ಜಿಲ್ಲಾ ಸುದ್ದಿ

ಋಣ ತೀರಿಸುವ ಅವಕಾಶ ಕೊಡಿ

ಋಣ ತೀರಿಸುವ ಅವಕಾಶ ಕೊಡಿ
Published On :

ಕಾಂಗ್ರೆಸ್ ಸೇರಿದ ಜೆಡಿಎಸ್ ಮುಖಂಡ ಸೂರ್ಯನಾರಾಯಣ ರೆಡ್ಡಿ

ಕನ್ನಡಪ್ರಭ ವಾರ್ತೆ| ಬಳ್ಳಾರಿ|ಆ.10:
ಈ ಹಿಂದೆ ಸೋನಿಯಾ ಗಾಂಧಿ ಅವರನ್ನು ಗೆಲ್ಲಿಸಿದ ಋಣ ನಮ್ಮ ಮೇಲಿದೆ. ಕ್ಷೇತ್ರವನ್ನು ಅಭಿವೃದ್ಧಿಪಡಿಸುವ ಮೂಲಕ ಋಣ ತೀರಿಸುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ ಪರಮೇಶ್ವರ್ ಹೇಳಿದರು.

ತಾಲ್ಲೂಕಿನ ಮೋಕಾ ಗ್ರಾಮದಲ್ಲಿ ಭಾನುವಾರ ನಡೆದ ಚುನಾವಣೆಯ ಪ್ರಚಾರದ ಸಭೆಯಲ್ಲಿ ಮಾತನಾಡಿದ ಅವರು, ಈ ಹಿಂದೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಅವರು ಶ್ರೀರಾಮುಲು ಹಾಗೂ ರೆಡ್ಡಿ ಅವರ ಮನೆಗೆ ಹೋಗಲು ರಿವಾಲ್ವಾರ್ ಹೊರಗಡೆ ಇಟ್ಟು, ಷೂಸ್ ಹೊರಗಡೆ ಬಿಟ್ಟು ಹೋಗಬೇಕಾದ ಪರಿಸ್ಥಿತಿ ಇತ್ತು. ಇಂತಹ ಪರಿಸ್ಥಿತಿ ಕಾಂಗ್ರೆಸ್ ಅಧಿಕಾರ್ಕಕೆ ಬಂದಾಗನಿಂದಲೂ ಬದಲಾಗಿದೆ. ಉಪಚುನಾವಣೆಯಲ್ಲೂ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಿದರೆ, ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸವನ್ನು ಮಾಡಲು ಸಾಧ್ಯವಾಗುತ್ತದೆ. ಕ್ಷೇತ್ರಕ್ಕೆ ವಿಶೇಷ ಯೋಜನೆ ಕೊಡಬೇಕು, ವಿಶೇಷ ಪ್ಯಾಕೇಜ್ ಕೊಡಬೇಕೆಂದು ಮುಖ್ಯಮಂತ್ರಿಗಳಿಗೆ ಮನವಿ ಮಾಡುತ್ತೇನೆ ಎಂದರು.

ಚುನಾವಣೆ ಉಸ್ತುವಾರಿ ವಹಿಸಿಕೊಂಡಿರುವ ಸಚಿವ ಡಿ.ಕೆ ಶಿವಕುಮಾರ್ ಮಾತನಾಡಿ, ಶ್ರೀರಾಮುಲು ಮತದಾರನ್ನು ಧಿಕ್ಕರಿಸಿ ಮತದಾರರ ಸ್ವಾಭಿಮಾನಕ್ಕೆ ಧಕ್ಕೆ ತಂದಿದ್ದಾರೆ. ಶಾಸಕತ್ವಕ್ಕೆ ರಾಜಿನಾಮೆ ಕೊಡುವ ಸಂದರ್ಭದಲ್ಲಿ ಒಂದು ಬಾರಿಯಾದರೂ, ಕ್ಷೇತ್ರದ ಮತದಾರರ ಅಭಿಪ್ರಾಯವನ್ನು ಪಡೆದಿಲ್ಲ ಎಂದರು.

ಕಾರ್ಯಕ್ರಮದಲ್ಲಿ ಸಚಿವ ಪಿ.ಟಿ ಪರಮೇಶ್ವರ ನಾಯಕ್, ಮುಖಂಡರಾದ ಸೂರ್ಯನಾರಾಯಣ ರೆಡ್ಡಿ, ಕೆ.ಸಿ ಕೊಂಡಯ್ಯ, ದಿವಾಕರಬಾಬು, ಅಲ್ಲಂ ವೀರಭದ್ರಪ್ಪ ಸೇರಿದಂತೆ ಇತರರು ಮಾತನಾಡಿದರು.

ಸೇರ್ಪಡೆ: ಹಲವು ದಿನಗಳಿಂದ ರಾಜಕೀಯವಾಗಿ ತಟಸ್ಥವಾಗಿದ್ದ ಮಾಜಿ ಶಾಸಕ, ಜೆಡಿಎಸ್ ಮುಖಂಡ ಎನ್.ಸೂರ್ಯನಾರಾಯಣ ರೆಡ್ಡಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಾ.ಜಿ ಪರಮೇಶ್ವರ ಅವರ ಸಮ್ಮುಖದಲ್ಲಿ ಭಾನುವಾರ ಕಾಂಗ್ರೆಸ್ಗೆ ಸೇರ್ಪಡೆಗೊಂಡರು.

ನಮ್ಮದೇ ಗೆಲವು: ಸಿಎಂ ವಿಶ್ವಾಸ

ಉಪ ಚುನಾವಣೆ ನಡೆಯುತ್ತಿರುವ ಮೂರೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪರ ಒಲವಿದ್ದು, ಮತದಾರರು ಬಿಜೆಪಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ರಾಜ್ಯದಲ್ಲಾಗುತ್ತಿರುವ ಅಭಿವೃದ್ಧಿ ಮತ್ತು ಸರ್ಕಾರದ ಜನಪರ ಯೋಜನೆಗಳನ್ನು ಜನರು ಗುರಿತಿಸಿದ್ದಾರೆ ಎಂದು ತಿಳಿಸಿದರು. ಕ್ಷೇತ್ರದಲ್ಲಿ ಎಲ್ಲಾ ಕಾಂಗ್ರೆಸ್ ಮುಖಂಡರು ಒಗ್ಗಟ್ಟಾಗಿ ಕೆಲಸ ಮಾಡುತ್ತಿದ್ದಾರೆ. ಡಿ.ಕೆ ಶಿವಕುಮಾರ್ ಅವರು ಉಶ್ತುವಾರಿ ತೆಗೆದುಕೊಂಡಿದ್ದು, ಗೆಲುವು ನಮ್ಮದಾಗಲಿದೆ ಎಂದು ತಿಳಿಸಿದರು. ಕೆಪಿಎಸ್‌ಸಿ ಕುರಿತಾಗಿ ಸರ್ಕಾರದ ಸರಿಯಾದ ಕ್ರಮ ತೆಗೆದುಕೊಂಡಿದೆ. ಯುದೇ ಕಾರಣಕ್ಕೂ ನಿರ್ಧಾರ ಬದಲಾಯಿಸುವುದಿಲ್ಲ ವರದಿಯಿಂದ ಅಕ್ರಮ ನಡೆದಿರುವುದು ಸಾಬೀತಾಗಿರುವುದರಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.