ಭಾರತ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಹರ್ಮನ್‌ಪ್ರೀತ್ ಕೌರ್​ಗೆ 1 ಕೋಟಿ ರೂ. ಬಹುಮಾನ ಘೋಷಿಸಿದ ಭಗವಂತ್ ಮಾನ್!

ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಕ್ರಿಕೆಟ್ ನಲ್ಲಿ ಮತ್ತೊಂದು ಚಿನ್ನದ ಪದಕ ಲಭಿಸಿದ್ದು, ಫೈನಲ್ ನಲ್ಲಿ ಶ್ರೀಲಂಕಾ ತಂಡವನ್ನು ಮಣಿಸಿದ ಭಾರತ ಮಹಿಳಾ ತಂಡ, ಸತತ 2ನೇ ಪದಕ ಬಾಚಿಕೊಂಡಿದೆ.
Punjab CM Bhagwant Mann announces Rs. 1 Crore cash prize for Harmanpreet Kaur on winning Gold Medal in Asian Games
ಹರ್ಮನ್‌ಪ್ರೀತ್ ಕೌರ್ ಹಾಗೂ ತಂಡ
Updated on

ಚಂಡೀಗಢ: 2026ರ ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಮಹಿಳಾ ಕ್ರಿಕೆಟ್ ತಂಡ ಚಿನ್ನದ ಪದಕ ಗೆದ್ದಿದ್ದು, ತಂಡದ ನಾಯಕಿ ಹರ್ಮನ್‌ಪ್ರೀತ್ ಕೌರ್ ಅವರಿಗೆ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರು 1 ಕೋಟಿ ರೂ. ನಗದು ಬಹುಮಾನ ಘೋಷಿಸಿದ್ದಾರೆ.

ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಕ್ರಿಕೆಟ್ ನಲ್ಲಿ ಮತ್ತೊಂದು ಚಿನ್ನದ ಪದಕ ಲಭಿಸಿದ್ದು, ಫೈನಲ್ ನಲ್ಲಿ ಶ್ರೀಲಂಕಾ ತಂಡವನ್ನು ಮಣಿಸಿದ ಭಾರತ ಮಹಿಳಾ ತಂಡ, ಸತತ 2ನೇ ಪದಕ ಬಾಚಿಕೊಂಡಿದೆ.

ಚಿನ್ನದ ಪದಕ ಗೆದ್ದ ಭಾರತ ಮಹಿಳಾ ಕ್ರಿಕೆಟ್ ತಂಡವನ್ನು ಅಭಿನಂದಿಸಿರುವ ಭಗವಂತ್ ಮಾನ್, ‘ತಂಡದ ಈ ಸಾಧನೆಯು ಪಂಜಾಬ್ ಮತ್ತು ಇಡೀ ದೇಶದ ಹೆಮ್ಮೆಯನ್ನು ಹೆಚ್ಚಿಸಿದೆ. ಪಂಜಾಬ್‌ನ ಮಗಳು ಹರ್ಮನ್‌ಪ್ರೀತ್ ಕೌರ್ ಬಗ್ಗೆ ನಮಗೆಲ್ಲರಿಗೂ ತುಂಬಾ ಹೆಮ್ಮೆ ಇದೆ’ ಎಂದಿದ್ದಾರೆ. ಅಲ್ಲದೆ ಈ ಸಾಧನೆಗಾಗಿ ನಾಯಕಿ ಹರ್ಮನ್‌ಪ್ರೀತ್ ಕೌರ್ ಸೇರಿದಂತೆ ಇಡೀ ತಂಡವನ್ನು ಅವರು ಅಭಿನಂದಿಸಿದ್ದಾರೆ.

Punjab CM Bhagwant Mann announces Rs. 1 Crore cash prize for Harmanpreet Kaur on winning Gold Medal in Asian Games
Asian Games 2026 Cricket Final: ಶ್ರೀಲಂಕಾ ಮಣಿಸಿ ಇತಿಹಾಸ ಬರೆದ ಭಾರತ ಮಹಿಳಾ ತಂಡ; ಚಿನ್ನದ ಬೇಟೆ!

ಮಂಗಳವಾರ ನಡೆದ ಫೈನಲ್‌ನಲ್ಲಿ ಶ್ರೀಲಂಕಾವನ್ನು 147 ರನ್‌ಗಳಿಂದ ಮಣಿಸಿದ ಭಾರತ, ಫೈನಲ್ ಗೆದ್ದು ಚಿನ್ನದ ಪದಕಕ್ಕೆ ಭಾಜನವಾಯಿತು. ಈ ಮೂಲಕ ಹ್ಯಾಂಗ್‌ಝೌ 2022ರಲ್ಲಿ ಗೆದ್ದಿದ್ದ ಚಿನ್ನದ ಪದಕವನ್ನು ಮತ್ತೊಮ್ಮೆ ತನ್ನದಾಗಿಸಿಕೊಂಡಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

X
Kannada Prabha
www.kannadaprabha.com