ಜಿಲ್ಲಾ ಸುದ್ದಿ

ಮಾಣಿಕ್ ಶಾ ಪರೇಡ್ ಮೈದಾನದಲ್ಲಿ ಸಿಎಂ ಭಾಷಣ

ಮಾಣಿಕ್ ಶಾ ಪರೇಡ್ ಮೈದಾನದಲ್ಲಿ ಸಿಎಂ ಭಾಷಣ
Published On :

ಬೆಂಗಳೂರು: ಹೆಣ್ಣು ಮಕ್ಕಳು ನಿರ್ಭೀತಿಯಿಂದ ಓಡಾಡುವಂತಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಹೇಳಿದ್ದಾರೆ.

ನಗರದ ಮಾಣಿಕ್ ಷಾ ಪರೇಡ್ ಮೈದನಾದಲ್ಲಿ ನಡೆದ 68ನೇ ಸ್ವಾತಂತ್ರ್ಸೋತ್ವವ ಸಮಾರಂಭದಲ್ಲಿ ರಾಷ್ಟ್ರಧ್ವಜ ಹಾರಿಸಿ, ತೆರೆದ ಜೀಪ್‌ನಲ್ಲಿ ಒಂದು ಸುತ್ತು ಹಾಕಿ ಪೊಲೀಸ್ ಪಡೆಗಳಿಂದ ಗೌರವ ವಂದನೆ ಸ್ವೀಕರಿಸಿ ಶುಕ್ರವಾರ ಭಾಷಣ ಮಾಡಿದರು.

ರಾಷ್ಟ್ರದ ತ್ಯಾಗ, ಬಲಿದಾನ ನೆನಪಿಸಿಕೊಳ್ಳುವ ದಿನವಾದ ಇಂದು ಹಬ್ಬದ ಸಂಭ್ರಮ. ಆದರೆ, ಇನ್ನೂ ಹೆಣ್ಮುಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ನಿಲ್ಲದಿರುವುದು ವಿಷಾಧನೀಯ. ಸಮಾಜದಲ್ಲಿ ಹೆಣ್ಮು ಮಕ್ಕಳು ನಿರ್ಭೀತಿಯಿಂದ ಓಡಾಡುವಂತಾಗಬೇಕು. ರಾತ್ರಿ 12 ಗಂಟೆಯಲ್ಲೂ ಹೆಣ್ಣು ಮಗಳು ನಿರ್ಭೀತಿಯಿಂದ ಓಡಾಡಬೇಕು ಎಂಬುದು ರಾಷ್ಟ್ರಪಿತ ಮಹಾತ್ಮ ಗಾಂಧಿ ಆಶಯವಾಗಿತ್ತು. ಇದೇ ನಮ್ಮ ಸರ್ಕಾರದ ಮುಖ್ಯ ಉದ್ದೇಶವೂ ಆಗಿದೆ.

ಈ ನಿಟ್ಟಿನಲ್ಲಿ ಹೆಣ್ಣುಮಕ್ಕಳ ಸುರಕ್ಷತೆಗಾಗಿ ಸರ್ಕಾರ ಅನೇಕ ಕ್ರಮಕೈಗೊಂಡಿದೆ. ಹಾಗೇ, ಹೊಸ ನಿಯಮಗಳನ್ನು ಸರ್ಕಾರ ಜಾರಿ ತರುತ್ತಿದೆ ಎಂದು ಅವರು ಹೇಳಿದ್ದಾರೆ.

ಪ್ರತಿ ಶಾಲೆಯಲ್ಲೂ ಮಕ್ಕಳಿಗೆ ಸುರಕ್ಷಾ ಕ್ರಮ ಕೈಗೊಳ್ಳುವಂತೆ ಎಲ್ಲಾ ಶಾಲೆಗಳಿಗೆ ಸೂಚಿಸಲಾಗಿದೆ. ಮಕ್ಕಳು ಶಾಲೆಗೆ ಬಂದಾಗಿನಿಂದಲೂ ಸುರಕ್ಷಿತವಾಗಿ ಮನೆಗೆ ತಲುಪವರೆಗೆ ಮಕ್ಕಳ ಸುರಕ್ಷತೆ ವಹಿಸುವುದು ಶಾಲೆಗಳ ಜವಾಬ್ದಾರಿಯಾಗಿರುತ್ತದೆ.

ಮಹಿಳಾ ವಿಶೇಷಾ ಚಿಕಿತ್ಸೆ ಘಟಕಗಳನ್ನೂ ಸ್ಥಾಫಿಸಲಾಗುವುದು. ಹೆಣ್ಣಿನ ಮೇಲೆ ದೌಜನ್ಯ ತಡೆಯಬೇಕಾದರೆ ಸರ್ಕಾರದ ಜೊತೆಯಲ್ಲಿ ಸಮಾಜವು ಕೈಜೋಡಿಸಬೇಕಾಗಿದೆ ಎಂದು ಹೇಳಿದ್ದಾರೆ. ಸರ್ಕಾರ ಎಷ್ಟೇ ಕ್ರಮ ಕೈಗೊಂಡರು, ಆಕೆಯ ಮೇಲೆ ಮನೆಯ ಸದಸ್ಯರೇ, ಅಥವಾ ಪರಿಚಿತರೇ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ. ಹಾಗಾಗಿ, ಸರ್ಕಾರದ ಜೊತೆ ಸಮಾಜವು ಕೈಜೋಡಿಸಿದರೆ ಮಹಿಳೆ ಮೇಲಿನ ದೌರ್ಜನ್ಯವನ್ನು ತಡೆಗಟ್ಟಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

ರಾಜ್ಯದಲ್ಲಿ ನಿರೀಕ್ಷೆಯಂತೆ ಉತ್ತಮ ಮಳೆಯಾಗಿದೆ. ಅತಿವೃಷ್ಟಿ, ಅನಾವೃಷ್ಟಿ ಸಮರ್ಥವಾಗಿ ಎದುರಿಸಿದ್ದೇವೆ. ಸಮಾಜದ ಎಲ್ಲಾ ವರ್ಗಕ್ಕೂ ಸಮಾನತೆ ನೀಡಬೇಕು. ಅಧಿಕಾರ, ಸಮಾನತೆ ಸ್ವಾತಂತ್ರ್ಯ ಎಲ್ಲರಿಗೂ ಸಿಗಲಿ ಎಂಬುದು ಸರ್ಕಾರದ ಆಶಯವಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.