ಜಿಲ್ಲಾ ಸುದ್ದಿ

ಸಾಹಿತ್ಯ ಸಮ್ಮೇಳನ: ಹಾವೇರಿಗೆ ನೀಡಿದ್ದ ಆಹ್ವಾನ ವಾಪಸ್‌ಗೆ ನಿರ್ಧಾರ

ಸಾಹಿತ್ಯ ಸಮ್ಮೇಳನ: ಹಾವೇರಿಗೆ ನೀಡಿದ್ದ ಆಹ್ವಾನ ವಾಪಸ್‌ಗೆ ನಿರ್ಧಾರ
Published On :

ಧಾರವಾಡ: 81ನೇ ಸಾಹಿತ್ಯ ಸಮ್ಮೇಳನ ನಡೆಸುವ ಕುರಿತು ಹಾವೇರಿ ಜಿಲ್ಲೆಗೆ ನೀಡಲಾಗಿದ್ದ ಆಹ್ವಾನವನ್ನು ವಾಪಸ್ ಪಡೆಯಲು ನಿರ್ಧರಿಸಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಪುಂಡಲೀಕ ಹಾಲಂಬಿ ಅವರು ಹೇಳಿದ್ದಾರೆ.

81ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನ ನಡೆಸುವ ಕುರಿತು ಚರ್ಚಿಸಲು ಧಾರವಾಡದಲ್ಲಿ ಕರೆಯಲಾಗಿದ್ದ ಸಭೆಯಲ್ಲಿ ಸದಸ್ಯರು ಒಮ್ಮತದ ನಿರ್ಧಾರ ಕೈಗೊಳ್ಳುವಲ್ಲಿ ವಿಫಲವಾದ್ದರಿಂದ ಹಾವೇರಿಗೆ ನೀಡಲಾಗಿರುವ ಆಹ್ವಾನವನ್ನು ಹಿಂಪಡೆಯಲು ನಿರ್ಧರಿಸಲಾಗಿದೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಪುಂಡಲೀಕ ಹಾಲಂಬಿ ಅವರು, ಈ ನಿರ್ಧಾರವನ್ನು ಪ್ರಕಟಿಸಲು ನೋವಾಗುತ್ತಿದೆ. ಆದರೆ ಹೇಳಲೇ ಬೇಕಿದೆ. ಈ ಹಿಂದಿನ ಸಭೆಯಲ್ಲಿ 81ನೇ ಸಾಹಿತ್ಯ ಸಮ್ಮೇಳನವನ್ನು ಹಾವೇರಿಯಲ್ಲಿ ನಡೆಸಲು ತೀರ್ಮಾನಿಸಲಾಗಿತ್ತು.

ಆದರೆ ಸಾಹಿತ್ಯ ಸಮ್ಮೇಳನ ಆಯೋಜನೆಗೆ ಹಾವೇರಿ ಮತ್ತು ರಾಣೆಬೆನ್ನೂರು ನಡುವೆ ಗೊಂದಲ ಉಂಟಾಗಿದ್ದು, ಸಭೆಯಲ್ಲಿ ಈ ಬಗ್ಗೆ ಸದಸ್ಯರು ಒಮ್ಮತ ನಿರ್ಧಾರಕ್ಕೆ ಬಾರದ ಹಿನ್ನಲೆಯಲ್ಲಿ ಹಾವೇರಿಗೆ ನೀಡಿದ್ದ ಆಹ್ವಾನವನ್ನು ವಾಪಸ್ ಪಡೆಯಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು. ಅಲ್ಲದೆ ಮುಂದಿನ ಸೆಪ್ಟೆಂಬರ್‌ನಲ್ಲಿ ನಡೆಯಲಿರುವ ಸಭೆಯಲ್ಲಿ ನೂತನ ಸ್ಥಳದ ಕುರಿತು ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.

ಒಟ್ಟಾರೆ 81ನೇ ಸಾಹಿತ್ಯ ಸಮ್ಮೇಳನದ ಆಯೋಜನೆಯ ಖುಷಿಯಲ್ಲಿದ್ದ ಹಾವೇರಿ ಜನತೆಗೆ ಹಾಲಂಬಿ ಹೇಳಿಕೆ ಶಾಕ್ ನೀಡಿದ್ದು, ಸದಸ್ಯರ ಗೊಂದಲದಿಂದಾಗಿ ಸಾಹಿತ್ಯ ಸಮ್ಮೇಳನದ ಆತಿಥ್ಯದಿಂದ ಹಾವೇರಿ ವಂಚಿತವಾದಂತಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.