ಎಂಇಎಸ್ ಸಂಘಟನೆಯನ್ನು ನಿಷೇಧ ಮಾಡುವಂತೆ ಆಗ್ರಹ
ಬೆಂಗಳೂರು: ಬೆಳಗಾವಿಯನ್ನು ಮಹಾರಾಷ್ಟ್ರಕ್ಕೆ ಸೇರಿಸುವ ಸಲುವಾಗಿ ರಾಜ್ಯದಲ್ಲಿ ಗುಂಡಾಗಳಂತೆ ವರ್ತಿಸುತ್ತಿರುವ ಎಂಇಎಸ್ ಸಂಘಟನೆಯನ್ನು ನಿಷೇಧಿಸಿ ಸಂಘಟನೆಯ ನಾಯಕರನ್ನು ಗಡಿಪಾರು ಮಾಡುವಂತೆ ಕನ್ನಡ ಜಾಗೃತಿ ವೇದಿಕೆ ಆಗ್ರಹಿಸಿದೆ.
ಈ ಕುರಿತು ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕನ್ನಡ ಜಾಗೃತಿ ವೇದಿಕೆ ರಾಜ್ಯಾಧ್ಯಕ್ಷ ಕೆ.ಮಂಜುನಾಥ ಬೆಳಗಾವಿಯಲ್ಲಿ ದಾಂಧಲೆ ನಡೆಸಿದ ಎಂಇಎಸ್ ಕಾರ್ಯಕರ್ತರು ಬೆಳಗಾವಿ ರಾಜಕೀಯ ಹಿಡಿತವನ್ನಿಟ್ಟುಕೊಂಡು ಬೆಳಗಾವಿ ಅಧಿವೇಶನದಲ್ಲಿ ಕರ್ನಾಟಕ ರಾಜ್ಯ ಸರ್ಕಾರದ ಶವಯಾತ್ರೆ ಮಾಡುವುದಾಗಿ ಬಹಿರಂಗವಾಗಿ ಹೇಳಿಕೆ ನೀಡಿ ಕನ್ನಡಿಗರ ಸ್ವಾಭಿಮಾನದ ಸಂಕೇತವಾಗಿರುವ ಕನ್ನಡ ಧ್ವಜವನ್ನು ಸುಟ್ಟು ಹಾಕಿ, ನಾಡ ದೇವತೆಯ ಶವಯಾತ್ರೆ ಮಾಡಿದ್ದರು. ಮುಂಬೈನಲ್ಲಿರುವ ಕನ್ನಡಿಗರ ಶವಯಾತ್ರೆ ಮಾಡುವುದಾಗಿ ತಿಳಿಸಿ ರಾಜ್ಯದಲ್ಲಿ ತಮ್ಮ ಗುಂಡಾ ವರ್ತನೆಯನ್ನು ಪ್ರದರ್ಶಿಸಿದ್ದಾರೆ.
ರಾಜ್ಯದ ಸ್ವಾಸ್ಥ್ಯವನ್ನು ಹಾಳುಮಾಡುತ್ತಿರುವ ಎಂಇಎಸ್ ಮತ್ತು ಶಿವಸೇನೆಯಂತಹ ಸಂಘಟನೆಗಳು ರಾಜ್ಯಕ್ಕೆ ಅವಶ್ಯಕವಿಲ್ಲ, ಇಂತಹ ಸಂಘಟನೆಗಳನ್ನು ರಾಜ್ಯ ಸರ್ಕಾರ ನಿಷೇಧಿಸಿ, ರಾಜ್ಯಕ್ಕೆ ಕೇಡು ಬಯಸುತ್ತಿರುವ ಇಂತಹ ಸಂಘಟನೆಗಳ ಅಧ್ಯಕ್ಷರನ್ನು ಗಡಿಪಾರು ಮಾಡುವಂತೆ ಮಂಜುನಾಥ್ ಆಗ್ರಹಿಸಿದ್ದಾರೆ.
ಇದೇ ವೇಳೆ ಕರ್ನಾಟಕದ ಸ್ವಾಭಿಮಾನಕ್ಕೆ ದಕ್ಕೆ ತಂದಿರುವ ಎಂಇಎಸ್ ಮತ್ತು ಶಿವಸೇನಾ ಸಂಘಟನೆಗಳನ್ನು ನಿಷೇಧಿಸುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿ ಆಗಸ್ಟ್ 16 ರಂದು ಬೆಳಿಗ್ಗೆ 11.30ಕ್ಕೆ ಟೌನ್ಹಾಲ್ನಿಂದ ಮುಖ್ಯಮಂತ್ರಿ ಮನೆಯವರೆಗೆ ಬೃಹತ್ ಪ್ರತಿಭಟನಾ ರ್ಯಾಲಿ ಕೈಗೊಂಡಿರುವ ಬಗ್ಗೆ ಕರೆ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

