿಕ ಆಟಗಾರ್ತಿ ಸ್ಮೃತಿ ಮಂಧಾನಾ ಮಹಿಳಾ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ್ತಿಯಾಗಿ ಹೊರಹೊಮ್ಮಿದರು. ಈ ಮೂಲಕ ಅವರು ನ್ಯೂಜಿಲೆಂಡ್‌ನ ದಿಗ್ಗಜ ಆಟಗಾರ್ತಿ ಸೂಜಿ ಬೇಟ್ಸ್ ಅವರ 4,758 ರನ್‌ಗಳ ದಾಖಲೆಯನ್ನು ಮುರಿದರು. 4,788 ರನ್‌ಗಳೊಂದಿಗೆ ಮಹಿಳಾ ಟಿ20 ಅಂತಾರಾಷ್ಟ್ರೀಯ (T20I) ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದವರ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರುವ ಮೂಲಕ ಆ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದರು.

ಇನ್ನು ಏಷ್ಯನ್ ಗೇಮ್ಸ್‌ನ ಫೈನಲ್ ಪಂದ್ಯದ ವಿಷಯಕ್ಕೆ ಬಂದರೆ, ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದ ಭಾರತ ತಂಡವು ತನ್ನ ಆಡುವ ಬಳಗದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ತಮ್ಮ ಚೊಚ್ಚಲ ಏಷ್ಯನ್ ಗೇಮ್ಸ್ ಚಿನ್ನದ ಪದಕ ಗೆಲ್ಲುವ ಗುರಿ ಹೊಂದಿರುವ ಶ್ರೀಲಂಕಾ ತಂಡವೂ ಕೂಡ ಈ ನಿರ್ಣಾಯಕ ಪಂದ್ಯದಲ್ಲಿ ಯಾವುದೇ ಬದಲಾವಣೆ ಮಾಡದೆ ಕಣಕ್ಕಿಳಿದಿದೆ.

Smriti Mandhana
Smrithi Mandhana: ಮಹಿಳಾ T20 ಕ್ರಿಕೆಟ್‌ನಲ್ಲಿ ಇತಿಹಾಸ ನಿರ್ಮಿಸಿದ ಸ್ಮೃತಿ ಮಂಧಾನ

2023ರ ಏಷ್ಯಾಡ್ ಹಾಗೂ ಈ ತಿಂಗಳ ಆರಂಭದಲ್ಲಿ ನಡೆದ ಮಹಿಳಾ ಏಷ್ಯಾ ಕಪ್ ಪಂದ್ಯಾವಳಿಯಲ್ಲೂ ಭಾರತ ಮತ್ತು ಶ್ರೀಲಂಕಾ ಮುಖಾಮುಖಿಯಾಗಿದ್ದವು. ಈ ಎರಡೂ ಸಂದರ್ಭಗಳಲ್ಲಿ ಭಾರತೀಯ ಮಹಿಳಾ ತಂಡವು ಶ್ರೀಲಂಕಾ ತಂಡವನ್ನು ಸೋಲಿಸಿತ್ತು.

ಹಾಲಿ ಚಾಂಪಿಯನ್ ತಂಡ ಭಾರತ, ಕ್ವಾರ್ಟರ್ ಫೈನಲ್ ಮತ್ತು ಸೆಮಿಫೈನಲ್‌ನಲ್ಲಿ ಕ್ರಮವಾಗಿ ಜಪಾನ್ ಮತ್ತು ಬಾಂಗ್ಲಾದೇಶ ತಂಡಗಳನ್ನು ಸೋಲಿಸುವ ಮೂಲಕ ಫೈನಲ್ ತಲುಪಿದೆ. ಮತ್ತೊಂದೆಡೆ, ಶ್ರೀಲಂಕಾ ತಂಡವು ತಮ್ಮ ಹಿಂದಿನ ಎರಡು ಪಂದ್ಯಗಳಲ್ಲಿ ಮಲೇಷ್ಯಾ ಮತ್ತು ಪಾಕಿಸ್ತಾನ ತಂಡಗಳನ್ನು ಮಣಿಸಿ ಚಿನ್ನದ ಪದಕಕ್ಕಾಗಿ ನಡೆಯುವ ಈ ಪಂದ್ಯಕ್ಕೆ ಅರ್ಹತೆ ಪಡೆದಿದೆ.

ಭಾರತ ಮೊದಲ ಇನಿಂಗ್ಸ್‌ನಲ್ಲಿ ನಿಗದಿತ 20 ಓವರ್‌ಗಳಲ್ಲಿ ಮೂರು ವಿಕೆಟ್ ನಷ್ಟಕ್ಕೆ 216 ರನ್ ಕಲೆಹಾಕಿದೆ. ಈ ಗುರಿ ಬೆನ್ನತ್ತಿದ ಶ್ರೀಲಂಕಾ ಆರಂಭದಲ್ಲೇ ಸಂಕಷ್ಟಕ್ಕೆ ಸಿಲುಕಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com