ಜಿಲ್ಲಾ ಸುದ್ದಿ

ಸಿಎಂ ಗೃಹ ಕಚೇರಿಯಲ್ಲಿ ಹೈಡ್ರಾಮಾ

ಸಿಎಂ ಗೃಹ ಕಚೇರಿಯಲ್ಲಿ ಹೈಡ್ರಾಮಾ
Published On :

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ 2011ನೇ ಸಾಲಿನ ನೇಮಕಾತಿ ರದ್ದು ವಿಚಾರ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಹೈಡ್ರಾಮಾಕ್ಕೆ ಕಾರಣವಾಗಿದೆ.

ಕೆಪಿಎಸ್‌ಸಿ ಅಕ್ರಮ ನೇಮಕಾತಿ ವಿರುದ್ಧ ಕಾನೂನು ಹೋರಾಟಕ್ಕೆ ಮುಂದಾಗಿದ್ದ ಡಾ.ಮೈತ್ರಿ ಮತ್ತು ರೇಣುಕಾಂಬ ನೇತೃತ್ವದ ತಂಡವೊಂದು ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಭೇಟಿ ಮಾಡಲು ಗೃಹಕಚೇರಿ ಕೃಷ್ಣಾಗೆ ಆಗಮಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ನೇಮಕಾತಿ ರದ್ದು ಕ್ರಮವನ್ನು ಅಭಿನಂಧಿಸಿದ್ದರು. ಇದೇ ವೇಳೆ ಮುಖ್ಯಮಂತ್ರಿಗಳನ್ನು ಭೇಟಿ ಮಾಡಲು ಬಯಸಿದ್ದ ನೇಮಕ ಅಭ್ಯರ್ಥಿಗಳು (ನೊಂದ ಅಭ್ಯರ್ಥಿಗಳು) ಮುಖ್ಯಮಂತ್ರಿಗಳನ್ನು ಭೇಟಿ ಮಾಡಲು ಯತ್ನಿಸಿದರು. ಈ ವೇಳೆ ಅವರನ್ನು ತಡೆದ ಪೊಲೀಸರು ಅನುಮತಿ ಪಡೆಯದ ಹೊರತು ಸಿಎಂ ಭೇಟಿ ಸಾಧ್ಯವಿಲ್ಲ ಎಂದು ಹೇಳಿದರು.

ಈ ವೇಳೆ ಕುಪಿತಗೊಂಡ ನೊಂದ ಅಭ್ಯರ್ಥಿಗಳು ಒಮ್ಮೆಲೆ ಕಚೇರಿಗೆ ನುಗ್ಗಲು ಯತ್ನಿಸಿದರು. ಆಗ ಸ್ಥಳದಲ್ಲಿ ಕೆಲಹೊತ್ತು ಉದ್ವಿಗ್ನ ವಾತಾವರಣ ನಿರ್ಮಾಣಗೊಂಡಿತ್ತು. ಸ್ಮಿತಾ ಎಂಬಾಕೆ ಬಲವಂತವಾಗಿ ಕಚೇರಿಗೆ ನುಗ್ಗಲು ಯತ್ನಿಸಿದಾಗ ಆಕೆಯನ್ನು ಪೊಲೀಸರು ಬಂಧಿಸಿದರು. ಈ ವೇಳೆ ನೇಮಕ ಅಭ್ಯರ್ಥಿಗಳು, ಪೊಲೀಸರೊಂದಿಗೆ ತೀವ್ರ ವಾಗ್ವಾದಕ್ಕಿಳಿದರು. ಹಿರಿಯ ಪೊಲೀಸ್ ಅಧಿಕಾರಿಗಳು ಮಧ್ಯಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸಿದರು. ಅಲ್ಲದೆ ಅನುಮತಿ ಪಡೆಯದ ಹೊರತು ನಿಮ್ಮನ್ನು ಒಳ ಹೋಗಲು ನಾವು ಬಿಡುವುದಿಲ್ಲ ಎಂದು ಹಿರಿಯ ಅಧಿಕಾರಿಗಳು ಸ್ಪಷ್ಟಪಡಿಸಿದರು.

ಅಲ್ಲದೆ ನೇಮಕ ಅಭ್ಯರ್ಥಿಗಳನ್ನು ಮತ್ತು ನೇಮಕಗೊಳ್ಳದ ಅಭ್ಯರ್ಥಿಗಳನ್ನು ಗೃಹಕಚೇರಿ ಕಷ್ಣಾದಿಂದ ಸುಮಾರು 200 ಮೀಟರ್ ದೂರದಲ್ಲಿ ಪೊಲೀಸರು ಹೊರಕ್ಕೆ ಕಳುಹಿಸಿದರು.

ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ನೊಂದ ಅಭ್ಯರ್ಥಿಗಳು ಮುಖ್ಯಮಂತ್ರಿಗಳು ದಯವಿಟ್ಟು ತಮ್ಮೊಂದಿಗೆ ಚರ್ಚಿಸಬೇಕು. ನಮಗೂ ನಮ್ಮ ಅಳಲು ತೋಡಿಕೊಳ್ಳಲು ಅವಕಾಶ ನೀಡಬೇಕು. ಕೇವಲ ಒಂದು ವರ್ಗದ ಪರವಾಗಿ ನಿಲುವು ತಳೆಯಬಾರುದು ಎಂದು ಮನವಿ ಮಾಡಿಕೊಂಡರು.

ಮತ್ತೊಂದೆಡೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಭೇಟಿ ಮಾಡಿ ಹೊರಬಂದ ನೇಮಕಗೊಳ್ಳದ ಅಭ್ಯರ್ಥಿಗಳು ಸಿದ್ಧರಾಮಯ್ಯ ಮತ್ತು ರಾಜ್ಯ ಸರ್ಕಾರದ ಪರವಾಗಿ ಘೋಷಣೆಗಳನ್ನು ಕೂಗಿದರು. ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಅಕ್ರಮ ನೇಮಕಾತಿ ವಿರುದ್ಧ ದಿಟ್ಟಕ್ರಮ ಕೈಗೊಂಡಿದ್ದಾರೆ. ಹೀಗಾಗಿ ಅವರನ್ನು ನಾವು ಅಭಿನಂಧಿಸಲು ಬಂದಿದ್ದೇವೆ ಎಂದು ಹೇಳಿದರು.

ಸಿಎಂ ಭೇಟಿಗೆ 5 ಗಂಟೆಗೆ ಸಮಯ ನಿಗದಿ
ಮತ್ತೊಂದು ಪ್ರಮುಖ ಬೆಳವಣಿಗೆಯೊಂದರಲ್ಲಿ ನೇಮಕಗೊಂಡ ಅಭ್ಯರ್ಥಿ (ನೊಂದ ಅಭ್ಯರ್ಥಿ)ಗಳನ್ನು ಭೇಟಿ ಮಾಡಲು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಸಮಯ ನಿಗದಿಪಡಿಸಿದ್ದು, ಇಂದು 5 ಗಂಟೆಗೆ ಅನುಮತಿ ನೀಡಿದ್ದಾರೆ. ಸುಮಾರು 20 ಮಂದಿ ನೊಂದ ಅಭ್ಯರ್ಥಿಗಳನ್ನು ಭೇಟಿ ಮಾಡಲು ಸಿದ್ದರಾಮಯ್ಯ ಅವರು ಅನುಮತಿ ನೀಡಿದ್ದಾರೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.