ದೇವಾಲಯದ ಮೇಲೆ ದಾಳಿ: ಹಿಂದೂ ಸಂಘಟನೆಗಳಿಂದ ಕ್ರಮಕ್ಕೆ ಆಗ್ರಹ
ಬೆಂಗಳೂರು: ಅರ್ಕೇಶ್ವರ ದೇವಾಲಯಕ್ಕೆ ನುಗ್ಗಿ ದಾಂಧಲೆ ನಡೆಸಿ ಧಾರ್ಮಿಕ ಸಂಸ್ಕೃತಿಗೆ ದಕ್ಕೆ ತಂದವರನ್ನು ಬಂಧಿಸಿ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಅಖಿಲ ಭಾರತ ಹಿಂದೂ ಮಹಾಸಭಾ ಸಂಘಟನೆ ಆಗ್ರಹಿಸಿದೆ.
ಈ ಕುರಿತು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ, ಅಖಿಲ ಭಾರತ ಹಿಂದೂ ಮಹಾಸಭಾ ಜಿಲ್ಲಾಧ್ಯಕ್ಷ ರವಿ ಮಗರ್, ರಾಮನಗರದ ಅರ್ಕೇಶ್ವರ ದೇವಾಲಯಕ್ಕೆ ಮುಸ್ಲಿಂ ಸಮುದಾಯಕ್ಕೆ ಸೇರಿದ್ದ ರೆಹಮಾನ್ ಎಂಬ ಯುವಕ ನುಗ್ಗಿ ಮಾಂಸದ ತುಂಡುಗಳನ್ನು ಎಸೆದು, ದೇವಾಲಯವನ್ನು ಧ್ವಂಸಗೊಳಿಸಿದ್ದಲ್ಲದೇ, ದೇವಸ್ಥಾನ ಅರ್ಚಕರ ಮೇಲೂ ಹಲ್ಲೆ ನಡೆಸಿ ಧಾರ್ಮಿಕ ಸಂಸ್ಕೃತಿಗೆ ದಕ್ಕೆತಂದು ಕೋಮುಗಲಭೆ ಸೃಷ್ಠಿಸಿದ್ದಾನೆ ಎಂದು ಆರೋಪಿಸಿದರು.
ಶಾಂತಿ ಸೌಹಾರ್ದ ಸಭೆಗಳ ನಾಟಕವಾಡಿ ಹಿಂದೂ ಸಮುದಾಯಗಳ ಬಾಯಿ ಮುಚ್ಚಿಸುತ್ತಿರುವ ಸರ್ಕಾರ, ಇಂತಹ ಕೋಮು ಗಲಭೆ ಸೃಷ್ಠಿಸುತ್ತಿರುವುದರ ವಿರುದ್ದ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕೂಡಲೇ ಕಠಿಣ ಕ್ರಮ ತೆಗೆದುಕೊಳ್ಳಬೇಕು. ಇಲ್ಲದೇ ಹೋದರೆ ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಉಗ್ರ ಹೋರಾಟ ಮಾಡಲಾಗುತ್ತದೆ ಎಂದು ಸರ್ಕಾರಕ್ಕೆ ಎಚ್ಚರಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

