ಆ. 23ರಿಂದ ದಕ್ಷಿಣ ಭಾರತ ಯೋಗಾಸನ ಸ್ಪರ್ಧೆ

ಬೆಂಗಳೂರು: ಎಸ್ಜಿಎಸ್ ಅಂತರಾಷ್ಟ್ರೀಯ ಯೋಗ ಪ್ರತಿಷ್ಠಾನವು ಆಗಸ್ಟ್ 23 ರಂದು 11ನೇ ದಕ್ಷಿಣ ಭಾರತ ಯೋಗಾಸನ ಸ್ಪರ್ಧೆಯನ್ನು ನೆಲೆಗದರಹಳ್ಳಿಯ ನಿಸರ್ಗ ವಿದ್ಯಾವಾಹಿನಿ ಶಾಲೆಯಲ್ಲಿ ಹಮ್ಮಿಕೊಂಡಿದೆ.
ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ದಕ್ಷಿಣ ಭಾರತ ಸ್ಪರ್ಧಾಸಮಿತಿ ಪ್ರಧಾನ ಕಾರ್ಯದರ್ಶಿ ಆಚಾರ್ಯ ಎಂ. ನಿರಂಜನಮೂರ್ತಿ, ಯೋಗಾಸನ ಸ್ಪರ್ಧೆಯಲ್ಲಿ 8 ರಿಂದ 80ರ ವಯೋವುತಿಯವರು ಭಾಗವಹಿಸಬಹುದಾಗಿದೆ. ಇದರಲ್ಲಿ ಪುರುಷರಿಗೆ ಹಾಗೂ ಮಹಿಳೆಯರಿಗೆ ಪ್ರತ್ಯೇಕವಾದ ಸ್ಪರ್ಧೆಗಳನ್ನು ಏರ್ಪಡಿಸಲಾಗುವುದು ಎಂದರು.
ಸ್ಪರ್ಧೆಯಲ್ಲಿ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಕ್ರೀಡಾಪಟುಗಳು ಭಾಗವಹಿಸಲಿದ್ದು, ಸ್ಪರ್ಧೆಯಲ್ಲಿ ವಿಜೇತರಾದ ಯೋಗಪಟುಗಳನ್ನು ಸೆ.19 ರಿಂದ 21 ರವರೆಗೆ ಚೀನಾದ ಶಾಂಗೈನಲ್ಲಿ ನಡೆಯುವ ಅಂತರಾಷ್ಟ್ರೀಯ ಯೋಗಸ್ಪರ್ಧೆಗೆ ಆಯ್ಕೆ ಮಾಡಲಾಗುತ್ತದೆ ಎಂದು ತಿಳಿಸಿದರು.
ಆಗಸ್ಟ್ 23 ಮತ್ತು 24ರವರೆಗೆ ಈ ಸ್ಪರ್ಧೆ ನಡೆಯಲಿದ್ದು, ಕಾರ್ಯಕ್ರಮವನ್ನು ಸಿದ್ದಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿ ಅವರು ಉದ್ಘಾಟಿಸಲಿದ್ದಾರೆ. ದಾಸರಹಳ್ಳಿ ಕ್ಷೇತ್ರದ ಶಾಸಕ ಎಸ್.ಮುನಿರಾಜು ಪ್ರಾಥಮಿಕ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ ಸಾಮಾನ್ಯ ಕ್ರೀಡಾ ಪ್ರಾಧಿಕಾರಿಯಾದ ಎಚ್.ಎನ್.ವೆಂಕಟೇಶ್ ಸೇರಿದಂತೆ ಮತ್ತಿತರರು ಉಪಸ್ಥಿತತೆ ವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಚಲನ ಚಿತ್ರನಟ ಟೆನ್ನಿಸ್ಕೃಷ ಹಾಗೂ ನಿಸರ್ಗ ವಿದ್ಯಾವಾಹಿನಿ ಶಾಲೆಯ ಕಾರ್ಯದರ್ಶಿ ಕೆಂಪರಾಜು ಅಧ್ಯಕ್ಷತೆ ವಹಿಸಲಿದ್ದಾರೆ. ಸ್ಪರ್ಧೆಯಲ್ಲಿ ಭಾಗವಹಿಸಲಿಚ್ಛಿಸುವವರಿಗೆ ಪ್ರವೇಶ ಶುಲ್ಕವಿದ್ದು, ಸಾಮಾನ್ಯರಿಗೆ 300 ಹಾಗೂ ವಿದ್ಯಾರ್ಥಿಗಳಿಗೆ 200 ರುಪಾಯಿ ನಿಗದಿ ಮಾಡಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


