ಇಂಗ್ಲೆಂಡ್ ವಿರುದ್ಧ ಸೋತು ಸುಣ್ಣವಾಗಿರುವ ಟೀಂ ಇಂಡಿಯಾಗೆ ಸೆಹ್ವಾಗ್ ಕೊಟ್ಟ ಸಂದೇಶವೇನು ಗೊತ್ತ!

Published: 12 Sep 2018 08:35 PM IST
ಟೀಂ ಇಂಡಿಯಾ-ಸೆಹ್ವಾಗ್
ನವದೆಹಲಿ: ಇಂಗ್ಲೆಂಡ್ ವಿರುದ್ಧ ಏಕದಿನ ಸರಣಿ ಮತ್ತು ಟೆಸ್ಟ್ ಸರಣಿ ಸೋತು ಸುಣ್ಣವಾಗಿರುವ ವಿರಾಟ್ ಕೊಹ್ಲಿ ಪಡೆಗೆ ಮಾಜಿ ಸ್ಫೋಟಕ ಬ್ಯಾಟ್ಸ್ ಮನ್ ವೀರೇಂದ್ರ ಸೆಹ್ವಾಗ್ ಪ್ರೇಕರ ಸಂದೇಶವೊಂದನ್ನು ರವಾನಿಸಿದ್ದಾರೆ. 

ಸೆಹ್ವಾಗ್ ಟ್ವೀಟರ್ ನಲ್ಲಿ ಸರಣಿ ಗೆದ್ದ ಇಂಗ್ಲೆಂಡ್ ತಂಡಕ್ಕೆ ಅಭಿನಂದನೆ ಸಲ್ಲಿಸಿ, ಸರಣಿ ಟೀಂ ಇಂಡಿಯಾ ಸಹ ಉತ್ತಮ ಪ್ರದರ್ಶನ ನೀಡಿದೆ. ಆದರೆ ಕೆಲವೊಂದು ಸಲ ಬ್ಯಾಟ್ ನಿಂದ ಹೇಳಿಕೊಳ್ಳುವಂತಹ ಪ್ರದರ್ಶನ ಮೂಡಿ ಬಂದಿಲ್ಲ ಎಂದಿದ್ದಾರೆ. ಇನ್ನು ವಿದೇಶಿ ಪ್ರವಾಸಕ್ಕೂ ಮುನ್ನ ಅಭ್ಯಾಸ ಮಾಡುವುದು ಅವಶ್ಯಕ ಎಂದು ನಯವಾಗೇ ಬುದ್ದಿ ಮಾತನ್ನೂ ಹೇಳಿದ್ದಾರೆ. 

ಅಬ್ ಮಿಷನ್ ಆಸ್ಟ್ರೇಲಿಯಾ.. ಮೆಲ್ಬೋರ್ನ್ ಗೆ ಪ್ರವಾಸ ಬೆಳೆಸುವುದಕ್ಕೂ ಮುನ್ನ ಕಠಿಣ ಅಭ್ಯಾಸ ನಡೆಸುವುದು ಉತ್ತಮ ಎಂದು ಟ್ವೀಟ್ ಮಾಡಿದ್ದಾರೆ. 

ಟೀಂ ಇಂಡಿಯಾ ನವೆಂಬರ್ ತಿಂಗಳಲ್ಲಿ ಆಸ್ಟ್ರೇಲಿಯಾ ಪ್ರವಾಸ ಕೈಗೊಳ್ಳಲಿದ್ದು ಆಸೀಸ್ ವಿರುದ್ಧ ಮೂರು ಟಿ20 , ಮೂರು ಏಕದಿನ ಪಂದ್ಯ ಹಾಗೂ ನಾಲ್ಕು ಟೆಸ್ಟ್ ಪಂದ್ಯಗಳನ್ನು ಆಡಲಿದೆ.
Posted by: VS | Source: Online Desk

ಈ ವಿಭಾಗದ ಇತರ ಸುದ್ದಿ