ಜನಾರ್ಧನ ರೆಡ್ಡಿ ಮತ್ತು ಪತ್ನಿ ಅರುಣಾ ಆಸ್ತಿ ಮುಟ್ಟುಗೋಲು

ಬೆಂಗಳೂರು: ಗಣಿ ಧಣಿ ಜನಾರ್ಧನ ರೆಡ್ಡಿ ಅವರಿಗೆ ಸೇರಿದ ಸುಮಾರು 37.88 ಕೋಟಿ ರುಪಾಯಿ ಮೌಲ್ಯದ ಆಸ್ತಿಯನ್ನು ಕಾಳಧನ ನಿಗ್ರಹ ಪಡೆಯ ಅಧಿಕಾರಿಗಳು ಮುಟ್ಟುಗೋಲು ಹಾಕಿಕೊಂಡಿದ್ದಾರೆ.
ಜನಾರ್ಧನ ರೆಡ್ಡಿ ಮತ್ತು ಅವರ ಪತ್ನಿ ಅರುಣಾ ಅವರಿಗೆ ಸೇರಿದ ಬಳ್ಳಾರಿ ಮತ್ತು ಬೆಂಗಳೂರಿನ ಸುಮಾರು 4 ಕೋಟಿ ಮೌಲ್ಯದ ಭವ್ಯ ಬಂಗಲೆಗಳು ಸೇರಿದಂತೆ ಸುಮಾರು 37.88 ಕೋಟಿ ರುಪಾಯಿ ಮೌಲ್ಯದ ಆಸ್ತಿ ಮುಟ್ಟುಗೋಲು ಹಾಕಿಕೊಂಡಿದ್ದಾರೆ. ಇದರಲ್ಲಿ ಜನಾರ್ಧನ ರೆಡ್ಡಿ ಮತ್ತು ಅವರ ಪತ್ನಿ ಅರುಣಾಗೆ ಸೇರಿದ ವಿವಿಧ ಬ್ಯಾಂಕ್ಗಳ ಉಳಿತಾಯ ಖಾತೆ ಮತ್ತು ಚಾಲ್ತಿ ಖಾತೆಗಳ ನಿಶ್ಚಿತ ಠೇವಣಿಗಳನ್ನು ಅಧಿಕಾರಿಗಳು ಮುಟ್ಟುಗೋಲು ಹಾಕಿಕೊಂಡಿದ್ದಾರೆ.
ಆಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಕಾಳಧನ ನಿಗ್ರಹ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಕೆ.ರಾಮಸ್ವಾಮಿ ಅವರು ಜನಾರ್ಧನ ರೆಡ್ಡಿ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳುವಂತೆ ಆದೇಶ ನೀಡಿದ್ದರು. ಬಳ್ಳಾರಿಯ ಅಸೋಸಿಯೇಟೆಡ್ ಮೈನಿಂಗ್ ಕಂಪನಿಯ ಅಕ್ರಮ ವ್ಯವಹಾರಕ್ಕೆ ಸಂಬಂಧಿಸಿ ಜಾರಿ ನಿದೇರ್ಶನಲಾಯ 2012ರಲ್ಲೇ ರೆಡ್ಡಿ ಮತ್ತು ಪತ್ನಿ ಜಿ.ಲಕ್ಷ್ಮಿ ಅರುಣಾ ಮತ್ತಿತ್ತರ ವಿರುದ್ಧ ಪ್ರಕರಣ ದಾಖಲಿಸಿ ಕ್ರಮ ಆರಂಭಿಸಿತ್ತು.
ಅಕ್ರಮ ಗಣಿಗಾರಿಕೆ ಸಂಬಂಧ ಜನಾರ್ಧನ ರೆಡ್ಡಿ ವಿರುದ್ಧ ಆಂಧ್ರ ಪ್ರದೇಶ ಮತ್ತು ಕರ್ನಾಟಕ ರಾಜ್ಯಗಳಲ್ಲಿ ಸಿಬಿಐ ತನಿಖೆ ನಡೆಯುತ್ತಿದ್ದು, 2012ರಲ್ಲಿ ರೆಡ್ಡಿ ಸಂಬಂಧಿಸಿದ ಸುಮಾರು 874 ಕೋಟಿ ಮೌಲ್ಯದ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿತ್ತು. ಪ್ರಸ್ತುತ ಅಕ್ರಮ ಗಣಿಗಾರಿಕೆ ಪ್ರಕರಣ ಮತ್ತು ಗಡಿ ಗುರುತು ನಾಶ ಪ್ರಕರಣಗಳು ಸಂಬಂಧಿಸಿದಂತೆ ಸಿಬಿಐ ಬಂಧನದಲ್ಲಿರುವ ಜನಾರ್ಧನರೆಡ್ಡಿ ಅವರನ್ನು ಹೈದರಾಬಾದಿನ ಚಂಚಲಗೂಡಕ್ಕೆ ಜೈಲಿನಲ್ಲಿ ಇರಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


