ಕೆಪಿಎಸ್ಸಿ: ದಿಗ್ವಿಜಯ್ವರೆಗೂ ದೂರು

ಬೆಂಗಳೂರು: ಕೆಪಿಎಸ್ಸಿ ಆಯ್ಕೆ ಪಟ್ಟಿ ರದ್ದು ಕ್ರಮದ ವಿರುದ್ಧ ಕಾಂಗ್ರೆಸ್ ವರಿಷ್ಠರಿಗೆ ದೂರು ನೀಡುವ ಪ್ರಯತ್ನಕ್ಕೆ ಚಾಲನೆ ದೊರೆತಿದೆ.
ಬೆಂಗಳೂರಿನಲ್ಲಿ ಆ.26ಕ್ಕೆ ನಡೆಯುವ ಕಾಂಗ್ರೆಸ್ ಸಮನ್ವಯ ಸಮಿತಿ ಸಭೆಗೆ ಆಗಮಿಸಲಿರುವ ರಾಜ್ಯ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್ಗೆ ದೂರು ನೀಡಲು ಪ್ರತಿಭಟನಾ ನಿರತ ಅಭ್ಯರ್ಥಿಗಳು ನಿರ್ಧರಿಸಿದ್ದಾರೆ. ಮಾತ್ರವಲ್ಲ ಕಾಂಗ್ರೆಸ್ನ ಕೆಲ ಮುಖಂಡರೂ ಈ ವಿಚಾರದ ವರದಿ ಒಪ್ಪಿಸಲು ನಿರ್ಧರಿಸಿದ್ದಾರೆ. ಮೂಲಗಳ ಪ್ರಕಾರ ಆಯ್ಕೆ ಪಟ್ಟಿ ರದ್ದತಿಗೆ ಎಲ್ಲ ಸಚಿವರ ಪೂರ್ಣ ಸಮ್ಮತಿ ಇರಲಿಲ್ಲ.
ವಿ.ಶ್ರೀನಿವಾಸ್ ಪ್ರಸಾದ್, ಎಚ್.ಕೆ.ಪಾಟೀಲ್ ಸೇರಿ ಹಲವರ ತಾತ್ವಿಕ ವಿರೋಧವೂ ಇತ್ತು.
ಧ್ವನಿಯ ಕೊರತೆ: ಇನ್ನೂ ಕೆಲ ಸಂಗತಿಗಳು ಸಭೆಯಲ್ಲಿ ಪ್ರಸ್ತಾಪವಾಗುವ ಸಾಧ್ಯತೆ ಇದೆ. ಆದರೆ ಅದಕ್ಕೆ ಸೂಕ್ತ ಧ್ವನಿಯ ಕೊರತೆ ಇದೆ. ಸಮನ್ವಯ ಸಮಿತಿಯಲ್ಲಿ ಡಾ.ಜಿ.ಪರಮೇಶ್ವರ, ಸಿದ್ದರಾಮಯ್ಯ, ಜಾರ್ಜ್, ಡಿಕೆಶಿ, ಎಐಸಿಸಿ ಕಾರ್ಯದರ್ಶಿ ಡಾ.ಚಲ್ಲಕುಮಾರ್ ಇದ್ದಾರೆ. ಇವರಲ್ಲಿ ಯಾರೂ ಆಕ್ಷೇಪ ಎತ್ತುವುದಕ್ಕೆ ಸಾಧ್ಯವಿಲ್ಲ. ಸಮಿತಿ ಸದಸ್ಯರಲ್ಲದ ಶಾಸಕರು, ಮುಖಂಡರು ಸಭೆಗೆ ಮುನ್ನ ಅಥವಾ ನಂತರ ವರದಿ ಒಪ್ಪಿಸಲು ಮುಂದಾಗಿದ್ದಾರೆನ್ನಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


