ಜಿಲ್ಲಾ ಸುದ್ದಿ

ಶಿಕಾರಿಪುರದಲ್ಲಿ ಜೆಡಿಎಸ್‌ಗೆ ಶಕ್ತಿ ಇದೆ: ಸಿಎಂ

ಶಿಕಾರಿಪುರದಲ್ಲಿ ಜೆಡಿಎಸ್‌ಗೆ ಶಕ್ತಿ ಇದೆ: ಸಿಎಂ
Published On :

ಶಿಕಾರಿಪುರ: ಶಿಕಾರಿಪುರದಲ್ಲಿ ಜೆಡಿಎಸ್‌ಗೆ ಶಕ್ತಿ ಇದೆ ಅದನ್ನು ಉಪಚುನಾವಣೆಗಾಗಿ ಬಳಕೆ ಮಾಡಿಕೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ಶಿಕಾರಿಪುರ ವಿಧಾನಸಭಾ ಕ್ಷೇತ್ರ ಉಪಚುನಾವಣೆ ಹಿನ್ನೆಲೆ ನಾವು ಜೆಡಿಎಸ್ ಬೆಂಬಲ ಕೇಳಿದ್ದೇವೆ. ಶಿಕಾರಿಪುರದಲ್ಲಿ ಜೆಡಿಎಸ್‌ಗೆ ಶಕ್ತಿ ಇದೆ ಅದನ್ನು ಬಳಕೆ ಮಾಡಿಕೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.

ಈ ಸಂಬಂಧ ಶಿಕಾರಿಪುರ ಜೆಡಿಎಸ್ ಮುಖಂಡ ಹೆಚ್.ಟಿ ಬಳಿಗಾರ್ ಅವರೊಂದಿಗೆ ಮಾತುಕತೆ ನಡೆಸಲಾಗಿದೆ. ಬಳಿಗಾರ್ ಕಾಂಗ್ರೆಸ್ ಬೆಂಬಲಕ್ಕೆ ಒಪ್ಪಿಗೆ ಸೂಚಿಸಿದ್ದಾರೆ ಎಂದು ಅವರು ಹೇಳಿದ್ದಾರೆ.

ಸೊರಬ ಕ್ಷೇತ್ರದ ಶಾಸಕ ಮಧು ಬಂಗಾರಪ್ಪ ಜೊತೆ ದೂರವಾಣಿ ಮೂಲಕ ಚರ್ಚಿಸಿದ್ದೇನೆ. ಜೆಡಿಎಸ್ ನಾಯಕರು ಬೆಂಬಲಿಸುವುದಾಗಿ ತಿಳಿಸಿದ್ದಾರೆ ಎಂದ ಸಿಎಂ,  ಬಳ್ಳಾರಿ, ಶಿಕಾರಿಪುರದಲ್ಲಿ ಕಾಂಗ್ರೆಸ್‌ನಿಂದ ಯಾವುದೇ ಆಪರೇಷನ್ ಹಸ್ತ ನಡೆಯುತ್ತಿಲ್ಲ ಎಂದು ಸ್ಪಷ್ಟನೇ ನೀಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.