ಉಪ ಚುನಾವಣೆಯಲ್ಲೂ 'ಕೈ'ಗೆ ಜಯ: ಸಿದ್ದು

ಬೆಳಗಾವಿ: ಕಳೆದ ವಿಧಾನಸಭಾ ಚುನಾವಣೆ ವೇಳೆ ರಾಜ್ಯದ ಜನತೆಗೆ ನೀಡಿದ ಭರವಸೆಗಳನ್ನು ಈಡೇರಿಸಿದ್ದೇವೆ. ಹೀಗಾಗಿ ಉಪ ಚುನಾವಣೆಯಲ್ಲೂ ಕಾಂಗ್ರೆಸ್ ಜಯ ಗಳಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ರಾಜ್ಯದ ಮೂರು ವಿಧಾನಸಭೆಗೆ ಕ್ಷೇತ್ರಗಳಿಗೆ ನಡೆಯಲಿರುವ ಉಪ ಚುನಾವಣೆಯಲ್ಲು ಕಾಂಗ್ರೆಸ್ ಗೆಲುವು ಸಾಧಿಸುವುದು ಖಚಿತ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.
ಅಧಿಕಾರದ ಚುಕ್ಕಾಣಿ ಹಿಡಿದ 15 ತಿಂಗಳಲ್ಲಿ ಸರ್ಕಾರ ಉತ್ತಮ ಕೆಲಸಗಳನ್ನು ಮಾಡಿದ್ದು, ಜನರ ನಂಬಿಕೆಯನ್ನು ಉಳಿಸಿಕೊಂಡಿದ್ದೇವೆ. ಹೀಗಾಗಿ ಉಪ ಚುನಾವಣೆಯಲ್ಲಿ ಮತದಾರರು ಕೈ ಹಿಡಿಯಲಿದ್ದಾರೆ ಎಂದರು.
ಮೂರು ಕ್ಷೇತ್ರಗಳಲ್ಲೂ ಪ್ರಚಾರ ನಡೆಸಿದ್ದು, ಜನರು ಸಕಾರಾತ್ಮಕವಾಗಿ ಸ್ಪಂದಿಸುತ್ತಿದ್ದಾರೆ ಎಂದರು. ನಾವು ಅಧಿಕಾರಕ್ಕೆ ಬಂದ ಬಳಿಕ ಕೊಟ್ಟ ಮಾತಿನಂತೆ ನಡೆದುಕೊಂಡಿದ್ದೇವೆ ಎಂದರು.
ಗಡಿ ವಿಚಾರದಲ್ಲಿ ಮಹಾಜನ್ ವರದಿಯೇ ಅಂತಿಮವಾಗಿದ್ದು, ಬೆಳಗಾವಿ ಎಂದೆಂದಿಗೂ ಕರ್ನಾಟಕದ ಅವಿಭಾಜ್ಯ ಅಂಗವಾಗಿರುತ್ತದೆ. ಈ ವಿಚಾರದಲ್ಲಿ ಮಹಾರಾಷ್ಟ್ರ ಸರ್ಕಾರ ರಾಜಕೀಯ ಮಾಡುತ್ತಿದೆ ಎಂದು ಸಿದ್ದರಾಮಯ್ಯ ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


