ಜಿಲ್ಲಾ ಸುದ್ದಿ

ಕಾರಿಗೆ ಬಸ್ ಡಿಕ್ಕಿ: ನಾಲ್ವರ ದುರ್ಮರಣ

ಕಾರಿಗೆ ಬಸ್ ಡಿಕ್ಕಿ: ನಾಲ್ವರ ದುರ್ಮರಣ
ಸಾಂಧರ್ಭಿಕ ಚಿತ್ರ
Published On :

ದಾವಣಗೆರೆ: ದಾವಣಗೆರೆಯ ಆರನೇಕಲ್ಲು ಬಳಿ ಕಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ದುರ್ಮರಣ ಹೊಂದಿದ್ದಾರೆ.

ಇಂದು ಬೆಳಗ್ಗೆ ಓಮಿನಿ ಕಾರಿನಲ್ಲಿ ದೇವಸ್ಥಾನಕ್ಕೆ ತೆರಳುತ್ತಿದ್ದ ಸಂಬಂರ್ಧದಲ್ಲಿ ಕಾರಿಗೆ ಬಸ್ ಮುಖಾಮುಖಿ ಡಿಕ್ಕಿ ಹೊಡೆದಿದೆ. ಈ ದುರ್ಘಟನೆಯಲ್ಲಿ ನಾಲ್ವರು ಮೃತಪಟ್ಟಿದ್ದು, ನಾಲ್ವರಿಗೆ ಗಂಭೀರ ಗಾಯಗಳಾಗಿವೆ.

ಮೃತಪಟ್ಟವರನ್ನು ಕಾರ್ತಿಕ್(24), ರುದ್ರೇಶ್(28), ಆದರ್ಶ್(26) ಹಾಗೂ ಪ್ರದೀಪ್(24) ಎಂದು ಗುರುತಿಸಲಾಗಿದೆ. ಇದೇ ವೇಳೆ ಗಾಯಗೊಂಡ ನಾಲ್ವರನ್ನು ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಕಾರಿನಲ್ಲಿ ಪ್ರಯಾಣಿಸುತ್ತಿದ್ದವರು ದಾವಣಗೆರೆಯ ಕೆ.ಟಿ.ಜೆ. ನಗರ ನಿವಾಸಿಗಳು ಎಂದು ತಿಳಿದುಬಂದಿದ್ದು, ಇವರೆಲ್ಲ ಚನ್ನಗಿರಿಯಿಂದ ದಾವಣಗೆರೆಗೆ ಮರಳುತ್ತಿದ್ದ ಸಂದರ್ಭದಲ್ಲಿ ಈ ದುರ್ಘ‌ಟನೆ ಸಂಭವಿಸಿದೆ ಎಂದು ಪ್ರಾಥಮಿಕ ಮಾಹಿತಿಗಳಿಂದ ತಿಳಿದು ಬಂದಿದೆ.

ಅಪಘಾತಕ್ಕೆ ಕಾರಣವಾದ ಖಾಸಗಿ ಬಸ್ಸಿನ ಚಾಲಕನ್ನು ಇದೀಗ ಪೊಲೀಸರು ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ. ಹದಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.