ಜಿಲ್ಲಾ ಸುದ್ದಿ

ಆಗಸ್ಟ್ 22 ಕ್ಕೆ ಅಂತರಾಷ್ಟ್ರೀಯ ಕಿರುಚಿತ್ರೋತ್ಸವ

Published On :

ಬೆಂಗಳೂರು:  ಸುಚಿತ್ರ ಫಿಲಂ ಸೊಸೈಟಿಯು ಬೆಂಗಳೂರು ಅಂತರಾಷ್ಟ್ರೀಯ ಕಿರುಚಿತ್ರೋತ್ಸವವನ್ನು ಆಗಸ್ಟ್ 22 ರಿಂದ 24 ರವರೆಗೆ ಆಯೋಜಿಸಿದೆ.

ಈ ಕುರಿತು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕಲಾತ್ಮಕ ನಿರ್ದೇಶಕ ಆನಂದ್ ವರದರಾಜ್, ಕಿರುಚಿತ್ರ ಸ್ಪರ್ಧೆಯಲ್ಲಿ ಸುಮಾರು 300 ಚಿತ್ರಗಳು ಆಯ್ಕೆಯಾಗಿದ್ದು, ಈ ಬಾರಿ ಕಲ್ಪನಾತ್ಮಕ ಕಿರುಚಿತ್ರಗಳಿಗೆ ಮಾತ್ರ ಆದ್ಯತೆ ನೀಡಿದ್ದು, ಮುಂದಿನ ದಿನಗಳಲ್ಲಿ ವಿವಿಧ ಭಾಗಗಳಲ್ಲಿ ನಿರ್ಮಿತವಾದ ಕಿರುಚಿತ್ರಗಳಿಗೆ ಆದ್ಯತೆ ನೀಡಲಾಗುತ್ತದೆ ಎಂದು ತಿಳಿಸಿದರು.

ಸಮಾರಂಭದಲ್ಲಿ 40ಕ್ಕೂ ಹೆಚ್ಚು ದೇಶ ಹಾಗೂ ವಿದೇಶಿ ನಿರ್ದೇಶಕರು ಭಾಗವಹಿಸಲಿದ್ದು, ಸಮಾರಂಭದ ಮೊದಲ ದಿನ ಕನ್ನಡ ಚಿತ್ರರಂಗ ನಟ ಹಾಗೂ ನಿರ್ದೇಶಕ ರಕ್ಷಿತ್ ಶೆಟ್ಟಿ ಚಿತ್ರರಂಗದಲ್ಲಿನ ತಮ್ಮ ಅನುಭವಗಳನ್ನು ಹಂಚಿಕೊಳ್ಳಲಿದ್ದಾರೆ ಎಂದು ಹೇಳಿದರು.

ಕಿರುಚಿತ್ರದಲ್ಲಿ ಪಾಲ್ಗೊಳ್ಳಲಿಚ್ಚಿಸುವವರು ಈ ಕೆಳಕಂಡ ವಿಳಾಸಕ್ಕೆ ಭೇಟಿ ನೀಡಿ ಪಾಸ್‌ಗಳನ್ನು ಪಡೆದುಕೊಳ್ಳಬಹುದಾಗಿದೆ.

ಪಾಸ್ ವಿವರ: ವಿದ್ಯಾರ್ಥಿಗಳಿಗೆ 200 ರುಪಾಯಿ, ಸಾರ್ವಜನಿಕರಿಗೆ 300 ರುಪಾಯಿ

ಸ್ಥಳ: ಸುಚಿತ್ರ, ನಂ.36,
9ನೇ ಮುಖ್ಯರಸ್ತೆ, ಬಿ.ವಿ.ಕಾರಂತ್ ರಸ್ತೆ,
ಬನಶಂಕರಿ 2ನೇ ಹಂತ, ಬೆಂ-70
ದೂ.ಸಂ: 08026711785

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.