ಆಂಗ್ಲರ ನಾಡಲ್ಲಿ 'ವಿರಾಟ್' ಗೋಲ್ಡನ್ ಡಕೌಟ್, ಬ್ರಾಡ್ ಬೌಲಿಂಗ್‌ಗೆ ಹೆದರಿದ್ರಾ ಕೊಹ್ಲಿ, ಈ ವಿಡಿಯೋ ನೋಡಿ!

Published: 11 Sep 2018 08:58 AM IST | Updated: 11 Sep 2018 09:00 AM IST
ವಿರಾಟ್ ಕೊಹ್ಲಿ
ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿ ಸೋಲಿನ ಮುಖಭಂಗದ ನಡುವೆಯೂ ಉತ್ತಮ ಪ್ರದರ್ಶನ ನೀಡುತ್ತಿದ್ದ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಐದನೇ ಟೆಸ್ಟ್ ಪಂದ್ಯದಲ್ಲಿ ಗೋಲ್ಡನ್ ಡಕೌಟ್ ಆಗಿದ್ದಾರೆ. 

ಆಂಗ್ಲರ ವಿರುದ್ಧ ಟೆಸ್ಟ್ ಸರಣಿ ಸೋತರು ಅಂತಿಮ ಟೆಸ್ಟ್ ಪಂದ್ಯದಲ್ಲಿ ಗೆಲ್ಲುವ ಮೂಲಕ ಸೋಲಿನ ಅಂತರ ಕಡಿಮೆ ಮಾಡಿಕೊಳ್ಳುವ ನಿರೀಕ್ಷೆ ಇತ್ತು. ಆದರೆ ಅಂತಿಮ ಟೆಸ್ಟ್ ಪಂದ್ಯದ 2ನೇ ಇನ್ನಿಂಗ್ಸ್ ನಲ್ಲಿ ವಿರಾಟ್ ಕೊಹ್ಲಿ ಮೊದಲ ಎಸೆತದಲ್ಲೇ ಔಟಾಗಿ ಗೋಲ್ಡನ್ ಡಕ್ ಆಗುವ ಮೂಲಕ ಟೀಂ ಇಂಡಿಯಾ ಸಂಕಷ್ಟಕ್ಕೆ ಸಿಲುಕಿದೆ. 

ಇಂಗ್ಲೆಂಡ್ ಪ್ರವಾಸದಲ್ಲಿ ಆರಂಭಿಕ ಆಟಗಾರರ ಬ್ಯಾಟಿಂಗ್ ವೈಫಲ್ಯದಿಂದಾಗಿ ತಂಡ ಸಂಪೂರ್ಣವಾಗಿ ವಿರಾಟ್ ಕೊಹ್ಲಿಯನ್ನೇ ನಂಬಿತ್ತು ಆದರೆ ಇದೀಗ ವಿರಾಟ್ ಕೊಹ್ಲಿ ಗೋಲ್ಡನ್ ಡಕೌಟ್ ಆಗಿ ಇಂಗ್ಲೆಂಡ್ ಪ್ರವಾಸವನ್ನು ಮುಗಿಸಿದ್ದರೆ. 

ಇನ್ನು ಇಂಗ್ಲೆಂಡ್ ವಿರುದ್ಧದ ಐದು ಟೆಸ್ಟ್ ಪಂದ್ಯಗಳಲ್ಲಿ ವಿರಾಟ್ ಕೊಹ್ಲಿ 593 ರನ್ ಗಳನ್ನು ಪೇರಿಸಿದ್ದಾರೆ.
Posted by: VS | Source: Online Desk

ಈ ವಿಭಾಗದ ಇತರ ಸುದ್ದಿ