ಕೆಪಿಎಸ್‌ಸಿ ಅಕ್ರಮ: 1998, 99, 2004ರ ಭ್ರಷ್ಟರ ವಿರುದ್ದವೂ ಕ್ರಮಕ್ಕೆ ಆಪ್ ಆಗ್ರಹ

ಬೆಂಗಳೂರು: 2011ನೇ ಸಾಲಿನ ಕೆಪಿಎಸ್‌ಸಿ ಗೆಜೆಟೆಡ್ ಪ್ರೊಬೆಷನರಿ ನೇಮಕಾತಿ ಪಟ್ಟಿಯನ್ನು ರದ್ದುಗೊಳಿಸಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿರುವ ಆಮ್ ಆದ್ಮಿ ಪಕ್ಷ 1998, 99, 2004ರಲ್ಲಿ ಅಕ್ರಮವಾಗಿ ಆಯ್ಕೆಯಾಗಿರುವ ಅಧಿಕಾರಿಗಳ ವಿರುದ್ದವೂ ಕ್ರಮ ತೆಗೆದುಕೊಳ್ಳಬೇಕೆಂದು ಒತ್ತಾಯಿಸಿದೆ.
ಈ ಕುರಿತು ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆಮ್ ಆದ್ಮಿ ಪಕ್ಷ ಕಾರ್ಯಕರ್ತೆ ಶಾಂತಲಾ ದಾಮ್ಳೆ, ಕೆಪಿಎಸ್‌ಸಿ ನೇಮಕಾತಿ ಪ್ರಕ್ರಿಯೆಯಲ್ಲಿ ನಡೆದಿರುವ ಭ್ರಷ್ಟಾಚಾರದಿಂದಾಗಿ ಸರ್ಕಾರ ಪಟ್ಟಿಯನ್ನೇ ರದ್ದು ಮಾಡಿರುವುದನ್ನು ನಾವು ಸ್ವಾಗತಿಸುತ್ತೇವೆ.
ಪಟ್ಟಿ ರದ್ದತಿಯಿಂದ ಕೇವಲ 50 ಮಂದಿ ಪ್ರಮಾಣಿಕ ಅಭ್ಯರ್ಥಿಗಳಿಗೆ ಅನ್ಯಾಯವಾಗಿರಬಹುದು. ಆದರೆ ಇಂದು ಸ್ವತಂತ್ರ್ಯ ಉದ್ಯಾನವನದಲ್ಲಿ ಪ್ರತಿಭಟನಾ ನಿರತರಾಗಿರುವ ಅನೇಕರು ಕೆಪಿಎಸ್‌ಸಿ ಅವ್ಯವಹಾರದಲ್ಲಿ ಭಾಗಿಯಾಗಿರುವವರೇ, ಆ 50 ಮಂದಿಗೆ ಆಗಿರುವ ಅನ್ಯಾಯ ಸರಿಪಡಿಸಲು ಮುಂದಾದರೆ ಸುಮಾರು 250 ಭ್ರಷ್ಟರಿಗೆ ಅವಕಾಶ ನೀಡಿದಂತಾಗುತ್ತದೆ. ಆದ್ದರಿಂದ ಸರ್ಕಾರ ತೆಗೆದುಕೊಂಡಿರುವ ನಿರ್ಧಾರ ಸರಿಯಾಗಿದೆ ಎಂದು ಹೇಳಿದರು.
ಪಟ್ಟಿ ರದ್ದು ಮಾಡಿರುವುದು ಸಂತಸದ ವಿಷಯ. ಆದರೆ ನಿಜವಾಗಿಯೂ ಮುಖ್ಯಮಂತ್ರಿ ಸಿದ್ದರಾಮಯ್ಯ ಭ್ರಷ್ಟಚಾರ ನಿರ್ಮೂಲನಕ್ಕೆ ಮುಂದಾಗಿರುವುದೇ ಆದರೆ 1998 ರಿಂದ 2004 ರಲ್ಲಿ ನಡೆದ ಕೆಪಿಎಸ್‌ಸಿ ನೇಮಕಾತಿ ಹಗರಣದಲ್ಲಿ ಭಾಗಿಯಾಗಿ, ಈಗ ಅಧಿಕಾರದಲ್ಲಿರುವ 324 ಅಧಿಕಾರಿಗಳ ವಿರುದ್ದ ಕಠಿಣ ಕ್ರಮ ತೆಗೆದುಕೊಳ್ಳಬೇಕು. ಆಗ ಮಾತ್ರ ಭ್ರಷ್ಟಚಾರ ನಿರ್ಮೂಲನೆಯಲ್ಲಿ ಸಿದ್ದು ಅವರಿಗೆ ಬದ್ಧತೆ ಇದೆ ಎಂದು ಹೇಳಬಹುದು ಎಂದು ಹೇಳಿದರು.
ನಂತರ ಮಾತನಾಡಿದ ಆಮ್ ಆದ್ಮಿ ಪಕ್ಷದ ಸದಸ್ಯ ರವಿಕೃಷ್ಣ ರೆಡ್ಡಿ ಕೆಪಿಎಸ್‌ಸಿ ನೇಮಕಾತಿ ಪಟ್ಟಿ ರದ್ದತಿಯನ್ನು ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆಗೆ ಪ್ರಚೋದನೆ ನೀಡಿ ಬೆಂಬಲ ನೀಡುತ್ತಿರುವ ರಾಜಕೀಯ ಪಕ್ಷದ ಸದಸ್ಯರು ಹಗರಣದಲ್ಲಿ ಭಾಗಿಯಾಗಿರುವವರೇ, ಪ್ರತಿಭಟನಾಕಾರರ ನೋವುಗಳನ್ನೇ ಅಸ್ತ್ರವಾಗಿಟ್ಟುಕೊಂಡು ಜನರನ್ನು ಹುರಿದುಂಬಿಸಲು ಭಾವನಾತ್ಮಕವಾದ ಬಾಣ ಬಿಡಲು ಪ್ರಯತ್ನಿಸುತ್ತಿದ್ದಾರೆ. ಇಂತಹ ನಾಟಕದಲ್ಲಿ ಭಾಗಿಯಾಗಲು ಮುಂದಾಗಿರುವ ಹೆಚ್.ಡಿ.ಕುಮಾರಸ್ವಾಮಿಯವರನ್ನು ಪಕ್ಷ ಖಂಡಿಸುತ್ತದೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


