ಚಾಲಕ ತರಬೇತಿ ಪಡೆದ ವಿದ್ಯಾರ್ಥಿಗಳಿಗೆ ಉದ್ಯೋಗ ಖಾತರಿ: ಜಿಎಂ ಬಾಬು
ಬೆಂಗಳೂರು: ಸಮಾಜದಲ್ಲಿನ ಹಿಂದುಳಿದ ಜನರ ಶ್ರೇಯೋಭಿವೃದ್ಧಿಗಾಗಿ ಸಾರಥಿ ಡ್ರೈವಿಂಗ್ ಸಂಸ್ಥೆಯು ಚಾಲಕ ತರಬೇತಿ ಕೇಂದ್ರವನ್ನು ಆರಂಭಿಸಿದ್ದು, ಇಲ್ಲಿ ತರಬೇತಿ ಪಡೆದ ಎಲ್ಲಾ ಚಾಲಕರಿಗೂ ಉದ್ಯೋಗಾವಕಾಶ ನೀಡಲಾಗುವುದು ಎಂದು ಜಿ.ಎಂ. ಬಾಬು ಹೇಳಿದ್ದಾರೆ.
ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಾರಥಿ ಡ್ರೈವಿಂಗ್ ಸಂಸ್ಥೆಯ ಸಂಸ್ಥಾಪಕ ಜಿ.ಎಂ.ಬಾಬು, ಚಾಲಕರಿಗೆ ಸುಮಾರು 2 ತಿಂಗಳ ತರಬೇತಿ ನೀಡಲಾಗುವುದು. ತರಬೇತಿ ಪಡೆದ ಎಲ್ಲಾ ವಿದ್ಯಾರ್ಥಿಗಳಿಗೂ ಉದ್ಯೋಗದ ಭರವಸೆ ನೀಡಿದರು. ಅಲ್ಲದೆ ತಾರತಮ್ಯವಿಲ್ಲದೆ ಕೆಳವರ್ಗದವರು ಹಾಗೂ ಬಡತನ ರೇಖೆಗಿಂತ ಕೆಳಮಟ್ಟದಲ್ಲಿರುವ ಮೇಲ್ವರ್ಗದವರಿಗೂ ತರಬೇತಿ ನೀಡಲಾಗುವುದು ಎಂದರು. ತರಬೇತಿ ಕುರಿತಂತೆ ಹೆಚ್ಚಿನ ಮಾಹಿತಿ ಸಮಾರಂಭದಲ್ಲಿ ಬಿಡುಗಡೆ ಮಾಡುವ ಪ್ರಾಸ್‌ಪೆಕ್ಟಸ್‌ನಲ್ಲಿ ಸಿಗಲಿದೆ ಎಂದು ಹೇಳಿದರು.
ಸಮಾಜದಲ್ಲಿ ಸಾಕಷ್ಟು ಡ್ರೈವಿಂಗ್ ಸ್ಕೂಲ್‌ಗಳು ವಾಹನಗಳನ್ನು ಚಾಲನೆ ಮಾಡುವ ಬಗ್ಗೆಯಷ್ಟೇ ಹೇಳಿಕೊಡುತ್ತದೆಯೇ ವಿನಃ ಚಾಲನಾ ನಿಯಮಗಳನ್ನು ಹೇಳಿಕೊಡುತ್ತಿಲ್ಲ. ಈ ಕಾರಣದಿಂದಲೇ ರಸ್ತೆಗಳಲ್ಲಿ ಅಪಘಾತಗಳು ಹೆಚ್ಚಾಗುತ್ತಿವೆ. ಆದ್ದರಿಂದ ಇಂತಹ ಸಮಸ್ಯೆಗಳನ್ನು ದೂರ ಮಾಡುವ ಸಲುವಾಗಿ ಸಾರಥಿ ಡ್ರೈವಿಂಗ್ ಸಂಸ್ಥೆಯನ್ನು ನಿರ್ಮಿಸಲಾಗಿದೆ.
ಸಂಸ್ಥೆಯ ಪ್ರಾರಂಭೋತ್ಸವನ್ನು ಮಾಜಿ ಮುಖ್ಯಮಂತ್ರಿ ದೇವರಾಜು ಅರಸ್ ಅವರ ಜನ್ಮ ದಿನವಾಗಿರುವ ಆಗಸ್ಟ್ 20 ರಂದು ಬೆಳಿಗ್ಗೆ 10 ಗಂಟೆಗೆ ವಿಧಾನಸೌಧದಲ್ಲಿ ಆಯೋಜಿಸಲಾಗಿದೆ. ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಉದ್ಘಾಟಿಸಲಿದ್ದಾರೆ.
ಹೆಚ್ಹಿನ ಮಾಹಿತಿಗೆ: ದೂ.ಸಂಖ್ಯೆ: 080-23372299,23376437, ಮೊ.ಸಂ: 9844062199
mahadevanbabu@gmail.com.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

