ಯುವತಿ ಮೇಲೆ ಗ್ಯಾಂಗ್ ರೇಪ್ ಪ್ರಿಯಕರ, ಸಹಚರರಿಂದಲೇ ಕುಕೃತ್ಯ

ಬೆಂಗಳೂರು: ಕೆ.ಜಿ.ಹಳ್ಳಿಯಲ್ಲಿ ಶನಿವಾರ ರಾತ್ರಿ ಸ್ನೇಹಿತೆಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದ ದುಷ್ಕರ್ಮಿಯೊಬ್ಬ ಸ್ನೇಹಿತರೊಂದಿಗೆ ಸೇರಿ ಆಕೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ.
ಈ ಸಂಬಂಧ ಯುವತಿ ಜೆ.ಸಿ.ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾಳೆ. ದೂರಿನ ಆಧಾರದ ಮೇಲೆ ಜೆ.ಸಿನಗರ ಪೊಲೀಸರು ದೀಪು.ವಿಕ್ಕಿ ಹಾಗೂ ಕಾರ್ತಿಕ್ ಎಂಬುವರನ್ನು ಬಂಧಿಸಿದ್ದಾರೆ. ಆಕೆಯ ಪ್ರಿಯಕರ ಪ್ರಭು ಹಾಗೂ ಕೊಂಗ ಎಂಬುವರು ತಲೆಮರೆಸಿಕೊಂಡಿದ್ದಾರೆ.
ವಿವರ: ಜೆ.ಸಿ.ನಗರದಲ್ಲಿ ವಾಸವಿರುವ ರಮ್ಯಾ ( ಹೆಸರು ಬದಲಿಸಲಾಗಿದೆ) ಖಾಸಗಿ ಸಂಸ್ಥೆಯೊಂದರಲ್ಲಿ ಡಿಟಿಪಿ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದಳು. ವಿಕ್ಕಿ ಎಂಬಾತ ಈಕೆಯನ್ನು ಪ್ರೀತಿಸುತ್ತಿದ್ದ ಎನ್ನಲಾಗಿದೆ. ಶನಿವಾರ ರಾತ್ರಿ 9 ಗಂಟೆಗೆ ಕೆಲಸ ಮುಗಿಸಿ ರಮ್ಯಾ ಮನೆಗೆ ಹೋಗುತ್ತಿದ್ದಳು. ಆಗ ಕರೆ ಮಾಡಿದ ವಿಕ್ಕಿ, ಪಾರ್ಟಿ ಕೊಡಿಸುವುದಾಗಿ ಕಾಡುಗೊಂಡನಹಳ್ಳಿ ಶಾಂಪೂರ ರಸ್ತೆ ರೈಲ್ವೆ ಗೇಟ್ ಬಳಿ ಬರಲು ಹೇಳಿದ್ದಾನೆ. ಅಲ್ಲಿಗೆ ದ್ವಿಚಕ್ರ ವಾಹನದಲ್ಲಿ ತೆರಳಿದ್ದ ಯುವತಿಯನ್ನು ಸ್ನೇಹಿತರೊಂದಿಗೆ ಬಲವಂತವಾಗಿ ಆಟೋದಲ್ಲಿ ಅಪಹರಿಸಿದ್ದಾರೆ.
ದೇವರ ಜೀವನಹಳ್ಳಿ ಬಳಿಯ ಹಳೇ ಕಟ್ಟಡಕ್ಕೆ ಕರೆದೊಯ್ದು ಯುವತಿಗೆ ಬಲವಂತವಾಗಿ ಮದ್ಯ ಹಾಗೂ ಗಾಂಜಾ ಸೇವಿಸಿಸುವಂತೆ ಒತ್ತಾಯಿಸಿದ್ದಾನೆ. ಅದರಂತೆ, ನಡೆದುಕೊಂಡ ಪ್ರಜ್ಞೆ ಕಳೆಕೊಂಡ ಯುವತಿ ಮೇಲೆ ವಿಕ್ಕಿ ಸೇರಿದಂತೆ ಐವರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ನಂತರ ಆಟೋದಲ್ಲೇ ಯುವತಿಯ ಜೆ.ಸಿ ನಗರ ಮನೆ ಬಳಿ ಬಿಟ್ಟು ಹೋಗಿದ್ದಾರೆ. ಅಸ್ವಸ್ಥಗೊಂಡಿದ್ದ ರಮ್ಯಾಳನ್ನು ವಿಚಾರಿಸಿದ ಕುಟುಂಬದವರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ.ತಪಾಸಣೆ ವೇಳೆ ವೈದ್ಯರು ರಮ್ಯಾಳ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂದು ಹೇಳಿದ್ದಾರೆ.
ಹೀಗಾಗಿ ರಮ್ಯಾ ಸಹೋದರಿ ಜತೆ ಭಾನುವಾರ ಸಂಜೆ ಜೆ.ಸಿ ನಗರ ಠಾಣೆಗೆ ತೆರಳಿ ದೂರು ನೀಡಿದ್ದಾರೆ. ಯುವತಿ ಕೊಟ್ಟ ಮಾಹಿತಿ ಮೇಲೆ ಶೋಧಕಾರ್ಯ ಆರಂಭಿಸಿದ ಪೋಲೀಸರು ಡಿ.ಜೆ.ಹಳ್ಳಿ ಮತ್ತು ಕೆ.ಜಿ.ಹಳ್ಳಿಯಲ್ಲಿ ವಿಕ್ಕಿ, ದೀಪು ಹಾಗೂ ಕಾರ್ತಿಕ್ ಎಂಬುವರನ್ನು ಬಂಧಿಸಿದ್ದಾರೆ. ತಲೆಮರೆಸಿಕೊಂಡಿರುವ ಇಬ್ಬರಿಗಾಗಿ ಹುಡುಕಾಟ ನಡೆದಿದೆ ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ ಅಲೋಕ್ ಕುಮಾರ್ ತಿಳಿಸಿದ್ದಾರೆ.
ಆರೋಪಿಗಳೆಲ್ಲಾ ಕಾರು ಚಾಲಕರು ಹಾಗೂ ಹೋಟೆಲ್ ಕಾರ್ಮಿಕರಾಗಿದ್ದು, ಮದ್ಯ ಮತ್ತು ಗಾಂಜಾ ವ್ಯಸನಿಗಳಾಗಿದ್ದರು. ಅತ್ಯಾಚಾರ ನಡೆಸುವ ಮುನ್ನಾ ಆರೋಪಿಗಳು ಗಾಂಜಾ ಸೇವಿಸಿದ್ದರೆಂದು ಯುವತಿ ದೂರಿನಲ್ಲಿ ತಿಳಿಸಿದ್ದಾಳೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


