ನನ್ನ ನಿರ್ಧಾರದಲ್ಲಿ ಬದಲಾವಣೆ ಇಲ್ಲ: ಹೆಚ್ಡಿಕೆ

ಬೆಂಗಳೂರು: 2011ನೇ ಸಾಲಿನ ಕೆಪಿಎಸ್ಸಿ ರದ್ದು ಪಡಿಸಿರುವ ಸರ್ಕಾರದ ಕ್ರಮದ ವಿರುದ್ಧ ಕೈಗೊಳ್ಳಲಿರುವ ಅಮರಣಾಂತ ಉಪವಾಸ ಸತ್ಯಾಗ್ರಹ ನಿರ್ಧಾರ ಕೈಬಿಡುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಹೇಳಿದ್ದಾರೆ.
ಉಪವಾಸ ಸತ್ಯಾಗ್ರಹಕ್ಕೂ ಮುನ್ನ ಫ್ರೀಡಂಪಾರ್ಕ್ನಲ್ಲಿ ಮಾತನಾಡಿದ ಕುಮಾರಸ್ವಾಮಿ ಅವರು, ನನ್ನ ನಿರ್ಧಾರದಲ್ಲಿ ಯಾವುದೇ ಬದಲಾವಣೆ ಇಲ್ಲ. ನೊಂದ ಅಭ್ಯರ್ಥಿಗಳ ಪರವಾಗಿ ಅಮರಣಾಂತ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ತಿಳಿಸಿದರು.
ನನ್ನ ಹೋರಾಟ ರಾಜ್ಯ ಸರ್ಕಾರದ ಅಥವಾ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧವಲ್ಲ. ಇದು ಪಕ್ಷಾತೀತವಾಗಿ ನೊಂದ ಅಭ್ಯರ್ಥಿಗಳ ಭವಿಷ್ಯಕ್ಕಾಗಿ ನಡೆಸುತ್ತಿರುವ ಹೋರಾಟ ಎಂದು ಕುಮಾರಸ್ವಾಮಿ ಹೇಳಿದರು.
ನ್ಯಾಯ ಸಿಗುವವರೆಗೂ ನಾನು ಹಾರಾಟ ಮುಂದುವರೆಸುವೆ ಯಾವುದೇ ಕಾರಣಕ್ಕೂ ನನ್ನ ನಿರ್ಧಾರದಿಂದ ಹಿಂದೆ ಸರಿಯುವುದಿಲ. ನನ್ನ ಹೋರಾಟವನ್ನು ಮುಖ್ಯಮಂತ್ರಿಗಳು ಲಘುವಾಗಿ ಪರಿಶೀಲಿಸಬಾರದು ಎಂದರು.
ಕೆಪಿಎಸ್ಸಿ ಪರೀಕ್ಷೆ ಬರೆದಿರುವ ಅಭ್ಯರ್ಥಿಗಳು ಶ್ರೀಮಂತರಲ್ಲ. ನೊಂದ ಅಭ್ಯರ್ಥಿಗಳಲ್ಲಿ ಹೆಚ್ಚಿನರು ಬಡ ಕುಟುಂಬದವರಾಗಿದ್ದು ಬೇಕಾದರೆ ಅಭ್ಯರ್ಥಿಗಳ ಕುಟುಂಬದ ಹಿನ್ನೆಲೆಯನ್ನು ಪರಿಶೀಲಿಸಲಿ ಎಂದು ಸವಾಲು ಹಾಕಿದ್ದಾರೆ. ಅಭ್ಯರ್ಥಿಗಳು ತುಂಬಾ ಕಷ್ಟಪಟ್ಟು ಕೆಪಿಎಸ್ಸಿ ಪರೀಕ್ಷೆ ಬರೆದಿದ್ದಾರೆ. ಹೀಗಾಗಿ ಅವರ ಜೀವನದ ಜತೆ ಸರ್ಕಾರ ಚೆಲ್ಲಾಟವಾಡುವುದು ಸರಿಯಲ್ಲ. ಆದಷ್ಟು ಬೇಗ ಸರ್ಕಾರ ತನ್ನ ನಿರ್ಧಾರವನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


