ಜಿಲ್ಲಾ ಸುದ್ದಿ

ಖಾಲಿ ಇರುವ ಸರ್ಕಾರಿ ಹುದ್ದೆ ತುಂಬುವಂತೆ ಆಗ್ರಹ

Published On :

ಬೆಂಗಳೂರು: ಖಾಲಿ ಇರುವ ಸರ್ಕಾರಿ ಹುದ್ದೆಗಳನ್ನು ಶೀಘ್ರದಲ್ಲೇ ಭರ್ತಿ ಮಾಡುವಂತೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಆಗ್ರಹಿಸಿದೆ.

ಈ ಕುರಿತು ಇಂದು ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಅಧ್ಯಕ್ಷ ಡಾ.ಎಲ್.ಭೈರಪ್ಪ ರಾಜ್ಯದಲ್ಲಿ ನಿರುದ್ಯೋಗಿಗಳ ಸಂಖ್ಯೆ ಹೆಚ್ಚುತ್ತಿದ್ದರು, ಸರ್ಕಾರ ಖಾಲಿ ಇರುವ ಸರ್ಕಾರ ನೌಕರಿಗಳನ್ನು ಭರ್ತಿಮಾಡಲು ವಿಳಂಬ ನೀತಿಯನ್ನು ಅನುಸರಿಸುತ್ತಿದೆ. ಈಗಾಗಲೇ ಕಾರ್ಯನಿರ್ವಹಿಸುತ್ತಿರುವ ನೌಕರರನ್ನು ಇದ್ದಕ್ಕಿದ್ದ ಹಾಗೆ ಸಮಯ, ಸಂಧರ್ಭವಿಲ್ಲದಂತೆ ವರ್ಗಾವಣೆ ಮಾಡುವ ಸರ್ಕಾರದ ಕೆಲಸ ಸರಿಯಲ್ಲ.

ವರ್ಗಾವಣೆ ಮಾಡುವ ಸರ್ಕಾರ ಮೇ, ಜೂನ್ ತಿಂಗಳ ಅಂತ್ಯದೊಳಗೆ ಮಾಡಬೇಕು ಇದರಿಂದ ನೌಕರರಿಗೆ ಅನುಕೂಲವಾಗುತ್ತದೆ. ಆದ್ದರಿಂದ ಸರ್ಕಾರ ವರ್ಗಾವಣೆ ಕುರಿತು ನಿರ್ಧಿಷ್ಟ ನೀತಿಯನ್ನು ಅನುಷ್ಠಾನಕ್ಕೆ ತರಬೇಕು ಮತ್ತು ವೇತನ ನೀಡುವುದರಲ್ಲೂ ಸರ್ಕಾರ ವಿಳಂಬ ನೀತಿಯನ್ನು ಅನುಸರಿಸುತ್ತಿರುವುದು ನೌಕರರ ದೊಡ್ಡ ಸಮಸ್ಯೆಯಾಗಿದ್ದು, ಸರ್ಕಾರ ನೌಕರರ ಸಮಸ್ಯೆಗಳ ಬಗ್ಗೆಯೂ ಆಲೋಚಿಸಬೇಕು ಎಂದು ಹೇಳಿದ್ದಾರೆ.

ಈ ಕುರಿತು ಆಗಸ್ಟ್ 22 ರಂದು ಮೈಸೂರಿನ ಮಹಾರಾಜ ಕಾಲೇಜು ಆವರಣದಲ್ಲಿ ವಿಚಾರಣ ಸಂಕಿರಣವನ್ನು ಹಮ್ಮಿಕೊಂಡಿರುವ ಸರ್ಕಾರಿ ನೌಕರ ಸಂಘ, ಎಲ್ಲಾ ಸರ್ಕಾರಿ ನೌಕರರು ವಿಚಾರ ಸಂಕಿರಣದಲ್ಲಿ ಭಾಗವಹಿಸುವಂತೆ  ಆಗಸ್ಟ್ 22 ಮತ್ತು 23ರಂದು ಎಲ್ಲಾ ಸರ್ಕಾರಿ ನೌಕರರಿಗೂ 2 ದಿನಗಳ ಕಾಲ ರಜೆಯನ್ನು ಘೋಷಿಸಿದೆ.ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಕಂದಾಯ ಸಚಿವ ವಿ.ಶ್ರೀನಿವಾಸ ಪ್ರಸಾದ್, ವಸತಿ ಸಚಿವ ಎಂ.ಹೆಚ್.ಅಂಬರೀಶ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಉಮಾಶ್ರೀ ಸೇರಿದಂತೆ ಮತ್ತಿತರರು ಉಪಸ್ಥಿತಿ ವಹಿಸಲಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.