ಕೆಪಿಎಸ್ಸಿ ಸಂತ್ರಸ್ತರಿಗೆ ಆಶ್ವಾಸನೆಗಳ ಆಶಾಗೋಪುರ

ಬೆಂಗಳೂರು: ಕೆಪಿಎಸ್ಸಿ 2011ನೇ ಸಾಲಿನ ಕೆಎಎಸ್ ಅಧಿಸೂಚನೆ ರದ್ದುಗೊಳಿಸಿರುವ ಸರ್ಕಾರದ ಕ್ರಮ ಖಂಡಿಸಿ ಸ್ವಾತಂತ್ರ್ಯ ಉದ್ಯಾನದಲ್ಲಿ ಅಭ್ಯರ್ಥಿಗಳು ನಡೆಸುತ್ತಿರುವ ಪ್ರತಿಭಟನೆ 23ನೇ ದಿನಕ್ಕೆ ಕಾಲಿಟ್ಟಿದೆ.
ಭಾನುವಾರ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ್ದ ಮಾಜಿ ಪ್ರಧಾನಿ ದೇವೇಗೌಡರ ಎದುರು ಮಹಿಳಾ ಅಭ್ಯರ್ಥಿಗಳು ತಮ್ಮ ಕಷ್ಟ ಹೇಳಿಕೊಂಡು ಭಾವುಕರಾಗಿ ಕಣ್ಣೀರಿಟ್ಟರು. ಈ ವೇಳೆ ಗೌಡರೂ ಭಾವುಕರಾಗಿ ಕಣ್ಣೀರು ಸುರಿಸಿದರು.
ಸುಮಾರು ಅರ್ಧ ತಾಸು ಎಲ್ಲರ ಸಮಸ್ಯೆಗಳನ್ನು ಆಲಿಸಿ ಮಾತನಾಡಿ, ಭಾರತದ ಇತಿಹಾಸದಲ್ಲಿ ಇದೇ ಮೊದಲು ಬಾರಿ ನೇಮಕ ರದ್ದುಗೊಳಿಸುವ ನಿರ್ಧಾರವನ್ನು ರಾಜ್ಯ ಸರ್ಕಾರ ಕೈಗೊಂಡಿದೆ. ಈ ಮೂಲಕ 362 ಅಭ್ಯರ್ಥಿಗಳ ಭವಿಷ್ಯದೊಂದಿಗೆ ಸರ್ಕಾರ ಚೆಲ್ಲಾಟವಾಡುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು . ಕೆಪಿಎಸ್ಸಿ ಬೆಳವಣಿಗೆಗಳನ್ನು ಗಮನಿಸುತ್ತಿದ್ದೇನೆ. ಅಧಿಸೂಚನೆ ರದ್ದುಗೊಳಿಸಿರುವುದು ಮನಸ್ಸಿಗೆ ಬೇಸರ ತರಿಸಿದೆ. ಪ್ರಕರಣದಲ್ಲಿ ರಾಜಕೀಯ ಬೆರೆಸಬಾರದು ಎಂದರು.
ಸದನದಲ್ಲಿ ಕೇಳಲಿ, ಅಲ್ಲೇ ಹೇಳುವೆ
ಕುಮಾರಸ್ವಾಮಿಗೆ ಮಾಡುವುದಕ್ಕೆ ಕೆಲಸವಿಲ್ಲ. ಯಾವುದಾದರೊಂದು ವಿಚಾರ ಇಟ್ಟುಕೊಂಡು ಬಹಿರಂಗ ಚರ್ಚೆಗೆ ಬನ್ನಿ ಎಂದು ಹೇಳುತ್ತಾರೆ. ಉಪಚುನಾವಣೆ ಇರುವುದರಿಂದ ಈಗಂತೂ ನಮಗೆ ಅವರೊಂದಿಗೆ ಚರ್ಚೆ ಮಾಡಲು ಪುರಸೊತ್ತಿಲ್ಲ. ಕೆಪಿಎಸ್ಸಿ ಕುರಿತು ಏನಾದರೂ ಕೇಳುವುದಿದ್ದರೆ ಸದನದಲ್ಲಿ ಕೇಳಲಿ. ಅದಕ್ಕೆ ಸದನದಲ್ಲಿಯೇ ಉತ್ತರಿಸುತ್ತೇನೆ.
-ಸಿದ್ದರಾಮಯ್ಯ, ಮುಖ್ಯಮಂತ್ರಿ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


